☞   ಶ್ರೇಷ್ಠ ವಚನಕಾರರು


ಶ್ರೇಷ್ಠ ವಚನಕಾರರು






ಬಸವಣ್ಣ (ಬಸವ,ಬಸವೇಶ್ವರ ) ಭಾರತದ 12 ನೇ ಶತಮಾನದ ಹಿಂದೂ ತತ್ವಜ್ಞಾನಿ, ಕಲಚೂರಿ ಅರಸ ಬಿಜ್ಜಳನ ಆಸ್ಥಾನದಲ್ಲಿ ಮಂತ್ರಿಯಾಗಿದ್ದರು ಮತ್ತು ಸಾಮಾಜಿಕ ಸುಧಾರಕರಾಗಿದ್ದರು., ಶಿವ ಕೇಂದ್ರೀಕೃತ ಭಕ್ತಿ ಚಳುವಳಿಯಲ್ಲಿ ಕನ್ನಡ ಕವಿ . ಬಸವಣ್ಣ ವಚನಗಳ ಮೂಲಕ ಸಾಮಾಜಿಕ ಅರಿವು ಹರಡಿದರು, ಬಸವಣ್ಣ ಲಿಂಗ , ಸಾಮಾಜಿಕ ತಾರತಮ್ಯ, ಮೂಢನಂಬಿಕೆಗಳು ನಿರಾಕರಿಸಿದರು.ಇಷ್ಟಲಿಂಗ ಹಾರವನ್ನು ಪರಿಚಯಿಸಿದರು (ಶಿವ ಲಿಂಗ) ಶಿವನ ಒಂದು ಭಕ್ತಿ ಒಂದು ನಿರಂತರ ಜ್ಞಾಪನೆ ಎಂದು. ಇದನ್ನು ಎಲ್ಲರು ಧರಿಸಿ ಪೂಜಿಸಬಹುದು. ತನ್ನ ಸಾಮ್ರಾಜ್ಯದ ಮುಖ್ಯಮಂತ್ರಿಯಾಗಿ, ಅವರು ಅನುಭವ ಮಂಟಪ (ಅಥವಾ, "ಆಧ್ಯಾತ್ಮಿಕ ಅನುಭವದ ಭವನ), ಇಲ್ಲಿ ಎಲ್ಲಾ ಸಾಮಾಜಿಕ-ಆರ್ಥಿಕ ಹಿನ್ನೆಲೆಯ ಪುರುಷ ಮತ್ತು ಮಹಿಳೆಯರು ಆಧ್ಯಾತ್ಮಿಕ ಮತ್ತು ಪ್ರಾಪಂಚಿಕ ಪ್ರಶ್ನೆಗಳನ್ನು ಮುಕ್ತವಾಗಿ ಚರ್ಚಿಸಲು ಸ್ವಾಗತಿಸಿತು.ಬಸವಣ್ಣನವರ ಜೊತೆ ೭೭೦ ಅಮರಗಣಂಗಳು ಇದ್ದರೆಂದು ಮತ್ತು ೧,೯೬,೦೦೦ ಶರಣರಿದ್ದರೆಂದು ಐತಿಹಾಸಿಕ ಪುರಾವೆಗಳಿವೆ..[೧][೨]  
ಸಾಂಪ್ರದಾಯಿಕ ದಂತಕಥೆಗಳು ಮತ್ತು ವಿದ್ವತ್ಪೂರ್ಣ ಗ್ರಂಥಗಳು ಲಿಂಗಾಯ ಸ್ಥಾಪಕ ಬಸವಣ್ಣ ಎಂದು ಉಲ್ಲೇಖಿಸುತ್ತವೆ . ಆದಾಗ್ಯೂ, ಆಧುನಿಕ ಕಲಾಚುರಿ ಶಾಸನಗಳಂತಹ ಐತಿಹಾಸಿಕ ಸಾಕ್ಷ್ಯವನ್ನು ಅವಲಂಬಿಸಿದೆ ಬಸವ ಕವಿ ತತ್ತ್ವಜ್ಞಾನಿಯಾಗಿದ್ದು, ಈಗಾಗಲೇ ಅಸ್ತಿತ್ವದಲ್ಲಿದ್ದ ಸಂಪ್ರದಾಯವನ್ನು ಸಂಸ್ಕರಿಸಿದರು ಮತ್ತು ಶಕ್ತಿಯನ್ನು ತುಂಬಿದರು ಎಂದು ಉಲ್ಲೇಖಿಸುತ್ತವೆ.ಕನ್ನಡ ಕವಿ ಹರಿಹರರಿಂದ ರಚಿತ (c.1180) ಬಸವರಾಜದೇವರ ರಗಳೆ (ಸಿ.ಎಸ್ .8080 ರಲ್ಲಿ 25 ವಿಭಾಗಗಳು ಲಭ್ಯವಿದೆ) ಸಾಮಾಜಿಕ ಸುಧಾರಕನ ಜೀವನದ ಬಗ್ಗೆ ಲಭ್ಯವಿರುವ ಅತ್ಯಂತ ಆರಂಭಿಕ ಖಾತೆಯಾಗಿದೆ ಮತ್ತು ಲೇಖಕನು ತನ್ನ ನಾಯಕನ ಸಮಕಾಲೀನ ಸಮೀಪದಲ್ಲಿದ್ದ ಕಾರಣದಿಂದಾಗಿ ಅದು ಮುಖ್ಯವೆಂದು ಪರಿಗಣಿಸಲಾಗಿದೆ.ಬಸವನ ಜೀವನ ಮತ್ತು ವಿಚಾರಗಳ ಸಂಪೂರ್ಣ ವಿವರ 13 ನೇ ಶತಮಾನದ ಪವಿತ್ರ ತೆಲುಗು ಪಠ್ಯ ಪಾಲ್ಕುರಿಕಿ ಸೋಮನಾಥರ ಬಸವ ಪುರಾಣದಲ್ಲಿ ನಿರೂಪಿಸಲ್ಪಟ್ಟಿದೆ. ಬಸವ ಸಾಹಿತ್ಯ ಕೃತಿಗಳು ಕನ್ನಡ ಭಾಷೆಯಲ್ಲಿ ವಚನ ಸಾಹಿತ್ಯವನ್ನು ಒಳಗೊಂಡಿದೆ.ಅವರನ್ನು ಭಕ್ತಿಭಂಡಾರಿ ಎಂದೂ ಕರೆಯುತ್ತಾರೆ (ಅಕ್ಷರಶಃ, ಭಕ್ತಿಯ ಖಜಾಂಚಿ),ಬಸವಣ್ಣ (ಹಿರಿಯ ಸಹೋದರ ಬಸವ) ಅಥವಾ ಬಸವೇಶ್ವರ .

ಬಾಲ್ಯ ಜೀವನ

ಬಸವಣ್ಣನವರು ೧೧೩೪ ರಲ್ಲಿ ಈಗಿನ ಬಿಜಾಪುರ ಜಿಲ್ಲೆಯಲ್ಲಿರುವ ಬಸವನ ಬಾಗೇವಾಡಿ ಗ್ರಾಮದಲ್ಲಿ (ಬಸವಣ್ಣನವರ ತಾಯಿಯ ತವರು ಮನೆಯಾದ ಇಂಗಳೇಶ್ವರ ಗ್ರಾಮದಲ್ಲಿ ಜನಿಸಿದರು ಎಂಬ ಪ್ರತೀತಿ ಇದೆ.), ಶ್ರೀ ಮಾದರಸ ಮತ್ತು ಮಾದಲಾಂಬಿಕೆ ದಂಪತಿಗಳಿಗೆ ಜನಿಸಿದರು. ಬಸವಣ್ಣ ಚಿಕ್ಕಂದಿನಿಂದಲೂ ವೈದಿಕ ಸಂಸ್ಕೃತಿಯ ಕರ್ಮಾಚರಣೆಗಳ ವಿರೋಧಿಯಾಗಿದ್ದರು. ಅಕ್ಕ ನಾಗಮ್ಮ ಮತ್ತು ಭಾವ ಶಿವಸ್ವಾಮಿಯ ಜೊತೆಯಲ್ಲಿ ಬಾಲ್ಯವನ್ನು ಕಳೆದರು. ಅವರ ೮ನೇ ವಯಸ್ಸಿನಲ್ಲಿ ಬ್ರಾಹ್ಮಣ ಸಂಪ್ರದಾಯದಂತೆ ಬಸವಣ್ಣನವರಿಗೆ ಜನಿವಾರ ಹಾಕಲು ಬಂದಾಗ, ಬಸವಣ್ಣನವರು ತನಗಿಂತ ಹಿರಿಯಳಾದ ಅಕ್ಕ ನಾಗಮ್ಮನಿಗೆ ಕೊಡಲು ಕೇಳುತ್ತಾರೆ, ಆಗ ಇದು ಪುರುಷರಿಗೆ ಮಾತ್ರ ಕೊಡುವಂತಹುದು ಆದ್ದರಿಂದ ಅಕ್ಕನಿಗೆ ಕೊಡಲು ಬರುವುದಿಲ್ಲ ಅಂತ ನುಡಿದಾಗ, ಬಸವಣ್ಣ ಪುರುಷ/ಮಹಿಳೆ ಅಸಮಾನತೆಯನ್ನು ವಿರೋಧಿಸಿ ಮನೆಯಿಂದ ನಿರ್ಗಮಿಸಿ ಕೂಡಲಸಂಗಮಕ್ಕೆ ಹೊರಡುತ್ತಾರೆ.[೩][೪]
ಬಸವಣ್ಣ ಹನ್ನೆರಡು ವರ್ಷಗಳ ಕಾಲ ಕುಂಡಲಸಂಗಮದಲ್ಲಿ ಹಿಂದೂ ದೇವಸ್ಥಾನದಲ್ಲಿ ಅಧ್ಯಯನ ಮಾಡುತ್ತಿದ್ದರು.ನಂತರ ಲಕುಲಿಶಾ-ಪಶುಪಾಟ ಸಂಪ್ರದಾಯದ ಒಂದು ಶೈವ ಕಲಿಕೆಯ ಕಲಿಕೆಯಲ್ಲಿ ಸಂಗಮೇಶ್ವರದಲ್ಲಿ ಮುಗಿಸಿದರು ಬಸವ ತನ್ನ ತಾಯಿಯ ಕಡೆಯಿಂದ ಸೋದರ ಸಂಬಂಧಿಯನ್ನು ಮದುವೆಯಾದ. ಅವರ ಪತ್ನಿ ಗಂಗಾಂಬಿಕೆ ಕಲಚುರಿ ರಾಜ ಬಿಜ್ಜಳ ಪ್ರಧಾನ ಮಂತ್ರಿಯ ಮಗಳು,

ಧಾರ್ಮಿಕ ಬೆಳವಣಿಗೆಗಳು

  • ಬಸವೇಶ್ವರರು ಹನ್ನೆರಡು ವರ್ಷಗಳ ಕಾಲ ಕೂಡಲ ಸಂಗಮದಲ್ಲಿ ಅಧ್ಯಯನ ಮಾಡುತ್ತಾ ಕಳೆದರು. ಅವರ ದೃಷ್ಟಿಯಲ್ಲಿ ದೇವನು ಒಬ್ಬ ಮತ್ತು ಅವನು ಮಾನವನಲ್ಲಿದ್ದಾನೆಯೇ ಹೊರತು ಗುಡಿ-ಗುಂಡಾರಗಳಲ್ಲಿ ಅಲ್ಲ. ಕೆಲಸ ಮಾಡಿ ಜೀವನ ನಡೆಸಬೇಕು, ಆಲಸಿ ಜೀವನ ಸಲ್ಲ. ಸುಳ್ಳು ಹೇಳುವುದು, ವಂಚಿಸುವುದು, ಕೊಲೆ-ಸುಲಿಗೆ ಮಾಡುವುದು, ಪ್ರಾಣಿಬಲಿ ನೀಡುವುದು, ಪರಧನ ಹರಣ, ಪರಸ್ತ್ರೀ ವ್ಯಾಮೋಹ ಹೊಂದುವುದು ಘೋರ ಅಪರಾಧ.
  • ಕೆಲಸದಲ್ಲಿ ಮೇಲು ಅಥವಾ ಕೀಳು ಎಂಬುದಿಲ್ಲ. ಪುರುಷನಂತೆ ಮಹಿಳೆಗೂ ವಿದ್ಯಾಭ್ಯಾಸದ ಮತ್ತು ತನ್ನ ಜೀವನವನ್ನು ರೂಪಿಸಿಕೊಳ್ಳುವ ಹಕ್ಕಿದೆ. ಹೀಗೆ ಸಮಾನತೆ, ಕಾಯಕ, ದಾಸೋಹ ತತ್ವಗಳನ್ನು ಸ್ವೀಕರಿಸುವ ಮತ್ತು ಆಚರಿಸುವ ಯಾರು ಬೇಕಾದರೂ ಶಿವಶರಣರಾಗ ಬಹುದು ಎಂದು ಬಸವಣ್ಣವರು ಸಾರಿದರು. ಪೊಳ್ಳು ದೇವರುಗಳನ್ನು ಸ್ತುತಿಸುತ್ತಿದ್ದ ಮತ್ತು ಪುರೋಹಿತಶಾಹಿಯಿಂದ ನಿರಂತರವಾಗಿ ವಂಚನೆಗೊಳಗಾಗುತ್ತಿದ್ದ ಜನತೆಗೆ ಬಸವಣ್ಣನವರು ಹೊಸ ಜೀವನ ನೀಡಿದರು.
  • ಜಾತಿ, ಮತ, ಲಿಂಗಗಳ ಭೇದವನ್ನು ತಿರಸ್ಕರಿಸಿದ ಬಸವಣ್ಣನವರು ಸಾಮಾಜಿಕ ಕ್ರಾಂತಿಗೆ ಕಾರಣವಾದರು. ಬಸವಣ್ಣನವರನ್ನು ಜಗಜ್ಯೋತಿ ಬಸವೇಶ್ವರ, ಕ್ರಾಂತಿಯೋಗಿ ಬಸವಣ್ಣ, ಭಕ್ತಿ ಭಂಡಾರಿ ಬಸವಣ್ಣ, ಮಹಾ ಮಾನವತಾ ವಾದಿ ಎಂದೂ ಕರೆಯಲಾಗುತ್ತದೆ. ಮಾನವಿಯತೆ. ಕಾಯಕ ನಿಷ್ಠೆ ಧರ್ಮದ ಬುನಾದಿಯಾಗಬೇಕು ಎಂದು ಬಲವಾಗಿ ನಂಬಿದ್ದರು.
  • ಬಸವಣ್ಣ ತಮ್ಮ ವಚನಗಳ ಮೂಲಕ ಕಾಯಕವೇ ಕೈಲಾಸ, ದಯವೇ ಧರ್ಮದ ಮೂಲವಯ್ಯ, ಅಯ್ಯ ಎಂದರೆ ಸ್ವರ್ಗ ಎಲವೂ ಎಂದರೆ ನರಕ ಎಂದು ಸಾರುವ ಮೂಲಕ ತಮ್ಮ ಮಾನವಾತಾ ವಾದಕ್ಕೆ ಸಾಹಿತ್ಯದ ಸ್ಪರ್ಶ ನೀಡಿದರು. ಕನ್ನಡ ಸಾಹಿತ್ಯಕ್ಕೆ ವಚನಗಳ ಮೂಲಕ ಅಪೂರ್ವ ಕೊಡುಗೆ ಅಪಾರ ಇದುವರೆಗೆ ಸುಮಾರು 1500 ವಚನಗಳನ್ನು ಸಂಗ್ರಹಿಸಿಡಲಾಗಿದೆ.
  • ಬಸವಣ್ಣನವರ ಪ್ರೇರಣೆಯಿಂದ ಹರಿಜನ ಮತ್ತು ಬ್ರಾಹ್ಮಣ ಕುಟುಂಬಗಳ ನಡುವೆ ನಡೆದ ಅನುಲೋಮ ವಿವಾಹ ಕಲ್ಯಾಣದ ಕ್ರಾಂತಿಗೆ ಮುನ್ನುಡಿಯಾಯಿತು. ಇವರು ಷಟ್ ಸ್ಥಲ ವಚನ, ಕಾಲಜ್ಞಾನ ವಚನ, ಮಂತ್ರಗೋಪ್ಯ, ಶಿಖಾರತ್ನ ವಚನ ಎಂಬ ಗ್ರಂಥಗಳನ್ನು ಬರೆದಿದ್ದಾರೆ. ಇವರನ್ನು ಕುರಿತಂತೆ ಕನ್ನಡ, ತೆಲುಗು, ಸಂಸ್ಕೃತ, ತಮಿಳು, ಮರಾಠಿ ಮತ್ತು ಹಿಂದಿ ಭಾಷೆಗಳಲ್ಲಿ ಪುರಾಣಗಳು ರಚನೆಯಾಗಿವೆ. ಬಾಗೇವಾಡಿ ಕಪ್ಪಡಿಸಂಗಮ, ಕಲ್ಯಾಣ ಪಟ್ಟಣಗಳಲ್ಲಿ ಇವರ ಸ್ಮಾರಕಗಳಿವೆ.
  • ಬೆಳಗಾವಿ ಜಿಲ್ಲೆಯ ಅರ್ಜುನವಾಡದ ಶಿಲಾಶಾಸನದಲ್ಲಿ ಉಲ್ಲೇಖಿತವಾಗಿರುವ ಸಂಗಣಬಸವ ಎಂಬ ಹೆಸರು ವಚನಕಾರ ಬಸವಣ್ಣನವರದ್ದೇ ಎಂದು ವಿದ್ವಾಂಸರು ಊಹಿಸಿದ್ದಾರೆ. "ನಮನ" ( ಪ್ರೊ.ಚಿದಾನಂದ ಮೂರ್ತಿ­ಯವರಂಥ ಹಿರಿ­ಯರೂ ಕೆಲವು ಗೌರವಾನ್ವಿತ ಸಂಪ್ರದಾಯ ಪರಾ­ಯಣ ಮಠಾಧಿಪತಿಗಳೂ ವೀರಶೈವ ಧರ್ಮದ ಪ್ರತ್ಯೇಕ ಅಸ್ತಿತ್ವ­ವನ್ನೊಪ್ಪದೆ ಅದು ಹಿಂದೂ ಧರ್ಮದ ಒಂದು ಭಾಗವೆಂದು ಘಂಟಾ­ಘೋಷವಾಗಿ ಸಾರಿದ್ದಾರೆ.

ಸಾಮಾಜಿಕ ಸಮಾನತೆ

ಅಣ್ಣ ಬಸವಣ್ಣ
ಇವನಾರವ ಇವನಾರವ ಇವನಾರವ ನೆಂದೆನಿಸದಿರಯ್ಯಾ
ಇವ ನಮ್ಮವ ಇವ ನಮ್ಮವ ಇವ ನಮ್ಮವ ನೆಂದೆನಿಸಯ್ಯಾ
ಕೂಡಲಸಂಗಮದೇವಾ ನಿಮ್ಮ ಮಹಾಮನೆಯ ಮಗನೆಂದೆನಿಸಯ್ಯ.
  • ಶೂದ್ರರಾದ ರೈತಾಪಿ ಜನರು, ಕಾಯಕಜೀವಿಗಳು, ಮಹಿಳೆಯರು ಮತ್ತು ಪಂಚಮರು ಈ ದೇಶದಲ್ಲಿ ಸಹಸ್ರಾರು ವರ್ಷಗಳಿಂದ ಮನುಧರ್ಮದ ಪುರುಷ ಪ್ರಧಾನವಾದ ವರ್ಣ ವ್ಯವಸ್ಥೆಯಿಂದಾಗಿ ಪಡಬಾರದ ಕಷ್ಟಪಟ್ಟಿದ್ದಾರೆ. ಮೇಲ್ವರ್ಗ ಮತ್ತು ಮೇಲ್ಜಾತಿಯ ಅನುತ್ಪಾದಕ ಪುರುಷರಿಗಾಗಿಯೇ ಬದುಕಿನ ಎಲ್ಲ ಸುಖಭೋಗಗಳು ಮೀಸಲಾಗಿದ್ದವು. ಇವರು ಮಾತ್ರ ಜನಿವಾರ ಧರಿಸುವ ಹಕ್ಕನ್ನು ಪಡೆದಿದ್ದರು.
  • ಜನಿವಾರ ಧರಿಸುವ ಬ್ರಾಹಣ ಓದಿರಬಹುದು, ಬರೆದಿರಬಹುದು ಆದರೆ ಕಾಯಕಜೀವಿಯಾಗಿ ಉತ್ಪಾದನೆಯಲ್ಲಿ ತೊಡಗಿಲ್ಲ. ಉತ್ಪಾದನೆಯ ಅನುಭವದಿಂದ ಬರುವ ಜ್ಞಾನವನ್ನು ಹಿಂದಿನ ಕಾಲದಲ್ಲಿ ಅವನೆಂದೂ ಪಡೆಯಲಿಲ್ಲ. ಕ್ಷತ್ರಿಯ ಕಾದಿರಬಹುದು ಆದರೆ ಉತ್ಪಾದನೆಯಲ್ಲಿ ತೊಡಗಲಿಲ್ಲ. ವೈಶ್ಯ ವಸ್ತುಗಳ ಮಾರಾಟ ಮಾಡಿರಬಹುದು, ಕೃಷಿಭೂಮಿಯ ಒಡೆಯನೂ ಆಗಿರಬಹುದು ಆದರೆ ಸ್ವತಃ ಉತ್ಪಾದನೆ ಮಾಡಲಿಲ್ಲ. ಈ ಮೂರೂ ವರ್ಣದವರಿಗೂ ಜನಿವಾರ ಇದೆ.
  • ಆದರೆ ಉತ್ಪಾದನೆಯಲ್ಲಿ ತೊಡಗಿದ ಕಾಯಕ ಜೀವಿಗಳಿಗೆ ಮತ್ತು ಪಂಚಮರಿಗೆ ಜನಿವಾರ ಇಲ್ಲ. ಯಾರಿಗೆ ಜನಿವಾರ ಇತ್ತೋ ಅವರು ದುಡಿಯದೆ ಸುಖ ಜೀವನವನ್ನು ಅನುಭವಿಸಿದರು. ಯಾರಿಗೆ ಜನಿವಾರ ಇದ್ದಿದ್ದಿಲ್ಲವೂ ಅವರು ದುಡಿದೂ ಕಷ್ಟ ಜೀವನವನ್ನು ಅನುಭವಿಸಿದರು. ಅಂತೆಯೆ ಬಸವಣ್ಣನವರು ಕಟ್ಟ ಕಡೆಗೆ ಮನುಷ್ಯನ ಕಡೆಗೆ ಬಂದರು ಈ ಅನ್ಯಾಯದ ವಿರುದ್ಧ ಸಿಡಿದೆದ್ದರು.
  • "ಜಾತಿ ಸಂಕರವಾದ ಬಳಿಕ ಕುಲವನರಸುವರೆ ?" ಎಂದು ಪ್ರಶ್ನಿಸಿ ಕಾಯಕಜೀವಿಗಳ ಕೇಂದ್ರಿತ ಶರಣ ಸಂಕುಲವನ್ನು ಸೃಷ್ಟಿಸಿದರು. ವಿವಿಧ ಕಾಯಕಗಳ ಶೂದ್ರರಿಗೆ, ಮಹಿಳೆಯರಿಗೆ ಮತ್ತು ಪಂಚಮರಿಗೆ ಮೊದಲ ಬಾರಿಗೆ ಶಿಕ್ಷಣ ನೀಡುವ ವ್ಯವಸ್ಥೆ ಮಾಡಿದರು. ಅವರೆಲ್ಲ ಅನುಭವ ಮಂಟಪದಲ್ಲಿ ತಮ್ಮ ಅನುಭವಗಳನ್ನು ಹಂಚಿಕೊಂಡರು.
  • ಭಾರತದಲ್ಲಿ ವಿವಿಧ ಜಾತಿಗಳ ಕಾಯಕಜೀವಿಗಳು ಮೊದಲ ಬಾರಿಗೆ ಜಾತಿಯನ್ನು ಮೀರಿ ಒಂದು ವರ್ಗವಾಗಿದ್ದು ಶರಣ ಸಂಕುಲದಲ್ಲಿ ಎಂಬುದು ಹೆಮ್ಮೆಯ ವಿಚಾರವಾಗಿದೆ. ಅವರೆಲ್ಲ ತಮ್ಮ ಕಾಯಕಗಳ ಹೆಸರುಗಳನ್ನು ಅಭಿಮಾನದಿಂದ ಉಳಿಸಿಕೊಂಡರು. ಆದರೆ ಆ ಕಾಯಕಗಳ ಒಳಗೆ ಇದ್ದ ಜಾತಿ ವಿಷವನ್ನು ಹೊರ ಹಾಕಿದರು. ಹೀಗೆ ಶರಣರಲ್ಲಿ ಸಮಗಾರ, ಮಾದಾರ, ಮೇದಾರ, ಡೋಹರ, ಅಂಬಿಗ ಮುಂತಾದ ಪದಗಳು ಜಾತಿ ಸೂತಕವನ್ನು ಕಳೆದುಕೊಂಡು ಕಾಯಕ ಸೂಚಕಗಳಾಗಿ ಉಳಿದವು.
BASAVANNA.png

ಸಂಕ್ಷಿಪ್ತ ಪರಿಚಯ

  • ವಿಶ್ವಗುರು ಬಸವಣ್ಣನವರು ಪರಮಾತ್ಮನ ಕರುಣೆಯ ಕಂದರಾಗಿ ಅವತರಿಸಿ, ಲೋಕಕ್ಕೆ ಹೊಸ ಧರ್ಮವೊಂದನ್ನು ಕೊಟ್ಟರು. ಇಂಗಳೇಶ್ವರ ಬಾಗೇ ವಾಡಿಯಲ್ಲಿ ಶೈವ ಬ್ರಾಹ್ಮಣ ದಂಪತಿಗಳಾದ ಮಾದರಸ-ಮಾದಲಾಂಬಿಕೆಯರ ಮಗನಾಗಿ ಆನಂದನಾಮ ಸಂವತ್ಸರದಲ್ಲಿ ವೈಶಾಖಮಾಸದ ಅಕ್ಷಯ ತೃತೀಯದಂದು (ದಿ. ಎಪ್ರಿಲ್ ೩೦ ೧೧೩೪) ರೋಹಿಣಿ ನಕ್ಷತ್ರದಲ್ಲಿ ಜನಿಸಿದರು.
  • ಇವರು ಯಾವುದೇ ಅಂಧಶ್ರದ್ಧೆ ಜಡ ಸಂಪ್ರದಾಯಗಳನ್ನೊಪ್ಪದ ಸತ್ಯಾನ್ವೇಷಕರಾಗಿ ಹೆತ್ತವರನ್ನು, ಬಂಧು ಬಾಂಧವರನ್ನು ತೊರೆದು ವಿದ್ಯಾಕಾಂಕ್ಷಿಯಾಗಿ ಕೂಡಲ ಸಂಗಮದ ಗುರುಕುಲಕ್ಕೆ ಬಂದರು. ಶಾಸ್ತ್ರಾಧ್ಯಯನ, ಯೋಗಾಭ್ಯಾಸಗಳಲ್ಲಿ ಬಾಲ್ಯವನ್ನು ಕಳೆದು ತಾರುಣ್ಯಕ್ಕೆ ಕಾಲಿರಿಸಿದರು. ಜನರಲ್ಲಿ ಮನೆ ಮಾಡಿಕೊಂಡಿದ್ದ ಮೌಢ್ಯತೆ, ಕಂದಾಚಾರ, ಜಾತೀಯತೆಗಳನ್ನು ಕಂಡು ಮನನೊಂದು ಪರಿಹಾರವನ್ನು ಅರಸತೊಡಗಿದರು.
  • ಒಂದು ದಿನ (ದಿ. ೧೪ನೇ ಜನವರಿ ೧೧೫೫) ಪರಮಾತ್ಮನ ದಿವ್ಯ ದರ್ಶನವಾಯಿತು; ಅನುಗ್ರಹಿತರಾದರು. ಬ್ರಹ್ಮ-ವಿಷ್ಣು-ಮಹೇಶ್ವರರೆಂಬ ತ್ರಿಮೂರ್ತಿಗಳನ್ನು ಮೀರಿದ ಸೃಷ್ಟಿಕರ್ತನೇ ಶ್ರೇಷ್ಠವೆಂದು ಘೋಷಿಸಿ ಆ ದೇವನನ್ನು ಲಿಂಗದೇವ ಎಂದು ಕರೆದರು. ನಿರಾಕಾರ ದೇವನಿಗೆ ಮನುಷ್ಯರ, ಪ್ರಾಣಿಗಳ ಆಕಾರ ಕೊಡುವುದು ಸರಿಯಲ್ಲ ಎಂಬ ಭಾವ ತಳೆದು, ದೇವನ ಸಾಕಾರ ಕೃತಿಯೇ ಬ್ರಹ್ಮಾಂಡ, ಇದು ಗೋಲಾಕಾರದಲ್ಲಿದೆ.
  • ಆದ್ದರಿಂದ ಲಿಂಗದೇವನನ್ನು ವಿಶ್ವದಾಕಾರದಲ್ಲಿ ಪೂಜಿಸುವುದು ಸರಿ ಎಂದು ಇಷ್ಟಲಿಂಗದ ಪರಿಕಲ್ಪನೆ ಕೊಟ್ಟರು. ದೇವರ ಕುರುಹಾದ ಇಷ್ಟಲಿಂಗವು ಮಾನವನ ಜಾತಿ, ವರ್ಣ, ವರ್ಗ ಭೇದಗಳನ್ನು ಕಳೆದು ಶರಣನನ್ನಾಗಿ ಮಾಡುವ ಸಾಧನವಾಗಬೇಕೆಂದು ಅದನ್ನು ಗಣ ಲಾಂಛನವನ್ನಾಗಿ ಮಾಡಿದರು. ಪರಮಾತ್ಮನ ದಿವ್ಯಾನುಭವ ಪಡೆದು, ನವ ಸಮಾಜ ನಿರ್ಮಾಣದ ರೂಪುರೇಷೆಗಳನ್ನು ತಮ್ಮ ಮನದಲ್ಲಿ ಹೊಂದಿ ಕಲ್ಯಾಣದ ಕಾರ್ಯಕ್ಷೇತ್ರವನ್ನು ಪ್ರವೇಶಿಸಿದರು.
  • ಸೋದರ ಮಾವನ ಮಗಳು ನೀಲಾ೦ಬಿಕೆಯನ್ನು ವಿವಾಹವಾಗಿ ಕರಣಿಕ ಕಾಯಕ ಕೈಗೊಂಡರು. ಅಲ್ಲಿಂದ ಮುಂದೆ ಭಂಡಾರಿಯಾಗಿ, ಪ್ರಧಾನಿ(ದಂಡನಾಯಕ)ಯಾಗಿ ಕಾಯಕ ನಿರ್ವಹಿಸಿದರು. ಅನುಭವ ಮಂಟಪ ಸ್ಥಾಪಿಸಿ ಧರ್ಮ ಪ್ರಚಾರ ಮಾಡಿದರು. ಎಲ್ಲರ ಮನೆ, ಮನಗಳ ಬಾಗಿಲಿಗೂ ಧರ್ಮಗಂಗೆ ಹರಿಯುವಂತೆ ಮಾಡಿದರು. ಇಷ್ಟಲಿಂಗವೆಂಬ ಗಣಲಾಂಛನವನ್ನು ಧರಿಸಿ ಲಿಂಗಾಯತರಾದ ಎಲ್ಲ ಶರಣ ಬಂಧುಗಳನ್ನು ಸಮಾನ ಭಾವದಿಂದ ಕಂಡರು.
  • ಹುಟ್ಟಿನಿಂದ ಬ್ರಾಹ್ಮಣರಾಗಿ, ಸಂಸ್ಕಾರದಿಂದ ಶರಣರಾದ ಮಧುವರಸರ ಮಗಳನ್ನು ಹುಟ್ಟಿನಿಂದ ಸಮಗಾರರಾಗಿ ಸಂಸ್ಕಾರದಿಂದ ಶರಣರಾದ ಹರಳಯ್ಯನವರ ಮಗನಿಗೆ ಕೊಟ್ಟು ವಿವಾಹ ಮಾಡಲು ಪ್ರೇರಣೆ ನೀಡಿದರು. ಈ ವಿವಾಹದಿಂದ ಸಂಪ್ರದಾಯವಾದಿಗಳು ಸಿಡಿದೆದ್ದು ಬಿಜ್ಜಳ ಮಹಾರಾಜನನ್ನು ಬಸವಣ್ಣನವರ ವಿರುದ್ದ ಪ್ರೇರೇಪಿಸಿ ಧರ್ಮಗುರು ಬಸವಣ್ಣನವರಿಗೆ ಗಡಿಪಾರು ಶಿಕ್ಷೆ ನೀಡುವಂತೆ ಮಾಡಿದರು.
  • ಧರ್ಮಪಿತರು ಗಡಿಪಾರು ಶಿಕ್ಷೆ ಸ್ವೀಕರಿಸಿ ಕಲ್ಯಾಣದಿಂದ ಹೊರಟ ನಂತರ ಹರಳಯ್ಯ, ಮಧುವರಸ, ಶೀಲವಂತರ ಬಂಧನವಾಗಿ ಅವರು ವರ್ಣಾಂತರ ವಿವಾಹದಲ್ಲಿ ಭಾಗಿಯಾದುದ ಕ್ಕಾಗಿ ಕಣ್ಣು ಕೀಳಿಸುವ ಶಿಕ್ಷೆ, ಎಳೆ ಹೊಟ್ಟೆ ಶಿಕ್ಷೆಗೆ ಒಳಗಾಗಿ ಪ್ರಾಣ ಬಿಡಬೇಕಾಯಿತು. ಜಾತಿವಾದಿಗಳು ವಚನ ಸಾಹಿತ್ಯವನ್ನು ನಾಶ ಮಾಡಲು ಸನ್ನದ್ಧರಾದಾಗ, ವೀರಮಾತೆ ಅಕ್ಕನಾಗಲಾಂಬಿಕೆ, ಚಿನ್ಮಯಜ್ಞಾನಿ ಚೆನ್ನಬಸವಣ್ಣ, ವೀರ ಗಣಾಚಾರಿ ಮಡಿವಾಳ ಮಾಚಯ್ಯನವರು ವೀರಾಗ್ರಣಿಗಳಾಗಿ ಕಾದಾಡಿ ವಚನ ವಾಙ್ಮಯ ನಿಧಿಯನ್ನು ಉಳಿಸಿಕೊಟ್ಟರು. ಅದಿಂದು ನಮ್ಮೆಲ್ಲರ, ಕರ್ನಾಟಕದ, ಭಾರತದ, ವಿಶ್ವದ ಹೆಮ್ಮೆಯ ಆಸ್ತಿಯಾಗಿದೆ.
  • ಇಂತಹ ಮಹಾನ್ ನೇತಾರರಾದ ಬಸವಣ್ಣನವರು ಲಿಂಗಾಯತ ಧರ್ಮದ ಸಂಸ್ಥಾಪಕರು; ಧರ್ಮಪಿತರು, ಮಂತ್ರಪುರುಷರು. ೬೨ ವರ್ಷ ೩ ತಿಂಗಳು ೨ ದಿವಸಗಳ ಕಾಲ ಇಳೆಯಲ್ಲಿ ಬಾಳಿದ ಬಸವಣ್ಣನವರು ನಳನಾಮ ಸಂವತ್ಸರದ ಶ್ರಾವಣ ಶುದ್ಧ ಪಂಚಮಿಯಂದು (ದಿ. ಜುಲೈ ೭ ೧೧೯೬) ಉರಿಯುಂಡ ಕರ್ಪುರದಂತೆ ಲಿಂಗೈಕ್ಯರಾದರು.
  • ಮಂಗಳವೇಡದ ರಾಜ ಬಿಜ್ಜಳನ ಆಸ್ಥಾನದಲ್ಲಿ ಮಂತ್ರಿಯಾದ ಬಸವಣ್ಣ ಹಲವಾರು ಜನಪರ ಮತ್ತು ಸಮಾಜ ಸುಧಾರಣೆ ಕ್ರಮಗಳನ್ನು ಕೈಗೊಂಡರು. ಕಾಯಕವೇ ಕೈಲಾಸ ವೆಂದು ಸಾರಿ, ಜನರನ್ನು ದುಡಿದು ಬದುಕುವ ಪಥದಲ್ಲಿ ಮುನ್ನೆಡೆಸಿದರು. ಜಾತಿ, ಲಿಂಗ, ಭಾಷೆ ಭೇದವಿಲ್ಲದೆ, ಶರಣ ತತ್ವದಲ್ಲಿ, ಸಮಾನತೆಯಲ್ಲಿ ಮತ್ತು ಕಾಯಕ ನಿಷ್ಠೆಯಲ್ಲಿ ನಂಬಿಕೆಯುಳ್ಳವರನ್ನು ನಿಜವಾದ " ಶಿವಶರಣ " ರೆಂದು ಕರೆದರು.
  • ದಂಪತಿಗಳನ್ನು ಮತ್ತು ನವ ವಧುವರಾರಾದ ಶೀಲವಂತ-ಲಾವಣ್ಯರನ್ನು ಆನೆಯ ಕಾಲಿಗೆ ಕಟ್ಟಿಸಿ, ಊರ ತುಂಬಾ ನೆಲದ ಮೇಲೆ ಎಳೆಸಿ ಕೊಲ್ಲುವ ಕ್ರೂರವಾದ ಎಳೆಹೂಟೆ ಶಿಕ್ಷೆಗೆ ಗುರಿಪಡಿಸಿ, ಕೊಲ್ಲುತ್ತಾನೆ. ಬಿಜ್ಜಳನ ಸೇನೆ ಶಿವಶರಣರನ್ನು ಕಂಡಲ್ಲಿ ಕೊಲ್ಲ ತೊಡಗಿ, ರಕ್ತದ ಹೊಳೆ ಹರಿಸುತ್ತದೆ. ಬಸವಣ್ಣನವರು ೧೧೯೬ ರಲ್ಲಿ ಕೂಡಲಸಂಗಮಕ್ಕೆ ಮರಳಿ ಅಲ್ಲೇ ಲಿಂಗೈಕ್ಯರಾದರು. ಅವರ ಸಮಾಧಿಯು ಅಲ್ಲಿಯೇ ಇದೆ. ಅವರ ಸಮಾಧಿಯನ್ನು ಕರ್ನಾಟಕ ಸರಕಾರದಿಂದ ಬಸವ ಸಾಗರ ಹಿನ್ನಿರಿನಲ್ಲಿ ಮುಳಗದಂತೆ ರಕ್ಷಿಸಿಲ್ಪಟ್ಟಿದೆ.

ಬಸವಣ್ಣನವರ ಕಾಯಕದ ಮಹತ್ವ ಮತ್ತು ಕಾಯಕ ಸಮಾನತೆ

"ದೇವ ಸಹಿತ ಮನೆಗೆ ಬಂದಡೆ
ಕಾಯಕವಾವುದೆಂದು ಬೆಸಗೊಂಡಡೆ
ನಿಮ್ಮಾಣೆ, ನಿಮ್ಮ ಪುರಾತರಾಣೆ! ತಲೆದಂಡ! ತಲೆದಂಡ! ತಲೆದಂಡ!
ಕೂಡಲಸಂಗಮದೇವಾ, ಭಕ್ತರಲ್ಲಿ ಕುಲವನರಿಸಿದಡೆ
ನಿಮ್ಮ ರಾಣಿವಾಸದಾಣೆ."
ಹೀಗೆ ಬಸವಣ್ಣನವರು ಭಕ್ತರಲ್ಲಿ ಸರ್ವಸಮಾನತೆಯನ್ನು ಕಾಣುತ್ತಾರೆ. ಶರಣರ ದೃಷ್ಟಿಯಲ್ಲಿ ಯಾವ ಕಾಯಕವೂ ಚಿಕ್ಕದಲ್ಲ ಅಥವಾ ದೊಡ್ಡದಲ್ಲ.
"ಮನೆ ನೋಡಾ ಬಡವರು, ಮನ ನೋಡಾ ಘನ
ಸೋಂಕಿನಲ್ಲಿ ಶುಚಿ; ಸರ್ವಾಂಗ ಕಲಿಗಳು.
ಪಸರಕ್ಕನುವಿಲ್ಲ; ಬಂದ ತತ್ಕಾಲಕ್ಕೆ ಉಂಟು.
ಕೂಡಲಸಂಗನ ಶರಣರು ಸ್ವತಂತ್ರ ಧೀರರು."
ಎಂದು ಬಸವಣ್ಣನವರು ಕಾಯಕಜೀವಿಗಳಾದ ಆಯ್ದಕ್ಕಿ ಲಕ್ಕಮ್ಮ ಮತ್ತು ಮಾರಯ್ಯನವರ ವ್ಯಕ್ತಿತ್ವವನ್ನು ಕುರಿತು ಕಣ್ಣಿಗೆ ಕಟ್ಟುವಂತೆ ಹೇಳಿದ್ದಾರೆ. ಅವರು ಘನಮನದವರೂ ಪರಿಶುದ್ಧ ರೂ ಸ್ವತಂತ್ರ ಧೀರರೂ ಆಗಿದ್ದಾರೆ.
"ಮನಶುದ್ಧವಿಲ್ಲದವಂಗೆ ದ್ರವ್ಯದ ಬಡತನವಲ್ಲದೆ
ಚಿತ್ತಶುದ್ಧದಲ್ಲಿ ಕಾಯಕವ ಮಾಡುವಲ್ಲಿ
ಸದ್ಭಕ್ತಂಗೆ ಎತ್ತ ನೋಡಿದತ್ತ ಲಕ್ಷ್ಮಿ ತಾನಾಗಿಪ್ಪಳು
ಮಾರಯ್ಯಪ್ರಿಯ ಅಮರೇಶ್ವರ ಲಿಂಗದ
ಸೇವೆಯುಳ್ಳನ್ನಕ್ಕರ"
ಎಂದು ಆಯ್ದಕ್ಕಿ ಲಕ್ಕಮ್ಮ ಕಾಯಕದ ಮಹತ್ವ ವ್ಯಕ್ತಪಡಿಸುತ್ತಾಳೆ.

"ಗುರುವಾದರೂ ಕಾಯಕದಿಂದಲೇ ಜೀವನ್ಮುಕ್ತಿ
ಲಿಂಗವಾದರೂ ಕಾಯಕದಿಂದಲೇ ಶಿಲೆಯ ಕುಲ ಹರಿವುದು
ಜಂಗಮವಾದರೂ ಕಾಯಕದಿಂದಲೇ ವೇಷ ಪಾಶ ಹರಿವುದು
ಇದು ಚೆನ್ನಬಸವಣ್ಣಪ್ರಿಯ ಚಂದೇಶ್ವರ ಲಿಂಗದ ಅರಿವು"
ಎಂದು ನುಲಿಯ ಚಂದಯ್ಯನವರು ಕಾಯಕದ ಮಹತ್ವವನ್ನು ಸಾರಿದ್ದಾರೆ. ಗುರು-ಲಿಂಗ-ಜಂಗಮಕ್ಕೆ ಕಾಯಕವೇ ಆಧಾರವಾಗಿದೆ ಎಂದು ಮನಂಬುಗುವಂತೆ ಹೇಳಿದ್ದಾರೆ.
"ಕಾಯಕದಲ್ಲಿ ನಿರತನಾದಡೆ
ಗುರುದರ್ಶನವಾದರೂ ಮರೆಯಬೇಕು
ಲಿಂಗಪೂಜೆಯಾದರೂ ಮರೆಯಬೇಕು
ಜಂಗಮ ಮುಂದೆ ನಿಂದಿದ್ದರೂ ಹಂಗು ಹರಿಯಬೇಕು
ಕಾಯಕವೇ ಕೈಲಾಸವಾದ ಕಾರಣ
ಅಮರೇಶ್ವರ ಲಿಂಗವಾಯಿತ್ತಾದರೂ ಕಾಯಕದೊಳಗು."
ಎಂದು ಆಯ್ದಕ್ಕಿ ಮಾರಯ್ಯ ಹೇಳುವಲ್ಲಿ ಕಾಯಕದ ಮಹತ್ವ ಪರಾಕಾಷ್ಠೆಯನ್ನು ತಲುಪುತ್ತದೆ.
"ಆವ ಕಾಯಕವಾದರೂ ಸ್ವಕಾಯಕವ ಮಾಡಿ
ಗುರು ಲಿಂಗ ಜಂಗಮದ ಮುಂದಿಟ್ಟು,
ಒಕ್ಕುದ ಹಾರೈಸಿ, ಮಿಕ್ಕುದ ಕೈಕೊಂಡು
ವ್ಯಾಧಿ ಬಂದಡೆ ನರಳು, ಬೇನೆ ಬಂದಡೆ ಒರಲು,
ಜೀವ ಹೋದಡೆ ಸಾಯಿ, ಇದಕ್ಕಾ ದೇವರ ಹಂಗೇಕೆ,
ಭಾಪು ಲದ್ದೆಯ ಸೋಮಾ."
ಹುಲ್ಲಿನ ಹೊರೆ ಹೊರುವ ಕಾಯಕದ ಸೋಮಯ್ಯ ಬದುಕೆಂಬುದು ಜೈವಿಕ ಪ್ರಕ್ರಿಯೆ ಎಂದು ಹೀಗೆ ಸೂಚಿಸುತ್ತಾನೆ. ಆ ಮೂಲಕ ಸಾವನ್ನು ಗೆಲ್ಲುತ್ತಾನೆ. ದೇವರ ಹಂಗಿಗೆ ಒಳಗಾಗದೆ ದೇವರನ್ನು ಆರಾಧಿಸುವ ಕ್ರಮವನ್ನು ನಮಗೆ ಕಲಿಸಿಕೊಟ್ಟಿದ್ದಾನೆ. ಜನಸಾಮಾನ್ಯರು ಶರಣಸಂಕುಲ ಸೇರಿ ಹೀಗೆ ಆತ್ಮಸ್ಥೈರ್ಯ ಪಡೆದು ಅಸಾಮಾನ್ಯರಾಗುವಲ್ಲಿ ಬಸವಣ್ಣನವರ ಅಪಾರ ಶ್ರಮ ಅಡಗಿದೆ. ಅಂತೆಯೆ ಶರಣರಿಗೆ ಬದುಕೆಂಬುದು ದುಃಖದ ಆಗರವೆಂದು ಅನಿಸುವುದಿಲ್ಲ. ಶರಣರು ಸವಾಲನ್ನು ಎದುರಿಸುತ್ತ ಆನಂದವನ್ನು ಅನುಭವಿಸುವವರು.
"ಕೃತ್ಯ ಕಾಯಕವಿಲ್ಲದವರು ಭಕ್ತರಲ್ಲ
ಸತ್ಯಶುದ್ಧವಿಲ್ಲದುದು ಕಾಯಕವಲ್ಲ
ಆಸೆಯೆಂಬುದು ಭವದ ಬೀಜ
ನಿರಾಸೆಯೆಂಬುದು ನಿತ್ಯಮುಕ್ತಿ
ಉರಿಲಿಂಗಪೆದ್ದಿಗಳರಸನಲ್ಲಿ ಸದರವಲ್ಲ ಕಾಣವ್ವಾ." ಎಂದು ಉರಿಲಿಂಗಪೆದ್ದಿಗಳ ಮುಣ್ಯಸ್ತ್ರೀ ಕಾಳವ್ವೆ ಹೇಳುತ್ತಾಳೆ.
ಕಾಯಕದಲ್ಲಿ ಮುಕ್ತಿ ಕಾಣುವ ಪರಿ ಇದು. ಒಬ್ಬ ದಲಿತ ಮಹಿಳೆ ಶರಣಸಂಕುಲದೊಳಗೆ ಬಂದು ಇಷ್ಟೊಂದು ಮಹತ್ತರವಾದ ವಿಚಾರವನ್ನೊಳಗೊಂಡ ವಚನರಚನೆ ಮಾಡಿದ್ದಾಳೆಂದರೆ ಬಸವಣ್ಣನವರು ಜಗತ್ತಿನಲ್ಲಿ ಮೊದಲಬಾರಿಗೆ ಯಾವ ರೀತಿ ವಯಸ್ಕರ ಶಿಕ್ಷಣದ ವ್ಯವಸ್ಥೆ ಮಾಡಿರಬಹುದು ಎಂಬುದರ ಕುರಿತು ಸಂಶೋಧನೆಯಾಗಬೇಕಿದೆ. ಶರಣರ ವಚನಗಳು ಮತ್ತು ತತ್ತ್ವ ಕೂಡ ಕಾಯಕದ ಉತ್ಪತ್ತಿಯಾಗಿವೆ ಎಂಬುದನ್ನು ಮರೆಯಬಾರದು. ವಚನಗಳು ಅನನ್ಯವಾಗಿರುವುದು ಇದೇ ಕಾರಣದಿಂದ. ಅನೇಕ ವಚನಕಾರರು ತಮ್ಮ ಕಾಯಕಗಳ ಅನುಭದ ಮೂಲಕವೇ ಅನುಭವಿಯಾಗಿದ್ದಾರೆ. ಅವರ ವಚನಗಳಲ್ಲಿನ ಪ್ರತಿಮೆ, ಪ್ರತೀಕ ಮತ್ತು ಸಂಕೇತಗಳು ಅವರವರ ಕಾಯಕಗಳ ಅನುಭವದ ಮೂಲಕವೇ ಸೃಷ್ಟಿಯಾಗಿವೆ. ಕಾಯಕದ ವಸ್ತುಗಳು ಹೀಗೆ ಕಾವ್ಯ ಪ್ರತಿಮೆಗಳಾಗುತ್ತಲೇ ತತ್ತ್ವವನ್ನು ಸ್ಫುರಿಸತೊಡಗುತ್ತವೆ.

ಬಸವಣ್ಣನವರ ಅಂಚೆ ಚೀಟಿ ಮತ್ತು ನಾಣ್ಯ

ಗುರು ಬಸವಣ್ಣನವರ ಚಿತ್ರವನ್ನೊಳಗೊಂಡ ಅಂಚೆಚೀಟಿಗಳು
ಗುರು ಬಸವಣ್ಣವರ ೮೦೦ನೇಯ ಲಿಂಗೈಕ್ಯ ದಿನಾಚರಣೆ ನಿಮಿತ್ತ ಭಾರತ ಸರಕಾರದ ಅಂಚೆ ಇಲಾಖೆಯು ೧೧ನೇ ಮೇ ೧೯೬೭ರಲ್ಲಿ ೧೫ ಪೈಸೆ ಮುಖ ಬೆಲೆಯುಳ್ಳ ಅಂಚೆ ಚೀಟಿ ಯನ್ನು ಮುದ್ರಿಸಿತು. ಮತ್ತೊಮ್ಮೆ ೧೯೯೭ರಲ್ಲಿ ೨ ರೂಪಾಯಿ ಮುಖ ಬೆಲೆಯುಳ್ಳ ಅಂಚೆ ಚೀಟಿಯನ್ನು ಮುದ್ರಿಸಿತು. ಗುರು ಬಸವಣ್ಣವರ ಭಾವಚಿತ್ರವುಳ್ಳ ೫ ರೂಪಾಯಿ ಮತ್ತು ೧೦೦ ರೂಪಾಯಿ ನಾಣ್ಯಗಳನ್ನು ಡಾ. ಮನಮೋಹನ ಸಿಂಗ್ ಅವರು ಬೆಂಗಳೂರಿನಲ್ಲಿ ಬಿಡುಗಡೆಗೊಳಿಸಿದರು. ಬಸವಣ್ಣನವರು ನಾಣ್ಯದ ಮೇಲೆ ಪ್ರಕಟಿಸಲ್ಪಟ್ಟವರಲ್ಲಿ ಪ್ರಥಮ ಕನ್ನಡಿಗ ರಾಗಿದ್ದಾರೆ. ಗುರು ಬಸವಣ್ಣವರ ಅಶ್ವಾರೂಢ ಮೂರ್ತಿಯನ್ನು ದೆಹಲಿಯಲ್ಲಿರುವ ಪಾರ್ಲಿಮೆಂಟ್ ನಲ್ಲಿ ೨೮ನೇ ಎಪ್ರಿಲ್ ೨೦೦೩ರಲ್ಲಿ ಅನಾವರಣಗೊಳಿಸಲಾಯತು.





ಆಯ್ದಕ್ಕಿ ಲಕ್ಕಮ್ಮ ರಾಯಚೂರು ಜಿಲ್ಲೆಯ ಲಿಂಗಸಗೂರು ತಾಲೂಕಿನ ಅಮರೇಶ್ವರ'ಗ್ರಾಮದ ದಲಿತ ಕುಟುಂಬದ ಸ್ವಾಭಿಮಾನಿ ಹೆಣ್ಣು. ಅವಳ ಪತಿ 'ಮಾರಯ್ಯ'. 'ಬಡತನ'ವೆಂಬ ದಿವ್ಯ ಅನುಭವವೇ ಲಕ್ಕಮ್ಮನಲ್ಲಿ ಸೂಕ್ಷ್ಮ ಚಿಂತನೆ ಮತ್ತು ಗಾಂಭೀರ್ಯದ ಬದುಕನ್ನು ಕಲಿಸಿತು. ದಂಪತಿಗಳು ಬಸವಣ್ಣನವರ ತತ್ವಕ್ಕೆ, ವ್ಯಕ್ತಿತ್ವಕ್ಕೆ ಮಾರು ಹೋಗಿ, 'ಅಮರೀಶ್ವರಿ ಗ್ರಾಮ'ದಿಂದ ಕಲ್ಯಾಣಕ್ಕೆ ಬಂದು ನೆಲೆಸಿದರು. ಕಾಯಕ ಮಾಡಿ, ಜನರಿಗೆ ನೀಡಿ ಬದುಕ ಬೇಕೆ ಹೊರತು, ಹೆಚ್ಚೆಚ್ಚು ಶೇಖರಿಸಿಡಬಾರದು ಎಂಬ ನಿಲುವಿನವಳು. ಆಕೆಯ ಅಂಕಿತನಾಮ 'ಮಾರಯ್ಯಾ ಪ್ರಿಯ ಅಮರೇಶ್ವರ ಲಿಂಗ'.[೧]

ಲಕ್ಕಮ್ಮನ ಪವಾಡ/ಶಿವನಿಷ್ಠೆ[ಬದಲಾಯಿಸಿ]

ಲಕ್ಕಮ್ಮ 'ಹಿಡಿಯಕ್ಕಿ' ಯಿಂದಲೇ ಒಂದು ಲಕ್ಷದ ತೊಂಬತ್ತಾರು ಸಾವಿರದ ಜಂಗಮರಿಗೆ ಊಟ ನೀಡಿ ಬಸವಣ್ಣನವರಿಂದ "ಸೈ"ಎನಿಸಿಕೊಂಡವಳು. ಶರಣರೆಲ್ಲ ಆಕೆಯ ಪವಾಡಕ್ಕೆ ಮೂಕ ವಿಸ್ಮಿತ ರಾಗಿ 'ಭಕ್ತಿಯ ಮುಂದೆ ಎಲ್ಲವೂ ಮಿಥ್ಯ'ವೆಂದು ಆಶ್ಚರ್ಯ ವ್ಯಕ್ತಪಡಿಸುತ್ತಾರೆ. ಒಮ್ಮೆ ಸಾಕ್ಷಾತ್ ಶಿವನೇ ಜಂಗಮ ರೂಪದಲ್ಲಿ ಬಂದು, ಅಸಾಧ್ಯ ಚಳಿಯನ್ನೂ ಸೃಷ್ಠಿಸಿ ನಡುಗುತ್ತಾ, ಶಿವಭಕ್ತರಾದ ಇವರಿಬ್ಬರು ಉಟ್ಟ ಬಟ್ಟೆಯೇ ಬೇಕೆಂದು ಕೇಳಿ ತೊಟ್ಟುಕೊಂಡು ಅವರ ಭಕ್ತಿಗೆ ಮೆಚ್ಚುಗೆ ಸೂಚಿಸಿದನಂತೆ. ಆಯ್ದಕ್ಕಿ ಲಕ್ಕಮ್ಮನ ವಚನಗಳಲ್ಲಿ ಆತ್ಮೋದ್ಧಾರ, ಲೋಕೋದ್ಧಾರ ಗಳೆಂಬ ದ್ವಿಮುಖ ಆಶಯ, ಕಾಯಕತತ್ವ, ನಿಶ್ಚಲ ನಿಲುವು, ಜ್ಞಾನದ ಅರಿವು, ಸಮತಾಭಾವ, ಇತರರ ಒಳ್ಳೆತನವನ್ನೇ ಪ್ರಶ್ನಿಸುವ ದಿಟ್ಟತನ, ಅತಿಯಾಸೆ ಒಳ್ಳೆಯದಲ್ಲವೆಂಬ ನಿಲುವು, ಆಕೆಯ ಅಚಲ ಆತ್ಮವಿಶ್ವಾಸ, ನಿರ್ಮಲ ವ್ಯಕ್ತಿತ್ವದ ಅನಾವರಣವಿದೆ. [೨]

ಲಕ್ಕಮ್ಮನ ವಿಶಿಷ್ಟವ್ಯಕ್ತಿತ್ವ[ಬದಲಾಯಿಸಿ]

ಶರಣರ ಕಾಯಕ, ದಾಸೋಹಗಳ ನಿಜಸ್ವರೂಪವನ್ನು, ಜೀವನಮೌಲ್ಯವನ್ನು ತನ್ನ ಪತಿ ಮಾರಯ್ಯನಿಗೆ ಮನಗಾಣಿಸುವ ರೀತಿಯಿಂದಾಗಿ ಅವಳ ನಿಸ್ವಾರ್ಥ ಮನಸ್ಸು, ತತ್ವ್ತಸಿದ್ಧಾಂತಗಳ ಪ್ರಧ ತಿಳಿವು, ಧೈರ್ಯ ಧೀಃಶಕ್ತಿಗಳಿಂದಾಗಿ ಎಲ್ಲಾ ಕಾಲದ, ಎಲ್ಲಾ ವರ್ಗದ ಸ್ತ್ರೀಯರಿಗೆ ಮಾರ್ಗದರ್ಶಿಯಾಗಿದ್ದಾಳೆ. ಒಂದೊಂದು ಅಕ್ಕಿಯಕಾಳು ಪೋಲಾಗದಂತೆ ರಕ್ಷಿಸಬೇಕಾದ ಸಾಮಾಜಿಕ ಜವಾಬ್ದಾರಿಯತ್ತ ನಮ್ಮನ್ನು ಕರೆದೊಯ್ಯುತ್ತಾಳೆ. ಲಕ್ಕಮ್ಮನ ೨೫ ವಚನಗಳು ಲಭ್ಯವಾಗಿವೆ.
'ಕಾಯಕ ನಿಂದಿತ್ತು ಹೋಗಯ್ಯಾ ಎನ್ನಾಳ್ದನೆ
ಭಾವ ಶುದ್ಧವಾಗಿ ಮಹಾ ಶರಣರ ತಿಪ್ಪೆಯ
ತಪ್ಪಲು ಅಕ್ಕಿಯ ತಂದು ನಿಶ್ಚೈಸಿ ಮಾಡಬೇಕು
ಮಾರಯ್ಯಾಪ್ರಿಯ ಅಮರೇಶ್ವರಲಿಂಗಕ್ಕೆ
ಬೇಗ ಹೋಗು ಮಾರಯ್ಯಾ ಅಂಗವರಿತ
ಅರುವೆಯ ಅಂಗದಲ್ಲಿ ಕಟ್ಟಿ ಬಯಕೆಯರಿತ
ಕೈಯಲ್ಲಿ ತಂಡುಲವನಾಯ್ದುಕೊಂಡು ಬನ್ನಿರಿ'

ಅಲ್ಲಮಪ್ರಭು ೧೨ನೆಯ ಶತಮಾನದ ವಚನಕಾರರಲ್ಲಿ ಪ್ರಸಿದ್ಧನಾದವರು. ಅತ್ಯಂತ ನೇರ ನಿಷ್ಠುರವಾದಿ. ಅನೇಕ ಶಿವಶರಣ, ಶಿವಶರಣೆಯರಿಗೆ ಭಕ್ತಿ-ವೈರಾಗ್ಯವನ್ನು ಬೋಧಿಸಿದರು. ತನ್ನ ವಚನಗಳ ಮೂಲಕ ಅಂತರಂಗ, ಬಹಿರಂಗಗಳನ್ನು ಶೋಧಿಸಲೆತ್ನಿಸಿದರು.

ಅಲ್ಲಮಪ್ರಭುವಿನ ಸಂಕ್ಷಿಪ್ತ ಪರಿಚಯ[ಬದಲಾಯಿಸಿ]

೧೨ನೆಯ ಶತಮಾನದ ಶಿವಶರಣರಲ್ಲಿ ಅಲ್ಲಮಪ್ರಭು ಉಚ್ಚಸ್ಥಾನದಲ್ಲಿದ್ದಾನೆ. ಈತನು ಅರಸು ಮನೆತನದಲ್ಲಿಯೆ ಹುಟ್ಟಿ ಬೆಳೆದವನಾದರೂ, ಮನೆ ಬಿಟ್ಟು ತೆರಳಿ ಅಧ್ಯಾತ್ಮಸಾಧಕನಾದನೆಂದು ಹೇಳಲಾಗುತ್ತಿದೆ. ಬಸವಣ್ಣನ ಕಲ್ಯಾಣಕ್ಕೆ ಬಂದ ಅಲ್ಲಮಪ್ರಭು ಅಲ್ಲಿ ಅನುಭವಮಂಟಪದ ಶೂನ್ಯಸಿಂಹಾಸನದ ಅಧ್ಯಕ್ಷನಾಗುತ್ತಾನೆ. ಅಲ್ಲಮನ ವಚನಚಂದ್ರಿಕೆಯಲ್ಲಿ ೧೨೯೪ ವಚನಗಳು ಲಭ್ಯವಾಗಿವೆ. ಅಲ್ಲಮಪ್ರಭು ತನ್ನ ಕೊನೆಯ ದಿನಗಳಲ್ಲಿ ಶ್ರೀಶೈಲ‍ಕ್ಕೆ ಹೋಗಿ ಅಲ್ಲಿಯ ವನದಲ್ಲಿ ಶಿವೈಕ್ಯನಾದನೆಂದು ಪ್ರತೀತಿ. ಬಸವಣ್ಣನವರ ಸಮಕಾಲೀನನಾದ ಅಲ್ಲಮಪ್ರಭುವಿನ ವಚನಗಳ ಅಂಕಿತ 'ಗುಹೇಶ್ವರ' ಅಥವಾ 'ಗೊಹೇಶ್ವರ'. ಈತನ ವಚನಗಳಲ್ಲಿ ಗಹನವಾದ ಆಧ್ಯಾತ್ಮ ಹಾಗೂ ತಾತ್ವಿಕ ವಿಚಾರಗಳಿವೆ. ಅಲ್ಲಮನ ಆಧ್ಯಾತ್ಮಿಕ ಅನುಭವಗಳ ಅಸಾಮಾನ್ಯತೆಯಿಂದ ಅವನ ವಚನಗಳನ್ನು ಅರ್ಥಮಾಡಿಕೊಳ್ಳುವುದು ಕಷ್ಟ. ಅವನದು ಬಹುಮಟ್ಟಿಗೆ ರೂಪಕ ಭಾಷೆ. ಈ ಭಾಷೆ ಅವನ ವೈಶಿಷ್ಟ್ಯವೂ ಹೌದು. ಚಾಮರಸನು ತನ್ನ ಪ್ರಭುಲಿಂಗಲೀಲೆ ಎನ್ನುವ ಕಾವ್ಯದಲ್ಲಿ ಅಲ್ಲಮಪ್ರಭುವಿನ ಐತಿಹ್ಯವನ್ನು ವರ್ಣಿಸಿದ್ದಾನೆ.

ಹುಟ್ಟು[ಬದಲಾಯಿಸಿ]

ಶಿವಮೊಗ್ಗೆ ಜಿಲ್ಲೆ ಶಿಕಾರಿಪುರ ತಾಲ್ಲೂಕಿನ ಬಳ್ಳಿಗಾವೆಯಲ್ಲಿ ಸುಮಾರು(೧೨ನೇ ಶತಮಾನ) ಎಂಟನೂರೈವತ್ತು ವರ್ಷಗಳಿಂದಲೂ ಇರುವ ಊರು. ಆಗಿನ ಬನವಾಸಿ-೧೨೦೦೦ ಎಂಬ ಪ್ರಾಂತ್ಯದ ಒಂದು ಹಳ್ಳಿ. ಇದೇ ಬಳ್ಳಿಗಾವೆಯ ಹತ್ತಿರವಿರುವ ಕೋಡಿಮಠ ಕಾಳಾಮುಖ ಶೈವರ ಪ್ರಮುಖ ಕೇಂದ್ರ. ಬಳ್ಳಿಗಾವೆಯೇ ಅಲ್ಲಮಪ್ರಭುವಿನ ಜನ್ಮಸ್ಥಳ. ಅಲ್ಲಮನ ಬಾಲ್ಯದ ದಿನಗಳ ಬಗ್ಗೆಯಾಗಲೀ ತಂದೆ-ತಾಯಿಗಳ ಬಗ್ಗೆಯಾಗಲೀ ಹೆಚ್ಚಿನ ವಿವರಗಳು ಲಭ್ಯವಾಗಿಲ್ಲ. ಕೆಲವು ವೀರಶೈವ ಕಾವ್ಯಗಳಲ್ಲಿ ಅಲ್ಲಮನ ತಂದೆಯ ಹೆಸರು ನಿರಹಂಕಾರನೆಂಬುವವನು. ತಾಯಿ ಸುಜ್ಞಾನದೇವಿ. ನಿರಹಂಕಾರನು ಮೂಲತಃ ಕರುವೂರಿನವನು. ಬಳ್ಳಿಗಾವೆಗೆ ಬಂದು ಅಲ್ಲಿನ ರಾಜನ ಅರಮನೆಯಲ್ಲಿ ಅಂತಃಪುರದ ಅಧಿಕಾರಿಯಾಗಿದ್ದನು.ನಿರಹಂಕಾರ ಮತ್ತು ಸುಜ್ಞಾನದೇವಿಯರಿಬ್ಬರೂ ಶಿವಭಕ್ತರಾಗಿದ್ದರು. ಅಲ್ಲಮಪ್ರಭುವು ದೇವಾಲಯದಲ್ಲಿ ಮದ್ದಳೆ ಬಾರಿಸುವವರಾಗಿದ್ದರು. ಅನಿಮಿಷ ಯ್ಯ/ ಅನಿಮಿಷಯೋಗಿ ಇವನ ಗುರುಗಳು. ಇವರು ಬಂದು ಅಲ್ಲಮನಿಗೆ ಇಷ್ಟಲಿಂಗ ದೀಕ್ಷೆಯನ್ನು ಕೊಟ್ಟರು. ನಂತರ ಬಸವಕಲ್ಯಾಣಕ್ಕೆ ಬಂದು ಆಲ್ಲಿ ಅನುಭವ ಮಂಟಪದ ಪ್ರಥಮ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸಿದರು.

ಜೀವನ ಚರಿತ್ರೆ[ಬದಲಾಯಿಸಿ]

ಅಲ್ಲಮನ ಜೀವನ ಚರಿತ್ರೆಯನ್ನು ನಿಖರವಾಗಿ ನಿರೂಪಿಸಲು ಸಾಧ್ಯವಾಗಲಾರದೊಷ್ಟು ಐತಿಹ್ಯಗಳು ಆ ವ್ಯಕ್ತಿತ್ವವನ್ನು ಸುತ್ತುವರಿದಿವೆ. ಅಲ್ಲಮನ ಬಗ್ಗೆ ಹದಿಮೂರನೇ ಶತಮಾನದ ಹರಿಹರಮಹಾಕವಿಯು, ಪ್ರಭುದೇವರ ರಗಳೆಯಲ್ಲಿ ಸಾಕಷ್ಟು ವಿವರಣೆಗಳನ್ನು ನೀಡಿರುವನಾದರೂ, ಅಲ್ಲಮನ ಪ್ರಭಾವಲಯದಿಂದ ಪೂರ್ಣವಾಗಿ ಹೊರ ಬಂದು , ಒಂದು ಸಹಜ ಚಿತ್ರಣವನ್ನು ಕೊಡುವಲ್ಲಿ ಹರಿಹರನಂತಹ ವಾಸ್ತವವಾದಿ ಕವಿ ಸಹ ಸೋಲುತ್ತಾನೆ. ಇನ್ನು ಚಾಮರಸನು ಅಲ್ಲಮಪ್ರಭುದೇವನನ್ನು ಈ ಲೋಕದ ಮಾನವ ಚೇತನವೆಂದು ಒಪ್ಪಿಕೊಳ್ಳುವುದೇ ಇಲ್ಲ. ಅವನು ಕೈಲಾಸದಿಂದ ಬಂದ ಶಿವನ ಚಿತ್ಕಳೆ, ಎಂದೇ ಚಿತ್ರಿಸುತ್ತಾನೆ. ಇವರಿಬ್ಬರಲ್ಲದೆ ಎಳಂದೂರು ಹರಿಹರೇಶ್ವರನೆಂಬ ಮತ್ತೊಬ್ಬ ಕವಿಯೂ ಅಲ್ಲಮಪ್ರಭುವಿನ ಬಗ್ಗೆ ಕಾವ್ಯ ರಚನೆ ಮಾಡಿದ್ದಾನೆ. ಇನ್ನು ಚಾಮರಸನು ರಚಿಸಿರುವ ಪ್ರಭುಲಿಂಗಲೀಲೆಯು ತಮಿಳು, ಮರಾಠಿ ಮುಂತಾದ ಭಾಷೆಗಳಿಗೆ ಬಲು ಹಿಂದೆಯೇ ಅನುವಾದಗೊಂಡು ಪ್ರಖ್ಯಾತವಾಗಿದ್ದಿತು .ಈ ಮಹಾಕವಿಗಳಲ್ಲದೆ ,ಅಲ್ಲಮಪ್ರಭುವಿನ ಬಗ್ಗೆ ಪ್ರಾಸಂಗಿಕವಾಗಿ ಬರೆಯದ ವೀರಶೈವ ಸಾಹಿತ್ಯವೇ ಇಲ್ಲವೆನ್ನಬಹುದು. ಇದೆಲ್ಲಕ್ಕಿಂತಲೂ ಮುಖ್ಯವಾಗಿ, ಸ್ವತಃ ಅಲ್ಲಮಪ್ರಭುವೇ ಅತನ ಕಾಲದ ಬಲು ದೊಡ್ಡ ಸಾಹಿತ್ಯಚೇತನವಾಗಿದ್ದನೆನ್ನುವುದು, ಮತ್ತು ಅವನವೇ ಆದ ಅನೇಕ ವಚನಗಳು ಉಪಲಬ್ಧವಿರುವುದು ,ಅವನ ವ್ಯಕ್ತಿತ್ವವನ್ನು ಗ್ರಹಿಸಲು ತುಂಬಾ ಉಪಯುಕ್ತ ಮಾರ್ಗವಾಗಿದೆ .ಇಡಿಯ ವಚನ ಸಾಹಿತ್ಯದಲ್ಲಿಯೇ , ಸಾಹಿತ್ಯದ ಪರಿಭಾಷೆಯನ್ನು ಸರಿಯಾದ ಮಾರ್ಗದಲ್ಲಿ ದುಡಿಸಿಕೊಂಡವರಲ್ಲಿ ಅಕ್ಕಮಹಾದೇವಿ ಮತ್ತು ಅಲ್ಲಮಪ್ರಭು ಇಬ್ಬರೂ ಅಪ್ರತಿಮರು .

ಚಾಮರಸಪ್ರಭುಲಿಂಗಲೀಲೆ[ಬದಲಾಯಿಸಿ]

  • ಚಾಮರಸನು ಅಲ್ಲಮನ ತಂದೆ ತಾಯಿಗಳನ್ನು ನಿರಹಂಕಾರ-ಸುಜ್ಞಾನಿಗಳೆಂದು ಕರೆಯುತ್ತಾನೆ. ನಂತರ ಮಾಯಾದೇವಿಯ ತಂದೆ ತಾಯಿಗಳನ್ನು ಮಮಕಾರ-ಮೋಹಿನಿಯರೆಂದು ಕರೆಯುವುದನ್ನು ಕಂಡಾಗ ಇವೆಲ್ಲವೂ ವಾಸ್ತವವಲ್ಲದ, ಕವಿಯ ಭಾವನಾತ್ಮಕ ರೂಪಕಗಳೆನಿಸದೆ ಇರದು.
  • ಹರಿಹರ ಮಹಾಕವಿಯು ಅಲ್ಲಮನ ತಂದೆ ತಾಯಿಗಳ ಹೆಸರುಗಳನ್ನೆ ಪ್ರಸ್ತಾಪಿಸದೆ ಅಲ್ಲಮನ ತಂದೆಯು ಬಳ್ಳಿಗಾವಿಯ ನಾಗವಾಸಾಧಿಪನಾಗಿದ್ದನೆಂದು ವಿವರಿಸುವನು. ನಾಗವಾಸಾಧಿಪನೆಂದರೆ ಅರಮನೆಯ ಅಂತಃಪುರದ ಸಂಗೀತ, ನರ್ತನಗಳ ವಲಯದ ಅಧಿಕಾರಿಯೆಂದೇ ಅರ್ಥ ಬರುವುದರಿಂದ, ಅಲ್ಲಮನು ಒಬ್ಬ ಕಲಾವಿದನ ಮಗನಾಗಿದ್ದನೆಂದು ಭಾವಿಸಬಹುದು ಮತ್ತು ಅಂದಿನ ಕಾಲಮಾನದಲ್ಲಿ ನಟರಿಗೆ, ನಟುವಾಂಗದ ವೃತ್ತಿಯವರಿಗೆ ಸಾಮಾಜಿಕ ಮನ್ನಣೆಯೂ ಇರಲಿಲ್ಲವೆಂಬುದು ಗಮನಾರ್ಹವಾದುದು.
  • ಅಲ್ಲಮನ ಯೌವ್ವನ ಕಾಲದ ಪ್ರೇಮ, ಕಾಮ, ವ್ಯಾಮೋಹಗಳ ಚಿತ್ರಗಳನ್ನು ಹರಿಹರಮಹಾಕವಿಯೂ , ಚಾಮರಸನೂ ಕಟ್ಟಿ ಕೊಡುವ ರೀತಿಗಳು ತುಂಬಾ ವಿಭಿನ್ನವಾಗಿವೆ. ಅಲ್ಲಮನು ಸಾಕ್ಷಾತ್ ಶಿವಾಂಶ ಸಂಭೂತನಾದುದರಿಂದ, ಕಾಮಾದಿ ಅರಿಷಡ್ವರ್ಗಗಳು ಅವನನ್ನು ಸೋಂಕುವುದೇ ಇಲ್ಲ. ಬನವಾಸೆಯ ಮಧುಕೇಶ್ವರ ಮಂದಿರದಲ್ಲಿ ಶಿವನೆದುರಿನಲ್ಲಿ ಮದ್ದಳೆಯ ಮಹಾ ಯೋಗದಲ್ಲಿ ತಲ್ಲೀನನಾಗಿದ್ದ ಅಲ್ಲಮನನ್ನು ಆ ಊರಿನ ರಾಜನ ಮಗಳು, ಮಾಯಾದೇವಿ ಕಂಡು ವಿಭ್ರಾಂತಿಗೊಳಗಾಗುತ್ತಾಳೆ. ಅವನನ್ನು ಮೋಹಿಸಿ, ಕಾಮಿಸುತ್ತಾಳೆ. ಇಲ್ಲಿ ಚಾಮರಸನ ಪ್ರಕಾರ ಪಾರ್ವತೀ ದೇವಿಯ ಮಾಯೆಯ ಅಂಶವೇ ಅಲ್ಲಮನನ್ನು ಜಯಿಸಲು ಭೂಲೋಕದಲ್ಲಿ ಮಾಯಾದೇವಿಯಾಗಿ, ಮಮಕಾರ, ಮೋಹಿನಿಯರ ಮಗಳಾಗಿ ಜನಿಸಿರುತ್ತಾಳೆ. ಇದನ್ನು ಅರಿತ ಅಲ್ಲಮನು, ಅಂತರ್ಧಾನನಾಗಿ, ಅರಣ್ಯವನ್ನು ಸೇರುತ್ತಾನೆ. ಹಿಂಬಾಲಿಸಿದ ಮಾಯೆಗೆ, ಪರವಶನಾಗದೆ ಶಾಶ್ವತ ನಿಲುವನ್ನು ವಿವರಿಸುತ್ತಾನೆ. ಹೀಗೆ ಇಬ್ಬರು ಮಹಾ ಕವಿಗಳು ಅಲ್ಲಮನನ್ನು ವಿಭಿನ್ನವಾಗಿ ಕಟ್ಟಿ ಕೊಡುತ್ತಾರೆ.
  • ಹರಿಹರ, ಚಾಮರಸರ ಕಾವ್ಯಗಳ ನಾಯಕನಾಗಿ ತೋರಿ ಬರುವ ಅಲ್ಲಮಪ್ರಭುವು, ನಂತರ ಶೂನ್ಯ ಸಂಪಾದನೆಕಾರರ ಕೃತಿಯಲ್ಲಿ ಅಸಾಮಾನ್ಯ ವ್ಯಕ್ತಿತ್ವದವನಾಗಿ ಚಿತ್ರಿತನಾಗಿದ್ದಾನೆ.
  • ಅಲ್ಲಮನ ವಚನಗಳು ಮತ್ತು ಸಮಕಾಲೀನ ಶರಣರ ವಚನಗಳನ್ನೇ, ರತ್ನಮಾಲೆಯಂತೆ ಕೋದು ,ಸಂದರ್ಭಕ್ಕೆ ಅನುಗುಣವಾಗಿ ಕೆಲವು ವಚನಗಳನ್ನು ಸೇರಿಸಿ, ಶಿವಗಣ ಪ್ರಸಾದಿ ಮಹದೇವಯ್ಯಗಳು ಮೊದಲ ಶೂನ್ಯ ಸಂಪಾದನೆಯನ್ನು ರಚಿಸಿದರು.
  • ನಂತರ ಗೂಳೂರು ಸಿದ್ದವೀರಣ್ಣೊಡೆಯರುಮೂರನೆಯದಾಗಿ ಗುಮ್ಮಳಾಪುರದ ಸಿದ್ದಲಿಂಗದೇವರು ಅಂತಿಮವಾಗಿ ಕೆಂಚವೀರಣ್ಣೊಡೆಯರುಹೀಗೆ ನಾಲ್ಕು ಶೂನ್ಯ ಸಂಪಾದನೆಗಳು ಅಲ್ಲಮ ಪ್ರಭುವಿನ ಜೀವನ ಚಿತ್ರಣ ನೀಡುವಲ್ಲಿ ಇಂದು ನೆರವಾಗಿವೆ.

ಹರಿಹರ ಮಹಾಕವಿಯ ಪ್ರಭುದೇವರ ರಗಳೆ[ಬದಲಾಯಿಸಿ]

  • ಅತ್ಯಂತ ಸುಂದರನೂ, ಅಪ್ರತಿಮ ಮದ್ದಲಿಗನೂ, ಆಕರ್ಷಕ ಯುವಕನೂ ಆಗಿದ್ದ ಅಲ್ಲಮನನ್ನು ಶಿವ ದೇವಾಲಯದಲ್ಲಿ, ಮದ್ದಳೆ ಬಾರಿಸುತ್ತಿರುವ ಸಮಯದಲ್ಲಿ ಕಾಮಲತೆಯು ಆಕಸ್ಮಿಕವಾಗಿ ಸಂಧಿಸುತ್ತಾಳೆ. ಅವನನ್ನು ಕಂಡ ಕೂಡಲೇ ಅವನಲ್ಲಿ ಅನುರಕ್ತಳಾಗಿ ; ಕಾಮವಶಳಾಗಿ ಮೂರ್ಛಿತಳಾಗುತ್ತಾಳೆ. ಅಲ್ಲಮನ ಅವಸ್ಥೆಯೂ ಸಹ ಅದೇ ಪರಿಯಾಗುತ್ತದೆ .ಕಾಮಲತೆಯಂತಹ ಮಿಂಚಿನ ಮೋಹನಾಂಗಿಯನ್ನು ಕಂಡು, ಅಲ್ಲಮನು ವಿವಶನಾಗುತ್ತಾನೆ. ಇವರಿಬ್ಬರ ಸ್ಥಿತಿಯನ್ನು ಮನಗಂಡ ಸಖಿಯರು ಇವರ ಮಿಲನಕ್ಕೆ ಅವಕಾಶ ಕಲ್ಪಿಸುತ್ತಾರೆ . ಅಲ್ಲಿಂದ ಅಲ್ಲಮ ಮತ್ತು ಕಾಮಲತೆಯರು ಇಹದ ಸಮಸ್ತವನ್ನೂ ಮರೆತು, ಏಕ ದೇಹಿಗಳಂತೆ, ಕಾಲ ದೇಶಾತೀತರಾಗಿ, ಲೋಕದ ಮರವೆಯಲ್ಲಿ ಕಾಲ ಕಳೆಯುತ್ತಿರುವಾಗ, ಕಾಮಲತೆಯು ಜ್ವರ ಪೀಡಿತೆಯಾಗಿ ಆಕಸ್ಮಿಕವಾಗಿ ಮರಣ ಹೊಂದುತ್ತಾಳೆ. ಇದರಿಂದ ವಿಚಲಿತನಾದ ಅಲ್ಲಮನು ವಿರಹ ಜ್ವಾಲೆಯಲ್ಲಿ ಬೇಯುತ್ತಾ, ಮರುಳನಂತೆ ಅಲೆಯುತ್ತಾ, ತಿರುಗುತ್ತಿರುವಾಗ, ಊರ ಹೊರಗೆ ಹೂತು ಹೋದ ಪ್ರಾಚೀನ ಶಿವಾಲಯವೊಂದರ ಶಿಖರದ ತುದಿಯು, ಕಾಲಬೆರಳ ತುದಿಗೆ ತಗುಲಿ, ಕುತೂಹಲಗೊಂಡು ಅಗೆಯ ತೊಡಗಿದಾಗ ಇಡಿ ಶಿವಾಲಯ ಗೋಚರವಾಗುತ್ತದೆ. ಅದರೊಳಗೆ ಪ್ರವೇಶಿಸಿ ದಾಗ ಅಲ್ಲಿ ಶಿವಯೋಗದಲ್ಲಿದ್ದ ಅನಿಮಿಷ ದೇವನ ದರ್ಶನವಾಗಿ, ಅವನ ಕೈಯ್ಯಲ್ಲಿದ್ದ ಅತ್ಮಲಿಂಗವು ಅಲ್ಲಮಪ್ರಭುವಿನ ಕೈಗೆ ಬಂದು ಸೇರುತ್ತದೆ. ಇದರಿಂದಾಗಿ ಇಬ್ಬರ ನಡುವೆ ಗುರು ಶಿಷ್ಯ ಸಂಬಂಧವೇರ್ಪಡುತ್ತದೆ. ತಕ್ಷಣ ಅನಿಮಿಷದೇವನು ಶಿವಾಧೀನನಾಗುತ್ತಾನೆ. ನಂತರ ಅಲ್ಲಮನ ಎಲ್ಲ ಮೋಹ ಮಮತೆಗಳು ಅಳಿದು, ಜಗತ್ತಿನ ನಶ್ವರತೆ; ವಿಶ್ವಕಾರಣದ ಶಾಶ್ವತತೆ ಅರಿವಿಗೆ ಬಂದು ಅನಂತ ಜ್ಞಾನಿಯಾಗುತ್ತಾನೆ. ಇದು ಹರಿಹರ ಮಹಾಕವಿಯು ಕಟ್ಟಿಕೊಡುವ ಅಲ್ಲಮನ ಪರಿವರ್ತನೆಯ ಚಿತ್ರಣ.

ಎಚ್.ತಿಪ್ಪೇರುದ್ರಸ್ವಾಮಿಯವರ ಪರಿಪೂರ್ಣದೆಡೆಗೆ[ಬದಲಾಯಿಸಿ]

  • ಇಪ್ಪತ್ತನೆಯ ಶತಮಾನದಲ್ಲಿ ಅಲ್ಲಮಪ್ರಭುವಿನ ಚಿತ್ರಣವನ್ನು ಪುನರ್ರೂಪಿಸುವಲ್ಲಿ ಎಚ್.ತಿಪ್ಪೇರುದ್ರಸ್ವಾಮಿಯವರು ಪರಿಪೂರ್ಣದೆಡೆಗೆ ಕಾದಂಬರಿಯ ಮೂಲಕ ಅನನ್ಯವಾಗಿ ಪ್ರಯತ್ನಿಸಿದ್ದಾರೆ.
  • ಬಿ.ಪುಟ್ಟಸ್ವಾಮಯ್ಯನವರು ಅಲ್ಲಮಪ್ರಭುವಿನ ಬಗೆಗೆ ಅದೇ ಹೆಸರಿನ ಕಾದಂಬರಿಯನ್ನು ರಚಿಸಿರುವುದಲ್ಲದೆ, ಹನ್ನೆರಡನೆಯ ಶತಮಾನದ, ರಾಜಕೀಯ, ಆರ್ಥಿಕ, ಸಾಮಾಜಿಕ, ಧಾರ್ಮಿಕ,ಹೀಗೆ ಸಮಸ್ತ ಮುಖಗಳನ್ನೊಳಗೊಂಡ ಆರು ಕಾದಂಬರಿಗಳಲ್ಲಿ, ಅಲ್ಲಮನನ್ನು ಅತ್ಯಂತ ವಿಶಿಷ್ಟವಾಗಿ ಚಿತ್ರಿಸುತ್ತಾರೆ.
  • ಹೀಗೆ ಎಷ್ಟೆಲ್ಲಾ ಮಹನೀಯರಿಂದ ಪೂಜನೀಯನಾದ ಅಲ್ಲಮಪ್ರಭುವಿನ ವ್ಯಕ್ತಿತ್ವ ಮತ್ತು ಜೀವನ ವಿವರವು ಕಡೆಗೂ ನಿಗೂಢವೇ ಆಗಿ ಉಳಿತ್ತದೆ . ಲಭ್ಯವಿರುವ ಅವನ ವಚನಗಳಂತೆ, ಅವನ ವ್ಯಕ್ತಿತ್ವ ಎಂದು ಊಹಿಸಬಹುದು.[೧][೨][೩]

ವಚನಗಳು[ಬದಲಾಯಿಸಿ]

ಹೆಣ್ಣಿಗಾಗಿ ಸತ್ತವರು ಕೋಟಿ
ಮಣ್ಣಿಗಾಗಿ ಸತ್ತವರು ಕೋಟಿ
ಹೊನ್ನಿಗಾಗಿ ಸತ್ತವರು ಕೋಟಿ
ಗುಹೇಶ್ವರಾ
ನಿಮಗಾಗಿ ಸತ್ತವರನಾರನೂ ಕಾಣೆ
ಇಲ್ಲಿ ಅಲ್ಲಮ ಪ್ರಭುಗಳು, ಹೆಣ್ಣಿಗಾಗಿ ನಡೆದ ರಾಮ-ರಾವಣರ ಯುದ್ಧ, ಮಣ್ಣಿಗಾಗಿ ನೆಡೆದ ಕುರುಕ್ಷೇತ್ರ ಯುದ್ಧ, ಹೊನ್ನಿಗಾಗಿ ನೆಡೆದ ಅಶೋಕನ ಕಳಿಂಗ ಯುದ್ಧವನ್ನು ಉದಾಹರಣೆ ನೀಡಿ, ದೇವರಿಗಾಗಿ ಯಾರೂ ಜೀವ ನೀಡಲು ಸಿದ್ಧರಿಲ್ಲದ, ಮಾನವನ ಸ್ವಾರ್ಥವನ್ನು ಎತ್ತಿ ತೋರಿಸಿದ್ದಾರೆ.

"ಏನೂ ಏನೂ ಇಲ್ಲದ ಬಯಲೊಳಗೊಂದು
ಬಗೆಗೊಳಗಾದ ಬಣ್ಣ ತಲೆದೋರಿತ್ತು.
ಆ ಬಯಲನಾ ಬಣ್ಣ ಶೃಂಗರಿಸಲು ಬಯಲು ಸ್ವರೂಪುಗೊಂಡಿತ್ತು.
ಅಂತಪ್ಪ ಸ್ವರೂಪಿನ ಬೆಡಗು ತಾನೆ
ನಮ್ಮ ಗುಹೇಶ್ವರ ಲಿಂಗದ ಪ್ರಥಮಭಿತ್ತಿ."
ಎಂದು ಅಲ್ಲಮಪ್ರಭುದೇವರು ಹೇಳುವಲ್ಲಿ ವಿಶ್ವದ ವಿರಾಟ್ ಸ್ವರೂಪದ ಕಲ್ಪನೆ ಇದೆ. ಚೈತನ್ಯವು ವಸ್ತುವಾಗಿ ರೂಪುಗೊಳ್ಳುವ ಕ್ರಮವಿದೆ. ಇದೇ ವಸ್ತು ರಹಸ್ಯ.

ಆದಿಯಾಧಾರವಿಲ್ಲದಂದು
ಹಮ್ಮು ಬಿಮ್ಮುಗಳಿಲ್ಲದಂದು
ಸುರಾಳನಿರಾಳವಿಲ್ಲದಂದು
ಸಚರಾಚರವೆಲ್ಲ ರಚನೆಗೆ ಬಾರದಂದು
ಗುಹೇಶ್ವರ, ನಿಮ್ಮ ಶರಣನುದಯಿಸಿದನಂದು

ಕಲ್ಲ ಮನೆಯ ಮಾಡಿ
ಕಲ್ಲ ದೇವರ ಮಾಡಿ
ಆ ಕಲ್ಲು ಕಲ್ಲ ಮೇಲೆ ಕೆಡೆದರೆ
ದೇವರೆತ್ತ ಹೋದರೋ?
ಲಿಂಗಪ್ರತಿಷ್ಠೆಯ ಮಾಡಿದವಂಗೆ
ನಾಕನರಕ ಗುಹೇಶ್ವರ.

ಹೊನ್ನು ಮಾಯೆಯೆಂಬರು
ಹೊನ್ನು ಮಾಯೆಯಲ್ಲ.
ಹೆಣ್ಣು ಮಾಯೆಯೆಂಬರು
ಹೆಣ್ಣು ಮಾಯೆಯಲ್ಲ.
ಮಣ್ಣು ಮಾಯೆಯೆಂಬರು
ಮಣ್ಣು ಮಾಯೆಯಲ್ಲ.
ಮನದ ಮುಂದಣ ಆಶೆಯೇ ಮಾಯೆ ಕಾಣಾ
ಗುಹೇಶ್ವರ

ಅಲ್ಲಮನ ತತ್ತ್ವ ದೃಷ್ಠಿ[ಬದಲಾಯಿಸಿ]

    ಅಲ್ಲಮ ತನ್ನ ಬೆಡಗಿನ ವಚನದಲ್ಲಿ ತತ್ತ್ವಜ್ಞಾನದ ಒಳಗುಟ್ಟನ್ನು ಹೀಗೆ ಹೇಳಿದ್ದಾನೆ:
    ಊರದ ಚೇಳಿನ ಏರದ ಬೇನೆಯಲ್ಲಿ, ಮೂರುಲೋಕವೆಲ್ಲಾ ನರಳಿತ್ತು!
    ಹುಟ್ಟದ ಗಿಡುವಿನ ಬಿಟ್ಟ ಎಲೆಯ ತಂದು ಮುಟ್ಟದೆ ಹೂಸಲು;
    ಮಾಬುದು ಗುಹೇಶ್ವರಾ.
    ಅರ್ಥ:- ಕಚ್ಚದಿರುವ (ಇಲ್ಲದ)ಚೇಳಿನ ಆಗದೇ ಇರುವ ನೋವಿನಿಂದ (ಇಲ್ಲದ ನೋವಿನಿಂದ) ಮೂರು ಲೋಕವೂ ನರಳಿತು! ಹುಟ್ಟದೇ ಇರುವ ಗಿಡದ ಎಲೆಯನ್ನು ತಂದು, ಅದನ್ನು ಮುಟ್ಟದೆ ಹಚ್ಚಲು ಗಾಯ/ನೋವು ಮಾಯಿತು(ವಾಸಿಯಾಯಿತು). ಅಂದರೆ, ಚೇಳೇ ಇರಲಿಲ್ಲ, ಆದರೆ ಕಚ್ಚಿತೆಂಬ ಬ್ರಮೆ.ಭ್ರಮೆಯಿಂದ ನೋವಿಲ್ಲದಿದ್ದರೂ ಭ್ರಮೆಯಿಂದ ನೋವು; ಈ ನೋವಿಗೆ 'ಇಲ್ಲ ಇಲ್ಲ' ಎಂಬುದೇ ಮದ್ದು! (ಅದ್ವೈತ ಸಿದ್ಧಾಂತದ ಸಂಕ್ಷಿಪ್ತ ನಿರೂಪಣೆ)[೪] (ಅದಕ್ಕೇ ಅಲ್ಲಮ ಪ್ರಭು ತನ್ನ ಹೆಸರನ್ನೇ "ಅಲ್ಲ- ಮ" ಎಂದು ಇಟ್ಟುಕೊಂಡಿದ್ದಾನೆ)

    ಬೆಡಗಿನ ವಚನಗಳು[ಬದಲಾಯಿಸಿ]

    ಬೆಡಗಿನ ವಚನಗಳು : +(ಅಲ್ಲಮನ ಬೆಡಗಿನ ವಚನಗಳು):ಎಂ. ಜೀವನ :

    ಗ್ರಂಥ ನೆರವು[ಬದಲಾಯಿಸಿ]

    • ಹರಿಹರಮಹಾಕವಿಯ- "ಪ್ರಭುದೇವರ ರಗಳೆ"
    • ಚಾಮರಸನ - "ಪ್ರಭುಲಿಂಗಲೀಲೆ"
    • ಎಚ್.ತಿಪ್ಪೇರುದ್ರಸ್ವಾಮಿ - "ಪರಿಪೂರ್ಣದೆಡೆಗೆ"

    ಅಕ್ಕಮಹಾದೇವಿ[೧] ವಚನ ಸಾಹಿತ್ಯದ ಪ್ರಮುಖರಲ್ಲೊಬ್ಬರು. ಅಕ್ಕಮಹಾದೇವಿ ಕನ್ನಡದ ಪ್ರಥಮ ಮಹಿಳಾ ಕವಿಯತ್ರಿಯಾಗಿದ್ದಾರೆ. ಅಕ್ಕಮಹಾದೇವಿಯವರನ್ನು ಶರಣ ಚಳುವಳಿಯ ಪ್ರಮುಖರಾಗಿ, ಸ್ವಾಭಿಮಾನದ ಪ್ರತೀಕವಾಗಿ, ಸ್ತ್ರಿವಾದಿ ಚಳವಳಿಯ ನಿಜವಾದ ಪ್ರತಿಪಾದಕಿಯಾಗಿ, ಅಕ್ಕರೆಯ ಅಕ್ಕನಾಗಿ, ಹೀಗೆ ಹಲವು ರೀತಿ ಗುರುತಿಸ ಬಹುದಾಗಿದೆ. ಚಿಕ್ಕ ವಯಸ್ಸಿನಲ್ಲೆ ಸಕಲ ಸುಖವನ್ನು ತ್ಯಜಿಸಿದ ಅಕ್ಕ, ಎದುರಿಸಿದ ಪರೀಕ್ಷೆಗಳು ಬಹಳಷ್ಟು. ಸಾಕ್ಷಾತ್ ಶಿವ ( ಮಲ್ಲಿಕಾರ್ಜುನ)ನನ್ನು ಪತಿ ಎಂದು ಸ್ವೀಕರಿಸಿ, ಲೌಕಿಕ ಜಗತ್ತನ್ನು ಧಿಕ್ಕರಿಸಿ, ಕೇಶಾಂಬರೆಯಾಗಿ ನಡೆದ ಅಕ್ಕ, ಹಲವಾರು ಭಕ್ತರಿಗೆ ಮಾದರಿಯಾಗಿದ್ದಾಳೆ.

    ಜೀವನ[ಬದಲಾಯಿಸಿ]

    • ಶರಣೆ ಅಕ್ಕಮಹಾದೇವಿಯವರು ಜನಿಸಿದ್ದು ಶಿವಮೊಗ್ಗ ಜಿಲ್ಲೆ, ಶಿಕಾರಿಪುರ-ಶಿರಾಳ ಕೊಪ್ಪದ ನಡುವೆ ಇರುವ ಉಡುತಡಿ ಅಥವಾ ಉಡಗಣಿ ಇಲ್ಲವೆ ಉಡುಗಣಿ ಎಂದೇ ಪ್ರಸಿದ್ದವಾಗಿರುವ ಪುಟ್ಟ ಗ್ರಾಮದಲ್ಲಿ [೨] . ಸುಮಾರು 15 ಕಿ.ಮಿ. ಹಾಗೂ ಶಿರಾಳ ಕೊಪ್ಪದಿಂದ 4 ಕಿ.ಮಿ.ದೂರದಲ್ಲಿದೆ. ಇದೀಗ ಇದು ಪ್ರವಾಸಿ ತಾಣವಾಗಿಯೂ ಪ್ರಸಿದ್ದವಾಗಿದೆ.
    • ಪರರ ಪಾಲಾಗಿದ್ದ ಇಲ್ಲಿರುವ ಕೌಶಿಕ ಮಹಾರಾಜರ ಕೋಟೆ ಹಾಗೂ ಅಕ್ಕನ ದೇವಸ್ಥಾನ ಇರುವ ಜಮೀನನ್ನು ಉಳಿಸಲು ಪ್ರಯತ್ನಿಸಿ, ಹೋರಾಟ ನಡೆಸಿ, ಯಶಸ್ವಿ ಯಾಗಿದ್ದು ಸಿರಿಗೆರೆಯ ಶ್ರೀಗಳಾಗಿದ್ದ ಲಿಂಗೈಕ್ಯ ಶ್ರೀ ಶಿವಕುಮಾರ ಶಿವಾಚಾರ್ಯ ಮಹಾಸ್ವಾಮೀಜಿಯವರು ಹಾಗೂ ಹಿರೇ ಜಂಬೂರಿನ ಸ್ವಾತಂತ್ರ ಹೋರಾಟೀಲರು. ಇದನ್ನು ಇವರು ಉಳಿಸಿ ಕೊಟ್ಟ ನಂತರ ಸರಕಾರ ಇತ್ತ ಗಮನ ಹರಿಸಿ,ಅದರ ಅಭಿವೃದ್ದಿಗೆ ಮುಂದಾಗಿದೆ.
    • ಇಂತಹ ಉಡುತಡಿಯಿಂದ ಎಲ್ಲವನ್ನೂ ತ್ಯಜಿಸಿ ಹೊರಟ ಅಕ್ಕಮಹಾದೇವಿಯವರು ಮುಂದೆ [ಬಸವ ಕಲ್ಯಾಣ]ದ ಅನುಭವ ಮಂಟಪದಲ್ಲಿ ಅಲ್ಲಮಪ್ರಭುಬಸವಣ್ಣಚೆನ್ನಬಸವಣ್ಣಸಿದ್ಧರಾಮ ಮೊದಲಾದ ಶರಣರೊಡನೆ ಕಲ್ಯಾಣದ ಕ್ರಾಂತಿಯಲ್ಲಿ ತಮ್ಮನ್ನು ತಾವೂ ತೊಡಗಿಸಿಕೊಂಡರಲ್ಲದೇ, "ಚನ್ನಮಲ್ಲಿಕಾರ್ಜುನ" ಎಂಬ ಅಂಕಿತ ನಾಮದಲ್ಲಿ ವಚನ ಸಾಹಿತ್ಯಕ್ಕೆ (ಶರಣ ಸಾಹಿತ್ಯ) ತಮ್ಮದೇ ಆದ ಸಾಹಿತ್ಯ ಸೇವೆಯನ್ನು ಸಲ್ಲಿಸಿದ್ದಾರೆ.

    ಅಕ್ಕನ ಅನುಭಾವ ಜೀವನ[ಬದಲಾಯಿಸಿ]

    ಅಕ್ಕಮಹಾದೇವಿ ಶರಣ ಚಳುವಳಿಯಲ್ಲಿ ಎತ್ತರದ ಚೇತನವಾಗಿ ಮೂಡಿ ಬಂದ ವ್ಯಕ್ತಿತ್ವ. ಅವರ ಇಡೀ ಜೀವನ ಕಥನ, ಐತಿಹ್ಯ, ವಿಸ್ಮಯ, ಪ್ರಭಾವಗಳಿಂದ ತುಂಬಿದ್ದರೂ ಸಹ, ಅವರ ಬಗ್ಗೆ ಅವರ ಸಮಕಾಲೀನ ವಚನಕಾರರೂ, ಅಕ್ಕನ ಕಾಲಕ್ಕೆ ತುಂಬಾ ಹತ್ತಿರದವನಾದ ಹರಿಹರ ಮಹಾಕವಿಯು ರಚಿಸಿರುವ 'ಮಹಾದೇವಿಯಕ್ಕಗಳ ರಗಳೆ' ಮತ್ತು ಸ್ವತಃ ಅಕ್ಕಮಹಾದೇವಿಯವರೇ ರಚಿಸುವ ವಚನಗಳೂ, ಅವರ ವ್ಯಕ್ತಿತ್ವವನ್ನು ಕಟ್ಟಿ ಕೊಡುವಲ್ಲಿ ಮಹತ್ವದ ಪಾತ್ರವನ್ನು ವಹಿಸುತ್ತವೆ. ಈ ಎಲ್ಲವನ್ನೂ ಗಮನಿಸಿದಾಗ ಅಕ್ಕಮಹಾದೇವಿಯವರ ಜೀವನ ಅಸಾಮಾನ್ಯವಾದ, ವೈಶಿಷ್ಟ್ಯತೆಯಿಂದ, ವೈಚಾರಿಕವಾದ, ಅನುಭಾವ ಪೂರ್ಣವಾದ , ನುಡಿ,ನಡೆಗಳೊಂದಾದ ಪರಿಯಲ್ಲಿರುವುದು ಕಂಡುಬರುತ್ತದೆ . ವಚನ ಚಳುವಳಿಯ ಸಮಯದಲ್ಲಿ, ಸಾಹಿತ್ಯದ ದೃಷ್ಟಿಯಿಂದ ಗಮನಿಸುವುದಾದರೆ, ಅಲ್ಲಮ ಮತ್ತು ಅಕ್ಕ ಅಂದಿನ ಅತ್ಯಂತ ವಿಶಿಷ್ಟ ಸಂವೇದನೆಯ ವ್ಯಕ್ತಿತ್ವದವರಾಗಿ ಗಮನ ಸೆಳೆಯುತ್ತಾರೆ. ಅನುಭಾವಿಯೂ, ಕವಿಯೂ ಆಗಿದ್ದ ಅಕ್ಕಮಹಾದೇವಿಯವರ ವಚನಗಳು, ಕನ್ನಡ ಸಾಹಿತ್ಯದ ಮೌಲಿಕ ಬರವಣಿಗೆಗಳಾಗಿವೆ. ವಚನಕಾರರಲ್ಲಿಯೇ ಅತ್ಯಂತ ಕಿರಿಯ ವಯಸ್ಸಿನ ಅನುಭಾವಿಯಾಗಿದ್ದರೂ ಸಹ, ವಿಶಿಷ್ಟ ಜೀವನಾನುಭವವನ್ನು ಹೊಂದಿದ ಕಾರಣದಿಂದ, ಅವರ ಬರಹಗಳು ಗಮನಾರ್ಹವಾಗಿವೆ.
    • ಉದಾ: 'ಲೋಕದ ಚೇಷ್ಟೆಗೆ ರವಿ ಬೀಜವಾದಂತೆ, ಕರಣಂಗಳ ಚೇಷ್ಟೆಗೆ ಮನಸ್ಸು ಬೀಜ',
    • 'ಬೆಟ್ಟದಾ ಮೇಲೊಂದು ಮನೆಯ ಮಾಡಿ , ಮೃಗಗಳಿಗೆ ಅಂಜಿದೊಡೆಂತಯ್ಯಾ' ,
    • 'ಹಸಿವಾದರೆ ಭಿಕ್ಷಾನ್ನಗಳುಂಟು, ತೃಷೆಯಾದರೆ ಕೆರೆ ಹಳ್ಳಗಳುಂಟು'- ಮುಂತಾದ ವಚನಗಳು ಅವರ ಲೋಕಾನುಭವ, ಜ್ಞಾನ ಸಂಪನ್ನತೆ, ಅಭಿವ್ಯಕ್ತಿ ಸಾಮರ್ಥ್ಯಕ್ಕೆ ನಿದರ್ಶನಗಳಾಗಿವೆ .

    ಅಕ್ಕನ ಹಿರಿಮೆ[ಬದಲಾಯಿಸಿ]

    ಶೂನ್ಯ ಸಂಪಾದನೆಕಾರರು 'ಮಹಾದೇವಿಯಕ್ಕಗಳ ಸಂಪಾದನೆ' ಎಂಬ ಒಂದು ಅಧ್ಯಾಯವನ್ನೇ ರಚಿಸಿ, ಅವರಿಗೆ ಗೌರವ ತೋರಿದ್ದಾರೆ. ಹರಿ ಮಹಾಕವಿಯ ಮಹಾದೇವಿಯಕ್ಕನ ರಗಳೆ, ಇಪ್ಪತ್ತನೆಯೆ ಶತಮಾನದ ನವೋದಯ ಕಾಲದ ಸಾಹಿತಿ ಎಚ್.ತಿಪ್ಪೇರುದ್ರಸ್ವಾಮಿಯವರ 'ಕದಳಿಯ ಕರ್ಪುರ' ಅಕ್ಕನವರ ವ್ಯಕ್ತಿತ್ವವನ್ನು ಕಟ್ಟಿಕೊಡುವ ಸಮರ್ಥ ಬರಹಗಳು . ಅಕ್ಕಮಹಾದೇವಿಯವರ ಜೀವನದಲ್ಲಿ ನಿರ್ಣಾಯಕ ಘಟನೆಗಳಲ್ಲಿ, ಪ್ರಮುಖವಾದವುಗಳು ಈ ಎರಡು,
    • ಒಂದನೆಯದು: ಅಧಿಕಾರ, ಸಂಪತ್ತು, ವೈಭವ, ಆಡಂಬರ, ಭೋಗ ಜೀವನಗಳನ್ನು ಸಂಪೂರ್ಣವಾಗಿ ತಿರಸ್ಕರಿಸಿ, ಈ ಎಲ್ಲ ಬಂಧನಗಳಿಂದ ಬಿಡುಗಡೆ ಪಡೆದು, ಸಾಮಾನ್ಯರಲ್ಲಿ ಸಾಮಾನ್ಯಳಂತೆ ಜನ ಜೀವನದಲ್ಲಿ ಬೆರೆತುದು; ಇದಕ್ಕಾಗಿ ಅರಸೊತ್ತಿಗೆಯನ್ನು ಎದುರು ಹಾಕಿಕೊಳ್ಳಲು ಹಿಂಜರಿಯದಿದ್ದುದು.
    • ಎರಡನೆಯದು : ಶರಣ ಚಳುವಳಿಯಲ್ಲಿ ಭಾಗವಹಿಸಲು ನಿರ್ಣಯಿಸಿ, ಅನುಭವ ಮಂಟಪವನ್ನು ಪ್ರವೇಶ ಮಾಡಿದುದು. ಅಕ್ಕನವರ ಅನುಭವ ಮಂಟಪದ ಪ್ರವೇಶದ ಮೊದಲ ದಿನವನ್ನು ಸ್ಮರಿಸದ ಶರಣ ಸಾಹಿತ್ಯಕಾರನಿಲ್ಲ, ಎನ್ನುವಷ್ಟು ಅಪೂರ್ವ ಸ್ವಾಗತ ಆಕೆಗೆ ಶರಣರಿಂದ ದೊರಕಿತು. ಅಲ್ಲಿ ಅಲ್ಲಮಪ್ರಭು ಮತ್ತು ಅಕ್ಕನವರ ನಡುವೆ ನಡೆಯಿತೆನ್ನಲಾದ ಸಂಭಾಷಣೆ ; ಅನುಭಾವದ ಉತ್ತುಂಗದ ಋಷಿವಾಣಿಯ ರೂಪದಲ್ಲಿ ವಚನಗಳಲ್ಲಿ ಸಂಗ್ರಹಿತವಾಗಿದೆ.
    ಕನ್ನಡ ಸಾಹಿತ್ಯ ಮೊದಲ ಬಂಡಾಯ ಕವಯತ್ರಿ ಮತ್ತು ವಚನಗಾರ್ತಿ ಹಾಗೂ ಮಹಿಳೆಯರ ಪ್ರತಿನಿಧಿಯಾಗಿ ಅಭಿವ್ಯಕ್ತಿಯಲ್ಲಿ ಪುರುಷ ಸಮಾಜವನ್ನು ಪ್ರತಿಭಟಿಸಿದವರು. ಸಾಮಾಜಿಕ ಬದಲಾವಣೆಗೆ ಶ್ರಮಿಸಿದವರು. "ಚನ್ನಮಲ್ಲಿಕಾರ್ಜುನ" ಎಂಬುದು ಈಕೆಯ ವಚನಗಳ ಅಂಕಿತ ನಾಮ. "ಯೋಗಾಂಗತ್ರಿವಿಧಿ" ಅಕ್ಕಮಹಾದೇವಿಯ ಪ್ರಮುಖ ಕೃತಿ.

    ಅಕ್ಕಮಹಾದೇವಿಯ ಆಯ್ದ ವಚನಗಳು[ಬದಲಾಯಿಸಿ]

    ೧.ಬೆಟ್ಟದ ಮೇಲೊಂದು ಮನೆಯ ಮಾಡಿ ಮೃಗಗಳಿಗಂಜಿದೊಡೆಂತಯ್ಯ?
    ಸಮುದ್ರದ ತಡಿಯಲೊಂದು ಮನೆಯ ಮಾಡಿ ನೊರೆ ತೆರೆಗಳಿಗಂಜಿದೊಡೆಂತಯ್ಯ?
    ಸಂತೆಯೊಳಗೊಂದು ಮನೆಯ ಮಾಡಿ ಶಬ್ದಕ್ಕೆ ನಾಚಿದೊಡೆಂತಯ್ಯ?
    ಚೆನ್ನಮಲ್ಲಿಕಾರ್ಜುನದೇವ ಕೇಳಯ್ಯù ಈ ಲೋಕದೊಳಗೆ ಹುಟ್ಟಿದ ಬಳಿಕ
    ಸ್ತುತಿ-ನಿಂದೆಗಳು ಬಂದರೆ ಮನದಲ್ಲಿ ಕೋಪವ ತಾಳದೆ ಸಮಾಧಾನಿಯಾಗಿರಬೇಕು.

    ೨.ಈಳೆ-ನಿಂಬೆ-ಮಾವು-ಮಾದಲಕ್ಕೆ
    ಹುಳಿ ನೀರೆರೆದವರಾರಯ್ಯ?
    ಕಬ್ಬು-ಬಾಳೆ-ನಾರಿವಾಳಕ್ಕೆ ಸಿಹಿ ನೀರೆರೆದವರಾರಯ್ಯ?
    ಕಳವೆ-ಶಾಲಿಗೆ ಓಗರದ ಉದಕವ ನೆರೆದವರಾರಯ್ಯ?
    ಮರುಗ-ಮಲ್ಲಿಗೆ-ಪಚ್ಚೆ-ಮುಡಿವಾಳಕ್ಕೆ
    ಪರಿಮಳದುದಕವ ನೆರೆದವರಾರಯ್ಯ?
    ಇಂತೀ ಜಲ ಒಂದೆ, ನೆಲ ಒಂದೆ, ಆಕಾಶ ಒಂದೆ!
    ಒಂದೇ ಜಲವು ಹಲವು ದ್ರವ್ಯಂಗಳ ಕೂಡಿ
    ತನ್ನ ಪರಿ ಬೇರಾಗಿಹ ಹಾಂಗೆ
    ಎನ್ನ ದೇವ ಚೆನ್ನಮಲ್ಲಿಕಾರ್ಜುನಯ್ಯನು
    ಹಲವು ಜಗಂಗಳ ಕೂಡಿ ಕೊಂಡಿದ್ದರೇನು? ತನ್ನ ಪರಿ ಬೇರೆ!

    ೩.ತನು ಕರಗದವರಲ್ಲಿ ಮಜ್ಜನವನೊಲ್ಲೆಯಯ್ಯ ನೀನು
    ಮನ ಕರಗದವರಲ್ಲಿ ಪುಷ್ಪವನೊಲ್ಲೆಯಯ್ಯ ನೀನು
    ಹದುಳಿಗರಲ್ಲದವರಲ್ಲಿ ಗಂಧಾಕ್ಷತೆಯನೊಲ್ಲೆಯಯ್ಯ ನೀನು
    ಅರಿವು ಕಣ್ತೆರೆಯದವರಲ್ಲಿ ಆರತಿಯನೊಲ್ಲೆಯಯ್ಯ ನೀನು
    ಭಾವಶುದ್ಧವಿಲ್ಲದವರಲ್ಲಿ ಧೂಪವನೊಲ್ಲೆಯಯ್ಯ ನೀನು
    ಪರಿಣಾಮಿಗಳಲ್ಲದವರಲ್ಲಿ ನೈವೇದ್ಯವನೊಲ್ಲೆಯಯ್ಯ ನೀನು
    ತ್ರಿಕರಣಶುದ್ಧವಿಲ್ಲದವರಲ್ಲಿ ತಾಂಬೂಲವನೊಲ್ಲೆಯಯ್ಯ ನೀನು
    ಹೃದಯಕಮಲ ಅರಳದವರಲ್ಲಿ ಇರಲೊಲ್ಲೆಯಯ್ಯ ನೀನು
    ಎನ್ನಲ್ಲಿ ಏನುಂಟೆಂದು ಕರಸ್ಥಲವನಿಂಬುಗೊಂಡೆ ಹೇಳಾ
    ಚೆನ್ನಮಲ್ಲಿಕಾರ್ಜುನಯ್ಯ.
    ೩.ನರ-ಜನ್ಮವ ತೊಡೆದು
    ಹರ-ಜನ್ಮವ ಮಾಡಿದ ಗುರುವೆ
    ಭವ ಬಂಧನವ ಬಿಡಿಸಿ
    ಪರಮಸುಖವ ತೋರಿದ ಗುರುವೆ
    ಭವಿ ಎಂಬುದ ತೊಡೆದು
    ಭಕ್ತೆ ಎಂದೆನಿಸಿದ ಗುರುವೆ
    ಚೆನ್ನಮಲ್ಲಿಕಾರ್ಜುನನ ತಂದೆನ್ನ ಕೈವಶಕೆ
    ಕೊಟ್ಟ ಗುರುವೆ ನಮೋ ನಮೋ

    ಅಕ್ಕ-ಅನುಭವ ಮಂಟಪದಲ್ಲಿ[ಬದಲಾಯಿಸಿ]

    ಒಮ್ಮೆ ಅನುಭವ ಮಂಟಪದಲ್ಲಿ ಚರ್ಚೆ ನಡೆಯುತ್ತಿರುವಾಗ ಮಹಾದೇವಿಯ ಆಗಮನವಾಗುತ್ತದೆ. ಆಗ ಮಡಿವಾಳ ಮಾಚಿದೇವರು ಎದ್ದು ನಿಂತು ಬುದ್ಡಿ ಉಡುತಡಿಯ ಮಹಾದೇವಿ ಅಕ್ಕನವರು ಆಗಮಿಸುತ್ತಿದ್ದಾರೆ ಎಂದು ಹೇಳುತ್ತಾರೆ. ಆಗ ಬಸವಣ್ಣನವರು ಮಾಚಿದೇವರೇ ಮಹಾದೇವಿ ಯವರನ್ನು ಮರ್ಯಾದೆಯಿಂದ ಕರೆ ತನ್ನಿ ಎಂದು ಹೇಳಲು ಮಾಚಿದೇವರು ಆಕೆಗೆ ನಡೆ ಮುಡಿಯನ್ನು ಹಾಸುತ್ತಾರೆ. ಆಗ ಮಹಾದೇವಿಯು ಮಡಿಯನ್ನು ಸರಿಸಿ ಒಳಗೆ ಬರುತ್ತಾಳೆ. ಅಲ್ಲಿಂದ ಮುಂದೆ ಅಲ್ಲಮಪ್ರಭುದೇವರು ಮತ್ತು ಅಕ್ಕಮಹಾದೇವಿಯ ನಡುವೆ ಈ ರೀತಿ ಸಂಭಾಷಣೆ ನಡೆಯುತ್ತದೆ.
    ಅಕ್ಕ : ಪ್ರಭುದೇವರ ಶ್ರೀ ಚರಣಗಳಿಗೆ ಶರಣು ಶರಣಾರ್ಥಿ,
    ಅಲ್ಲಮ : ನಿಲ್ಲು ತುಂಬು ಯೌವನದ ಸತಿ ನೀನು ಇತ್ತಲೇಕೆ ಬಂದೆಯವ್ವ. ಸತಿ ಎಂದರೆ ಮುನಿಯುವರು ನಮ್ಮ ಶರಣರು. ನಿನ್ನ ಪತಿಯ ಹೆಸರ ಹೇಳಿದರೆ ಬಂದು ಕುಳ್ಳಿರು ಅಲ್ಲವಾದರೆ ತೆರಳು ತಾಯೆ. ನಮ್ಮ ಶರಣರ ಸಂಘ ಸುಖದಲಿ ಸನ್ನಿಹಿತವ ಬಯಸುವೆಯಾದರೆ ನಿನ್ನ ಪತಿಯ ಹೆಸರ ಹೇಳಾ, ಎಲೆ ಅವ್ವಾ ಅಲ್ಲವಾದರೆ ನಿನಗೆ ಇಲ್ಲಿ ಸ್ಥಳವಿಲ್ಲ.
    ಅಕ್ಕ : ಹರನೇ ಗಂಡನಾಗಬೇಕೆಂದು ಅನಂತ ಕಾಲ ತಪಿಸಿದೆ ನೋಡಾ ! ಎನ್ನ ಜನ್ಮ ಜನ್ಮಾಂತರದ ಬಯಕೆ ಆ ಶಿವನೇ ಗಂಡನಾಗಬೇಕೆಂಬುದು ಅದು ಈ ಜನ್ಮದಲ್ಲಿ ಸಿದ್ದಿಸಿದೆ. ಗುರು ನನ್ನನ್ನು ಚನ್ನಮಲ್ಲಿಕಾರ್ಜುನನಿಗೆ ವಿವಾಹ ಮಾಡಿ ಕೊಟ್ಟಿದ್ದಾನೆ. ಗುರುವೇ ತೆತ್ತಿಗನಾದ, ಲಿಂಗವೇ ಮದುವಣಿಗನಾದ, ಆನು ಮದುವಣಗಿತ್ತಿಯಾದೆನು. ಈ ಭುವನವೆಲ್ಲವರಿಯಲು ಅಸಂಖ್ಯಾತರೆನ್ನ ತಾಯಿ ತಂದೆಗಳು, ಕೊಟ್ಟರು ಪ್ರಭುವಿನ ಮನೆಗೆ ಸಾದೃಶ್ಯವಪ್ಪ ವರನನ್ನು ನೋಡಿ, ಇದು ಕಾರಣ ಚೆನ್ನಮಲ್ಲಿಕಾರ್ಜುನನೇ ಗಂಡನೆನಗೆ ಮಿಕ್ಕಿನ ಲೋಕದ ಗಂಡರೆನಗೆ ಸಂಬಂಧ ವಿಲ್ಲವಯ್ಯಾ ಪ್ರಭುವೇ.
    ಅಲ್ಲಮ : ಈ ಮಾತಿನ ಚಮತ್ಕಾರವನ್ನು ನಮ್ಮ ಶರಣರು ಮೆಚ್ಚಲಾರರು ಮಹಾದೇವಿ. ನಿನ್ನ ಚರಿತ್ರೆಯನ್ನು ಲೋಕ ತಿಳಿಯದೆಂದು ಭಾವಿಸಬೇಡ. ಲಗ್ನವಾದ ಕೌಶಿಕನ ಮೇಲೆ ತಪ್ಪನ್ನು ಹೊರೆಸಿ ಅರಮನೆಯನ್ನು ಬಿಟ್ಟು ನಿರ್ವಾಣ ಶರೀರಿಯಾಗಿ ಹೊರಟು ಬಂದಿರುವೆ ಎಂಬ ಮಾತು ನಿಜವೇ ? ಪತಿಯ ಮೇಲೆ ತಪ್ಪನ್ನು ಹೊರಿಸಿ ಬರುವ ಸತೀಧರ್ಮವನ್ನು ಈ ನಮ್ಮ ಶರಣರು ಮೆಚ್ಚಲಾರರು.
    ಅಕ್ಕ : ನನ್ನ ಮದುವೆಯ ಕತೆಯನ್ನು ಪ್ರಪಂಚ ಹೇಗಾದರೂ ತಿಳಿದು ಕೊಂಡಿರಲಿ. ನಾನು ಮೊದಲಿನಿಂದಲೂ ಚನ್ನಮಲ್ಲಿಕಾರ್ಜುನನಿಗೆ ಮೀಸಲು ಹೆಣ್ಣು. ಸಾವ ಕೆಡುವ ಗಂಡಂದಿರನೆಂದೂ ಬಯಸಿದವಳಲ್ಲ. ಸೀಮೆ ಇಲ್ಲದ ನಿಸ್ಸೀಮ ಚಲುವನಿಗೆ ಮಾತ್ರ ಒಲಿದವಳು. ನನ್ನ ಜೀವನದಲ್ಲಿ ಕೌಶಿಕನ ಪ್ರಸಂಗ ಒಂದು ದೈವ ಕೃಪೆಯಂತೆ ಬಂದಿತಷ್ಟೇ. ಸ್ತ್ರೀಯ ಸೌಂದರ್ಯದ ವ್ಯರ್ಥ ವ್ಯಾಮೋಹವನ್ನು ಬಿಡಿಸಲು ದಿಗಂಬರಳಾಗಿ ಅರಮನೆಯನ್ನು ತ್ಯಜಿಸಿ ಬಂದೆ. ಸೌಂದರ್ಯದ ಹಂಗನ್ನು ಹರಿದೊಗೆದು ಬಂದಂತಹವಳು.
    ಅಲ್ಲಮ : ನಿನ್ನ ದೇಹದ ಮೋಹ ನಿನಗಿನ್ನು ಹೋಗಿಲ್ಲ, ನಿನ್ನ ಸೌಂದರ್ಯದ ಮೋಹ ನಿನಗಿನ್ನೂ ಉಳಿದಿದೆಯಲ್ಲವೇ?
    ಅಕ್ಕ : ಇಲ್ಲ, ಆ ಭಾವ ನನಗೆ ಎಳ್ಳಷ್ಟೂ ಉಳಿದಿಲ್ಲ, ಕಾಯ ಕರ್ರನೆ ಕಂದಿದರೇನಯ್ಯ ? ಕಾಯ ಮಿರ್ರನೆ ಮಿಂಚಿದರೇನಯ್ಯ ? ಅಂತರಂಗ ಶುದ್ಧವಾದ ಬಳಿಕ ಚನ್ನಮಲ್ಲಿಕಾರ್ಜುನನಿಗೆ ಒಲಿದ ಅಂಗವು ಹೇಗಿದ್ದರೇನಯ್ಯ ಪ್ರಭುವೇ ?
    ಅಲ್ಲಮ : ಇದು ಬರಿಯ ಆಡಂಬರದ ಮಾತು, ಮಾತಿನಂತೆ ನಡೆ ಇಲ್ಲದವರನ್ನು ಗುಹೇಶ್ವರ ಲಿಂಗ ಮೆಚ್ಚುವವನಲ್ಲ. ಅಂತರಂಗದ ನಾಚಿಕೆ ಬಹಿರಂಗದಲ್ಲಿ ತಲೆದೋರುತ್ತಿದೆ. ಸೀರೆಯನ್ನಳಿದು ಕೂದಲನ್ನೇಕೆ ಮರೆಮಾಡಿ ಕೊಳ್ಳಬೇಕಾಗಿತ್ತು, ಈ ವರ್ತನೆ ಒಪ್ಪವಲ್ಲ ಗುಹೇಶ್ವರ ಲಿಂಗಕ್ಕೆ.
    ಅಕ್ಕ : ನಿಜ. ಒಂದರ ಹಂಗನ್ನು ಬಿಟ್ಟು , ಇನ್ನೊಂದರ ಹಂಗನ್ನು ನಾನು ಹೊಂದಿದ್ದೇನೆಂದು ನೀವು ಹೇಳುವ ಮಾತು ನಿಜ. ಆದರೆ ಅದು ನನಗಾಗಿ ಅಲ್ಲ, ನಿಮಗಾಗಿ ಅಂದರೆ ಜನರ ಹಂಗಿಗಾಗಿ ಇದನ್ನು ಅವಲಂಬಿಸಿದ್ದೇನೆ. ಫಲ ಒಳಗೆ ಪಕ್ವವಾದಲ್ಲದೆ ಹೊರಗಣ ಸಿಪ್ಪೆ ಒಪ್ಪಗೆಡದು. ಕಾಮನ ಮುದ್ರೆಯ ಕಂಡು ನಿಮಗೆ ನೋವಾದಿತೆಂದು ಆ ಭಾವದಿಂದ ಮುಚ್ಚಿದೆ. ಇದಕ್ಕೆ ನೋವೇಕೆ ಕಾಡದಿರಣ್ಣ ಚನ್ನಮಲ್ಲಿಕಾರ್ಜುನನ ದೇವರ ದೇವನ ಒಳಗಾದವಳ.
    ಅಲ್ಲಮ : ಏನೂ ! ಫಲ ಪಕ್ವವಾದಲ್ಲದೆ ಹೊರಗಣ ಸಿಪ್ಪೆ ಒಪ್ಪಗೆಡದು ಎಂದೆಯಲ್ಲವೆ ನಾನು ಹೇಳುತ್ತೇನೆ ಕೇಳು, ಸಿಪ್ಪೆ ಒಪ್ಪಗೆಟ್ಟಾಗ ಹಣ್ಣಿನ ರಸ ಕೊಳಕಾಗುತ್ತದೆ ಅದನ್ನಾದರೂ ಮೆಚ್ಚುವುದು ಹೇಗೆ ?
    ಅಕ್ಕ : ಆ ಹಣ್ಣನ್ನು ನಾನು ಹಾಗೇ ಇಟ್ಟಿಲ್ಲ ಪ್ರಭುವೇ, ಎಂದೋ ಚನ್ನಮಲ್ಲಿಕಾರ್ಜುನನಿಗೆ ಸಮರ್ಪಿಸಿ ಬಿಟ್ಟಿದ್ದೇನೆ. ಅರಿಷಡ್ವರ್ಗಗಳನ್ನಳಿದು ನನ್ನ ದೇಹವನ್ನು ವ್ಯಾಪಿಸಿರುವ ಸಚ್ಛಿದಾನಂದಾತ್ಮಕವಾದ ರಸ ಅದು. ಸಿಪ್ಪೆ ಒಪ್ಪಗೆಟ್ಟರು ಕೊಳೆಯಲಾರದು, ನನ್ನ ಒಳ ಹೊರೆಗೆಲ್ಲವ ನಳಿದು ನನ್ನತನ ಒಂದೂ ಇಲ್ಲವೆಂದು ಎಂದೆಂದೂ ಅಳಿಯದ ಅಮರ ಪವಿತ್ರತೆಯನ್ನು ತಂದು ಕೊಟ್ಟಿದೆ ಪ್ರಭುವೆ.
    ಅಲ್ಲಮ : ಈ ಬಾಹ್ಯ ಬ್ರಹ್ಮದ ಬೆಡಗನ್ನು ನಾವು ಮೆಚ್ಚುವವರಲ್ಲ. ನಾ ಸತ್ತೆನೆಂದು ಹೆಣ ಕೂಗಿದುದುಂಟೆ ? ಬೈಚಿಟ್ಟ ಬಯಕೆ ಕರೆದುದುಂಟೆ ? ಹೆಪ್ಪಿಟ್ಟ ಹಾಲು ಸಿಹಿಯಪ್ಪುದೇ ? ಈ ಮಾತು ಒಪ್ಪವಲ್ಲ ಗುಹೇಶ್ವರ ಲಿಂಗದಲ್ಲಿ.
    ಅಕ್ಕ : ಸತ್ತ ಹೆಣ ಕೂಗಿದುದುಂಟು. ಮರೆತು ಒರಗಿ ಕನಸು ಕಂಡು ಅದನ್ನು ಹೇಳುವಲ್ಲಿ ಸತ್ತ ಹೆಣ ಎದ್ದಂತೆ ಆಯಿತು. ಹೆಪ್ಪಿಟ್ಟ ಹಾಲು ಗಟ್ಟಿ ತುಪ್ಪವಾಗಿ ಸಿಹಿಯಾಗಿತ್ತು. ಇದಕ್ಕೆ ತಪ್ಪು ಸಾಧಿಸಲೇಕೆ ಪ್ರಭುವೇ.
    ಅಲ್ಲಮ : ಅದೂ ಹೋಗಲಿ, ಅರಿಷಡ್ವರ್ಗಗಳಿಂದಲೇ ತುಂಬಿರುವ ಈ ಶರೀರದಲ್ಲಿದ್ದು ಅದನ್ನು ದಾಟಿದ್ದೇನೆ ಎಂದರೆ ಅದನ್ನಾದರೂ ನಂಬುವುದು ಹೇಗೆ ?
    ಅಕ್ಕ : ಕಾಮನ ಗೆದ್ದ ಠಾವನ್ನು ಹೇಳಬೇಕೆ ಪ್ರಭುವೇ ? ಕಾಮವನ್ನು ಗೆಲ್ಲುವುದಕ್ಕೆ ಆ ಕಾಮ ನನ್ನ ಮನಸ್ಸಿನಲ್ಲಿ ಎಂದೂ ಹುಟ್ಟಿಯೇ ಇಲ್ಲ. ಕೇಳಿ ಅಂಗದ ಭಂಗವ ಲಿಂಗ ಸುಖದಿಂದ ಗೆಲ್ಲಿದೆ. ಜೀವದ ಭಂಗವ ಶಿವಾನುಭವದಿಂದ ಗೆಲ್ಲಿದೆ. ಕರಗದ ಕತ್ತಲೆಯ ಬೆಳಗನ್ನುಟ್ಟು ಗೆಲ್ಲಿದೆ. ಜವ್ವನದ ಹೊರ ಮಿಂಚಿನಲ್ಲಿ ನಿಮ್ಮ ಕಣ್ಣಿಗೆ ಕಾಣುವ ಕಾಮನ ಸುಟ್ಟುರಿಯುವ ಭಸ್ಮವ ನೋಡಯ್ಯ. ಕಾಮನ ಕೊಂದು ಮನಸ್ಸಿಜನಾಗುಳಿದರೆ, ಮನಸಿಜನ ತಲೆ ಬರಹವ ತೊಡೆದೆನು. ಎನ್ನ ಮನಸ್ಸಿಜನ ಜನನಕ್ಕೆ ಅವಕಾಶವನ್ನೇ ಕಲ್ಪಿಸಿಕೊಟ್ಟಿಲ್ಲ. ಇದನ್ನು ತಮ್ಮಂತಹ ಕೆಲವರು ಮಾತ್ರವೇ ಅರ್ಥ ಮಾಡಿ ಕೊಳ್ಳಬಲ್ಲವರು ಪ್ರಭುವೇ.
    ಅಲ್ಲಮ : ನೋಡಿದೆಯಾ ಬಸವಣ್ಣ, ಮಹಾದೇವಿಯ ಈ ನಿಲುವನ್ನು ಲೋಕಕ್ಕೆ ಪ್ರಕಟ ಮಾಡಬೇಕೆಂದೇ ನಾನು ಇಷ್ಟು ನಿಷ್ಠುರನಾದೆ. ತಾಯೇ ನಿನ್ನ ಜ್ಞಾನ ಘನ, ನಿನ್ನ ವಿರತಿ ಘನ, ನೀನು ವೈರಾಗ್ಯ ನಿಧಿ. ನಿನ್ನನ್ನು ಪಡೆದ ಜಗತ್ತು ಪಾವನ. ಮಾಯೆ ನಿನ್ನ ಮುಟ್ಟಲಿಲ್ಲ, ಮರಹು ನಿನ್ನ ಸೋಂಕಲಿಲ್ಲ, ಕಾಮ ನಿನ್ನ ಕೆಡಿಸಲಿಲ್ಲ, ಮಹಾದೇವಿ ಅಕ್ಕ ನೀನು ವಿಶ್ವ ಸ್ತ್ರೀ ಕುಲದ ಜ್ಯೋತಿ. ದಿಟ್ಟ ಹೆಜ್ಜೆ, ಧೀರ ನುಡಿಯ ತಾಯಿ ನೀನು, ವಿನಯ ವಿಶ್ವಾಸಗಳ ರತ್ನಗಣಿ ನೀನು, ತಾಯೇ ಮಹಾದೇವಿ ನಿನ್ನ ಸ್ತ್ರೀ ಪಾದಗಳಿಗೆ ನಮೋ ನಮೋ ಎಂದೆನು. (ಅಲ್ಲಮಪ್ರಭು ಕೈ ಮುಗಿಯುವರು)
    ಬಸವಣ್ಣ : ಹೌದು ಪ್ರಭುವೇ, ಈಕೆ ನಮ್ಮೆಲ್ಲರ ಅಕ್ಕ. ನಮಗೆಲ್ಲರಿಗೂ ಗುರುವಾಗಬಲ್ಲ ಯೋಗ್ಯತೆಯುಳ್ಳವಳು. ಅಕ್ಕಮಹಾದೇವಿ ನಿನಗೆ ಶರಣು ಶರಣಾರ್ಥಿ. (ಬಸವಣ್ಣ ನವರು ಕೈಮುಗಿಯುವರು)
    ಅಕ್ಕ : ತಾವು ಹಾಗೆಲ್ಲಾ ಹೇಳಬಾರದು, ನಿಮ್ಮೆಲ್ಲರ ಕರುಣೆಯ ಶಿಶು ನಾನು, ನಿಮ್ಮೆದುರಿನಲ್ಲಿ ಅತಿ ಚಿಕ್ಕವಳು.
    ಚನ್ನಬಸವಣ್ಣ : ಇರಬಹುದು, ವಯಸ್ಸು ಅತಿ ಚಿಕ್ಕದೇ ಇರಬಹುದು. ಆದರೂ ನೀನು ಎಲ್ಲರಿಗೂ ಅಕ್ಕನಾಗಬಲ್ಲವಳು ತಾಯಿ. ಮಹಾದೇವಿ ಅಕ್ಕ ಹಿರಿತನ ಕೇವಲ ವಯಸ್ಸಿನಿಂದ ಮಾತ್ರವೇ ಬರುವುದಿಲ್ಲ. ಅಜ ಕಲ್ಪಕೋಟಿ ವರುಷದವರೆಲ್ಲರೂ ಹಿರಿಯರೇ ? ಹುತ್ತೇರಿ ಬೆತ್ತ ಬೆಳೆದ ತಪಸ್ವಿಗಳೆಲ್ಲರೂ ಹಿರಿಯರೇ ? ನಡು ಮುರಿದು, ತಲೆ ನಡುಗಿ, ಮತಿಗೆಟ್ಟು ಒಂದನಾಡ ಹೋಗಿ ಒಂಭತ್ತನಾಳುವ ಅಜ್ಞಾನಿಗಳೆಲ್ಲರೂ ಹಿರಿಯರೇ ? ;ಅನುವನರಿದು, ಘನವ ಬೆರೆಸಿ, ಹಿರಿದು ಕಿರಿದೆಂಬ ಭೇದವ ಮರೆತು ಕೂಡಲ ಚನ್ನಸಂಗಯ್ಯನಲ್ಲಿ ಬೆರೆಸಿ ಬೇರಿಲ್ಲದಿಪ್ಪ ಹಿರಿತನ ನಮ್ಮ ಮಹಾದೇವಿಯಕ್ಕಂಗಾಯಿತ್ತು.
    ಸಿದ್ದರಾಮ : ಅಹುದಹುದು ಮತ್ತೇನು, ಮರಹಿಂಗೆ ಹಿರಿದು ಕಿರಿದುಂಟಲ್ಲದೆ, ಅರಿವಿಂಗೆ ಹಿರಿದು ಕಿರಿದುಂಟೆ ಹೇಳಯ್ಯ ? ಜಾತಂಗೆ ಮರಣದ ಭಯ ಉಂಟಲ್ಲದೆ, ಅಜಾತಂಗೆ ಮರಣದ ಭಯವುಂಟೇ ಹೇಳಯ್ಯ? ಕಪಿಲಸಿದ್ಧ ಮಲ್ಲಿನಾಥನಲ್ಲಿ ಮಹಾದೇವಿಯಕ್ಕನ ನಿಲವಿಂಗೆ ಶರಣೆಂದು ಶುದ್ಧನಾದೆನು ಕಾಣಾ ಚನ್ನಬಸವಣ್ಣ.
    ಅಕ್ಕ : ಭಕ್ತಿ ಬಂಡಾರಿ ಬಸವಣ್ಣನವರ ಶ್ರೀ ಚರಣಗಳಿಗೆ ಶರಣು ಶರಣಾರ್ಥಿ.
    ಬಸವಣ್ಣ : ಶರಣು ತಾಯೇ ಶರಣು ಶರಣು.
    ಅಕ್ಕ : ಜ್ಞಾನ ನಿಧಿ ಚನ್ನಬಸವಣ್ಣನವರ ಶ್ರೀ ಚರಣಗಳಿಗೆ ಶರಣು ಶರಣಾರ್ಥಿ.
    ಚನ್ನಬಸವಣ್ಣ : ಶರಣು ತಾಯೇ ಶರಣು.
    ಅಕ್ಕ : ಧರ್ಮಯೋಗಿ ಸಿದ್ಧರಾಮಣ್ಣನವರ ಶ್ರೀ ಚರಣಗಳಿಗೆ ಶರಣು ಶರಣಾರ್ಥಿ.
    ಸಿದ್ಧರಾಮ : ಶರಣು ತಾಯೇ ಶರಣು.
    ಅಕ್ಕ : ಎಲ್ಲಾ ಶರಣ ಶರಣೆಯರಿಗೂ ಶರಣು ಶರಣಾರ್ಥಿ.
    ಎಲ್ಲರೂ : ಶರಣು ತಾಯೇ ಶರಣು ಶರಣು ಎಂದು ಎಲ್ಲಾ ಶರಣರು ನಮಸ್ಕರಿಸುವರು
    ಆಗ ಬಸವಣ್ಣನವರು ಅಕ್ಕನನ್ನು ಅಂದಿನ ಅನುಭವಮಂಟಪದ ಗೋಷ್ಠಿಯಲ್ಲಿ ಪಾಲ್ಗೊಳ್ಳುವಂತೆ ಹೇಳುವರು. ಆಗ ಅಕ್ಕನು ಶರಣ ಶರಣೆಯರ ನಡುವu
    ಕುಳಿತು ಅಂದಿನ ಗೋಷ್ಠಿಯಲ್ಲಿ ಭಾಗವಹಿಸುವಳು.

    ಲಿಂಗೈಕ್ಯ[ಬದಲಾಯಿಸಿ]

    ಕೊನೆಗೆ ತನ್ನ ಇಷ್ಟದೈವ ಮಲ್ಲಿಕಾರ್ಜುನನಲ್ಲಿ ಶ್ರಿಶೈಲದ ಕದಳಿವನದಲ್ಲಿಐಕ್ಯರಾದರು ಅಕ್ಕಮಹಾದೇವಿ.

    ಈ ಪುಟ ಕರ್ನಾಟಕ ಸಂಗೀತದ ಪ್ರಮುಖರಾದ ಪುರಂದರದಾಸರ ಬಗ್ಗೆ "ಪುರಂದರದಾಸ" ಹೆಸರಿನ ಕನ್ನಡ ಚಲನಚಿತ್ರಕ್ಕೆ ಈ ಪುಟವನ್ನು ನೋಡಿ
    ಪುರಂದರದಾಸರು
    ಪುರಂದರದಾಸರು
    ಜನನಶ್ರೀನಿವಾಸ ನಾಯಕ
    1480
    ಪುರಂದರಗಡ, ಭಾರತ
    ಮರಣ1564
    ವೃತ್ತಿಹರಿದಾಸರು, ಕೀರ್ತನಕಾರರು,
    ಪ್ರಕಾರ/ಶೈಲಿಕೀರ್ತನೆಉಗಾಭೋಗ, ಪಿಳ್ಳಾರಿ ಗೀತೆಗಳು
    ಶ್ರೀ ಪುರಂದರದಾಸರು (೧೪೮೦ – ೧೫೬೪)[೧] ಕರ್ನಾಟಕ ಸಂಗೀತ ಪದ್ಧತಿಯ ಪಿತಾಮಹ ಎಂದು ಹೆಸರಾದವರು. ದಾಸ ಪದ್ಧತಿಯ ಅನೇಕ ಪ್ರಮುಖರಲ್ಲಿ ಮುಖ್ಯವಾಗಿ ಪುರಂದರದಾಸ, ಶ್ರೀಪಾದರಾಯಕನಕದಾಸ, ಜಗನ್ನಾಥದಾಸ, ವಿಜಯದಾಸ ಮತ್ತು ಕಮಲೇಶ ವಿಠ್ಠಲ ಮೊದಲಾದವರು ಸಂಗೀತದ ಮೂಲಕ ಭಕ್ತಿಮಾರ್ಗವನ್ನು ಬೋಧಿಸಿದವರು. ಪುರಂದರದಾಸರ ಎಲ್ಲ ಕೀರ್ತನೆಗಳು ಪುರಂದರ ವಿಠ್ಠಲನನ್ನು (ವಿಷ್ಣು) ನಮಿಸುತ್ತಾ ಕೊನೆಗೊಳ್ಳುತ್ತವೆ. ಸಾವಿರಾರು ಕೀರ್ತನೆಗಳನ್ನು ರಚಿಸಿದ ಪುರಂದರದಾಸರ ಸುಮಾರು ೧೦೦೦ ಕೀರ್ತನೆಗಳು ಇಂದಿಗೂ ಉಳಿದಿವೆ.

    ಜೀವನ[ಬದಲಾಯಿಸಿ]

    ಜನನ ಇವರ ಮೊದಲ ಹೆಸರು ಶ್ರೀನಿವಾಸ ನಾಯಕ, ಜನ್ಮ ಸ್ಥಳ ಪುರಂದರಗಡ, ತಂದೆ ವರದಪ್ಪನಾಯಕ, ತಾಯಿ ಲಕ್ಷ್ಮಿದೇವಿ. ಪುರಂದರದಾಸರ ತಂದೆ ವರದಪ್ಪ ನಾಯಕ ಲೇವಾದೇವಿ ವೃತ್ತಿಯಲ್ಲಿದ್ದವರು. ಅನೇಕ ವರ್ಷಗಳ ಕಾಲ ಮಕ್ಕಳಾಗದ ಕಾರಣ ತಿರುಪತಿ ಶ್ರೀನಿವಾಸನಿಗೆ ಪ್ರಾರ್ಥನೆ ಸಲ್ಲಿಸಿದ ಮೇಲೆ ಮಗುವಾಯಿತು ಎಂಬ ನಂಬಿಕೆಯಿದೆ. ಇವರು ನಾಯಕ ಜನಾಂಗದವರಿಂದಲೇ ಅವರು ಮಗನಿಗೆ ಶ್ರೀನಿವಾಸ ನಾಯಕ ಎಂದು ಹೆಸರಿಟ್ಟರಂತೆ.

    ವೈರಾಗ್ಯ[ಬದಲಾಯಿಸಿ]

    ಶ್ರೀನಿವಾಸ ನಾಯಕ ಬೆಳೆದ ನಂತರ ತಂದೆಯ ವೃತ್ತಿಯನ್ನೇ ಮುಂದುವರಿಸಿದ. ಆದರೆ ಅತ್ಯಂತ ಜಿಪುಣನೆಂದು ಹೆಸರಾದ ಶ್ರೀನಿವಾಸ, ತಂದೆ ಅಸ್ವಸ್ಥರಾದಾಗಲೂ ಹಣ ಖರ್ಚು ಮಾಡಲು ತಡೆದನಂತೆ. ಶ್ರೀನಿವಾಸನ ಪತ್ನಿ ಸರಸ್ವತಿ ದಾನಶೀಲೆಯಾಗಿ, ಪತಿಯ ಕೋಪ ಅವಳ ಮೇಲೆ ಬೀಳುತ್ತಿತ್ತು ಎಂದು ಹೇಳುತ್ತಾರೆ. ಅವರ ಸಂಸಾರ ಮೂಲತಃ ಪಂಡರಾಪುರ/ ಪಂಡರಾಪುರದಲ್ಲಿದ್ದರೂ ಶ್ರೀನಿವಾಸ ನಂತರದ ವರ್ಷಗಳಲ್ಲಿ ಹಂಪೆಯಲ್ಲಿದ್ದನೆಂದು ತೋರುತ್ತದೆ.

    ಐತಿಹ್ಯ[ಬದಲಾಯಿಸಿ]

    ವಿಠ್ಠಲ (ವಿಷ್ಣು) ಬಡ ಬ್ರಾಹ್ಮಣನ ವೇಷದಲ್ಲಿ ಒಮ್ಮೆ ಶ್ರೀನಿವಾಸನ ಅಂಗಡಿಗೆ ಬಂದು ಮಗನ ಉಪನಯನಕ್ಕೆ ಹಣ ಬೇಡಿದನಂತೆ. ಜಿಪುಣ ಶ್ರೀನಿವಾಸ ಪ್ರತಿ ದಿನವೂ ಮಾರನೆಯ ದಿನ ಬರಹೇಳುತ್ತ, ಆರು ತಿಂಗಳುಗಳ ಕಾಲ ಮುಂದೆ ಹಾಕಿದನಂತೆ. ಕೊನೆಗೆ ಬ್ರಾಹ್ಮಣನ ಕಾಟ ತಡೆಯಲಾರದೆ ಒಂದು ಸವಕಲು ನಾಣ್ಯವನ್ನು ಕೊಟ್ಟನಂತೆ. ವಿಠ್ಠಲ ಈಗ ಶ್ರೀನಿವಾಸನ ಮನೆಗೆ ತೆರಳಿ ಆರು ತಿಂಗಳುಗಳ ಕಾಲ ಒಬ್ಬ ವರ್ತಕ ತನ್ನನ್ನು ಸತಾಯಿಸಿ ಕೊನೆಗೆ ಸವಕಲು ನಾಣ್ಯ ಕೊಟ್ಟ ಕಥೆ ಹೇಳಿದನಂತೆ. ಮಾರನೇ ದಿನ ಅದೇ ಬ್ರಾಹ್ಮಣ ಮನೆಗೆ ಬಂದು ಸರಸ್ವತಿಯ ಬಳಿ ತನ್ನ ಮಗನ ಉಪನಯನದ ಬಗ್ಗೆ ಹೇಳಿ ಅವಳಿಂದ ಸಹಾಯ ಯಾಚಿಸುತ್ತಾನೆ. ಸರಸ್ವತಿ ಮರುಕದಿಂದ ತನ್ನ ಬಳಿ ಯವುದೇ ಧನ ಆಭರಣಗಳಿಲ್ಲ ಎಲ್ಲವೂ ತನ್ನ ಗಂಡನ ಬಳಿ ಇದೆ. ಅವರ ಅನುಮತಿ ಇಲ್ಲದೇ ಏನನ್ನೂ ಕೊಡುವ ಪರಿಸ್ಥಿತಿಯಲ್ಲಿಲ್ಲ ಎಂದು ಬೇಸರ ಪಡುತ್ತಾಳೆ. ಆಗ ಆ ಬ್ರಾಹ್ಮಣ ನಿನ್ನ ತವರಿನಲ್ಲಿ ನಿನಗೆ ಕೊಟ್ಟ ಮೂಗುತಿಯ ಮೇಲೆ ನಿನ್ನ ಅಧಿಕಾರವಿದೆ. ಅದನ್ನೇ ಕೊಡು ಎಂದಾಗ, ಅವನಿಗೆ ತನ್ನ ಮೂಗುತಿಯನ್ನು ತೆಗೆದು ಕೊಟ್ಟಳಂತೆ. ಬ್ರಾಹ್ಮಣ ತಕ್ಷಣ ಮೂಗುತಿಯನ್ನು ಶ್ರೀನಿವಾಸನ ಅಂಗಡಿಗೆ ಒಯ್ದು ಅದನ್ನು ಅಡವಿಡಲು ಪ್ರಯತ್ನಿಸಿದನಂತೆ. ಶ್ರೀನಿವಾಸ ಆ ಮೂಗುತಿಯನ್ನು ಗುರುತಿಸಿ, ಹಣಕ್ಕೆ ನಾಳೆ ಬರುವಂತೆ ಬ್ರಾಹ್ಮಣನಿಗೆ ಹೇಳಿ, ಅದನ್ನು ಡಬ್ಬಿಯಲ್ಲಿಟ್ಟು ತಕ್ಷಣ ಮನೆಗೆ ಬಂದು ಪತ್ನಿಯ ಬಳಿ ಮೂಗುತಿಯನ್ನು ತೋರಿಸಲು ಹೇಳಿದನಂತೆ. ಹೆದರಿದ ಹೆಂಡತಿ ಸ್ನಾನ ಮಾಡುವಾಗ ತೆಗೆದಿಟ್ಟಿದ್ದೆ, ತರುತ್ತೇನೆಂದು ಒಳಗೆ ಹೋಗಿ, ಸ್ನಾನ ಕೊಠಡಿಯಲ್ಲಿ ವಿಷ ಕುಡಿಯುವ ಪ್ರಯತ್ನ ನಡೆಸಿದಾಗ ಅವಳ ವಿಷದ ಬಟ್ಟಲಿನೊಳಕ್ಕೆ ಮೇಲಿನಿಂದ ಮೂಗುತಿ ಬಿದ್ದಿತಂತೆ. ಅದನ್ನು ತಂದು ಶ್ರೀನಿವಾಸನಿಗೆ ಕೊಡುತ್ತಾಳೆ. ಅಂಗಡಿಗೆ ಹಿಂದಿರುಗಿ ಬಂದ ಶ್ರೀನಿವಾಸ ಡಬ್ಬಿಯನ್ನು ತೆಗೆದು ನೋಡಿದರೆ ಅಲ್ಲಿ ಇಟ್ಟಿದ್ದ ಮೂಗುತಿ ಮಾಯವಾಗಿತ್ತಂತೆ. ಆಗ ಅವನಿಗೆ ಬಂದ ಬ್ರಾಹ್ಮಣ ಬೇರೆ ಯಾರೂ ಅಲ್ಲ, ತನ್ನನ್ನು ಪರೀಕ್ಷಿಸಲು ಸ್ವತಃ ನಾರಾಯಣನೇ ಬ್ರಾಹ್ಮಣ ವೇಷದಲ್ಲಿ ಬಂದಿದ್ದನೆಂದು ಅರಿತು, ತನ್ನ ಬಗ್ಗೆ ತಾನೇ ನಾಚಿಕೆ ಪಟ್ಟುಕೊಂಡ ಶ್ರೀನಿವಾಸ, ತನ್ನ ಶ್ರೀಮಂತಿಕೆಯನ್ನು ತೊರೆದು ಹರಿದಾಸನಾಗುವ ನಿರ್ಧಾರ ತೆಗೆದುಕೊಂಡನಂತೆ. ದೇವರು ದಾರಿ ತೋರಿಸಿದ್ದರ ಬಗ್ಗೆ ಕೃತಜ್ಞತೆಗಾಗಿ ತಮ್ಮ ಹೆಂಡತಿಯ ಜ್ಞಾಪಕಾರ್ಥ ಒಂದು ಕೀರ್ತನೆಯನ್ನೂ ಪುರಂದರದಾಸರು ರಚಿಸಿದ್ದಾರೆ. ನಂತರ ಶ್ರೀನಿವಾಸ ನಾಯಕ 'ಪುರಂದರದಾಸ' ಎಂಬ ಹೆಸರನ್ನು ಪಡೆದರು.

    ತಮ್ಮ ಹೆಂಡತಿಯ ಜ್ಞಾಪಕಾರ್ಥ ರಚಿಸಿದ ಕೀರ್ತನೆ[ಬದಲಾಯಿಸಿ]

    • ಆದದ್ದೆಲ್ಲ ಒಳಿತೆ ಆಯಿತು
    • ರಚನೆ: ಶ್ರೀ ಪುರಂದರದಾಸರು
    • ರಾಗ : ಪಂತುರಾವಳಿ ; ತಾಳ : ಆದಿತಾಳ
    ಆದದ್ದೆಲ್ಲ ಒಳಿತೆ ಆಯಿತು ನಮ್ಮ
    ಶ್ರೀಧರ ಸೇವೆ ಮಾಡಲು ಸಾಧನ ಸಂಪತ್ತಾಯಿತು;

    ದಂಡಿಗೆ ಬೆತ್ತ ಹಿಡಿಯೊದಕ್ಕೆ
    ಮಂಡೆ ಮಾಚಿ ನಾಚುತಲಿದ್ದೆ
    ಹೆಂಡತಿ ಸಂತತಿ ಸಾವಿರವಾಗಲಿ
    ದಂಡಿಗೆ ಬೆತ್ತ ಹಿಡಿಸಿದಳಯ್ಯ

    ಗೋಪಾಳ ಬುಟ್ಟಿ ಹಿಡಿಯೊದಕ್ಕೆ
    ಭೂಪತಿಯಂತೆ ಗರ್ವಿಸುತಿದ್ದೆ
    ಆ ಪತ್ನೀ ಕುಲ ಸಾವಿರವಾಗಲಿ
    ಗೋಪಾಳ ಬುಟ್ಟಿ ಹಿಡಿಸಿದಳಯ್ಯ

    ತುಳಸಿ ಮಾಲೆ ಹಾಕುವುದಕ್ಕೆ
    ಅರಸನಂತೆ ನಾಚುತಲಿದ್ದೆ
    ಸರಸಿಜಾಕ್ಷ ಪುರಂದರ ವಿಠ್ಠಲ
    ತುಳಸಿ ಮಾಲೆ ಹಾಕಿಸಿದನಯ್ಯ

    ಕವಿ ಮತ್ತು ಸಂಗೀತಗಾರ[ಬದಲಾಯಿಸಿ]

    ಪುರಂದರದಾಸರ ಪದಗಳು ಪ್ರಾಸ ಮತ್ತು ಅರ್ಥದಲ್ಲಿ ಶ್ರೀಮಂತವಾಗಿವೆ. ಉದಾಹರಣೆಗೆ:
    "ಕುದುರೆ ಅಂದಣ ಆನೆ ಬಯಸೋದು ನರಚಿತ್ತ
    ಪಾದಚಾರಿ ಆಗೋದು ಹರಿ ಚಿತ್ತವಯ್ಯ"
    ಪುರಂದರದಾಸರ ಪದಗಳು ಮುಂದೆ ಕರ್ನಾಟಕ ಸಂಗೀತ ಪದ್ಧತಿಯ ಬುನಾದಿಯಾದವು. ಶಾಸ್ತ್ರೀಯ ಸಂಗೀತವನ್ನು ಶ್ರೀ ಸಾಮಾನ್ಯನಿಗೆ ಪರಿಚಯ ಮಾಡಿಕೊಡಲು ಯತ್ನಿಸಿದ ಪುರಂದರದಾಸರು ಮಾಯಾಮಾಳವಗೌಳ ರಾಗದಿಂದ ಹಿಡಿದು ಹೊಸಬರಿಗೆ ಶಾಸ್ತ್ರೀಯ ಸಂಗೀತವನ್ನು ಕಲಿಸಿ ಕೊಡುವ ದಾರಿಯ ಬಗೆಗೆ ಯೋಚಿಸಿದರು. ಈಗಲೂ ದಕ್ಷಿಣ ಭಾರತದ ಶಾಸ್ತ್ರೀಯ ಸಂಗೀತದ ಪಾಠಗಳು ಪುರಂದರದಾಸರ ಸರಳೆ, ಜಂಟಿ ವರಸೆಗಳೊಂದಿಗೇ ಆರಂಭಿಸಲ್ಪಡುತ್ತವೆ. ಪುರಂದರದಾಸರ 'ಪಿಳ್ಳಾರಿ ಗೀತೆಗಳು' (ಉದಾ: ಲಂಬೋದರ ಲಕುಮಿಕರ...., ಕೆರೆಯ ನೀರನು ಕೆರೆಗೆ ಚೆಲ್ಲಿ.....ಇತ್ಯಾದಿ) ಸಂಗೀತದ ಸ್ವರ- ಸಾಹಿತ್ಯ- ತಾಳಗಳ ಸಂಯೋಜನೆಯನ್ನು ಅಭ್ಯಸಿಸಲು ಮೊದಲ ಮೆಟ್ಟಿಲು. ಕರ್ನಾಟಕ ಶಾಸ್ತ್ರೀಯ ಸಂಗೀತದ ತ್ರಿಮೂರ್ತಿಗಳಲ್ಲೊಬ್ಬರಾದ ಶ್ರೀ ತ್ಯಾಗರಾಜರು ತಮ್ಮ "ಪ್ರಹ್ಲಾದ ಭಕ್ತಿ ವಿಜಯಮ್" ಎಂಬ ಲೇಖನದಲ್ಲಿ ಶ್ರೀ ಪುರಂದರ ದಾಸರನ್ನು ತಮ್ಮ ಸಂಗೀತ ಗುರುಗಳೆಂದು ಹೇಳಿಕೊಂಡಿದ್ದಾರೆ. ಹರಿನಾಮಸ್ಮರಣೆಯ ರೂಪದಲ್ಲಿ ರಚಿಸಿದ ಅವರ ಕೃತಿಗಳು ದೇವರನಾಮಗಳಾಗಿ ಪ್ರಸಿದ್ಧವಾಗಿವೆ. ಅವರ ಹರಿಭಕ್ತಿ ಹಾಗೂ ಸಂಗೀತದಲ್ಲಿನ ಪಾಂಡಿತ್ಯ ಕನ್ನಡ ಸಾಹಿತ್ಯದಲ್ಲೇ ವಿಶಿಷ್ಟವಾದ ಸ್ಥಾನವನ್ನು ಪಡೆದು ದಾಸ ಸಾಹಿತ್ಯವನ್ನು ಶ್ರೀಮಂತವಾಗಿಸಿವೆ. ಕರ್ನಾಟಕ ಶಾಸ್ತ್ರೀಯ ಸಂಗೀತದ ಪಿತಾಮಹರಾದ ಪುರಂದರದಾಸರ ಸಾಧನೆಯನ್ನು ಕಂಡ ಸರ್ವರೂ 'ದಾಸರೆಂದರೆ ಪುರಂದರದಾಸರಯ್ಯಾ..!' ಎಂದು ಕೊಂಡಾಡಿದ್ದಾರೆ. ಇವರ ಎಲ್ಲ ಕೀರ್ತನೆಗಳೂ ಕನ್ನಡ ಭಾಷೆಯಲ್ಲಿದ್ದು, ಭಕ್ತಿ ಮಾರ್ಗವನ್ನು ಜನಸಾಮಾನ್ಯರಿಗೆ ಪರಿಚಯ ಮಾಡಿಕೊಡುವ ಉದ್ದೇಶವನ್ನು ಹೊಂದಿವೆ. ಕರ್ನಾಟಕ ಸಂಗೀತಗಾರರಲ್ಲಿ ಪುರಂದರದಾಸರ ಕೀರ್ತನೆಗಳ ಪರಿಚಯ ಇಲ್ಲದವರು ಇಲ್ಲವೇ ಇಲ್ಲವೆನ್ನಬಹುದು. ಶ್ರೀ ಪುರಂದರದಾಸರು ೫ ಲಕ್ಷ ಹಾಡುಗಳನ್ನು ರಚನೆ ಮಾಡಬೇಕೆಂಬ ಉದ್ದೇಶವಿಟ್ಟುಕೊಂಡಿದ್ದರು; ಅವರು ೪,೭೫,೦೦೦ ಹಾಡುಗಳನ್ನು ರಚನೆ ಮಾಡಿ ಅವತಾರ ಮುಗಿಸಿದರು; ಅವರ ಮಗ ಮಧ್ವಪತಿದಾಸರು ಉಳಿದ ೨೫,೦೦೦ ಹಾಡುಗಳನ್ನು ರಚನೆ ಮಾಡಿದರು ಎಂದು ಹೇಳಲಾಗುತ್ತಿದೆ....

    ಬಾಹ್ಯ ಸಂಪರ್ಕಗಳು[ಬದಲಾಯಿಸಿ]


    ಸರ್ವಜ್ಞ (ಸಂಸ್ಕೃತದಲ್ಲಿ ಎಲ್ಲವನ್ನೂ ತಿಳಿದವ ಎನ್ನಲಾಗಿದೆ). ಈತ ಕನ್ನಡದ ತ್ರಿಪದಿ ಸಾಹಿತ್ಯದ ಪ್ರಮುಖ ಕವಿ. ಪ್ರಮುಖವಾಗಿ ತ್ರಿಪದಿಗಳೆಂಬ ಮೂರು ಸಾಲಿನ ವಚನಗಳನ್ನು ರಚಿಸಿರುವ ಈತನ ಕಾಲದ ಕುರಿತು ಹೆಚ್ಚು ತಿಳಿದಿಲ್ಲ. ಇತರ ಲೇಖಕರು ಅವನ ಬಗ್ಗೆ ಮಾಡಿರುವ ಪ್ರಸ್ತಾಪಗಳಿಂದ ಮತ್ತು ಸರ್ವಜ್ಞನ ಭಾಷಾ ಪ್ರಯೋಗದ ಲಕ್ಷಣಗಳ ಅಧ್ಯಯನದಿಂದ ಈತನು ಜೀವಿಸಿದ್ದ ಕಾಲ ಸುಮಾರಾಗಿ ೧೭ನೇ ಶತಮಾನದ ಆದಿಭಾಗ ಎಂದು ಪ್ರತಿಪಾದಿಸಲಾಗಿದೆ. ಪ್ರಾಯಶಃ ಪುಷ್ಪದತ್ತ ಈತನ ನಿಜನಾಮವಾಗಿದ್ದು, ಸರ್ವಜ್ಞ ಎಂಬುದು ಈತನ ಕಾವ್ಯನಾಮ.[೧]

    ಜನನ ಮತ್ತು ಬಾಲ್ಯ[ಬದಲಾಯಿಸಿ]

    • ಸರ್ವಜ್ಞ ಜನಿಸಿದ್ದು ಇಂದಿನ ಹಾವೇರಿ ಜಿಲ್ಲೆಯ ರಟ್ಟೀಹಳ್ಳಿ ತಾಲೂಕಿನ ಕುಮದ್ವತಿ ನದಿ ದಂಡೆಯ ಮೇಲಿರುವ ಮಾಸೂರ ಅಂಬಲೂರಲ್ಲಿ. ಇದು ಈಗ ಸರ್ವಜ್ಞನ ಮಾಸೂರು ಎಂದೇ ಪ್ರಸಿದ್ಧಿ ಪಡೆದಿದೆ.
    • ಅವನ ಹೆತ್ತಮ್ಮ ಕುಂಬಾರ ಮಾಳೆ, ಪ್ರೀತಿಯಿಂದ ನಾಮಕರಣ ಮಾಡಿದ ಹೆಸರು -ಪುಷ್ಪದತ್ತ. ಸಾಕು ತಾಯಿ ಮಲ್ಲಕ್ಕ. ತಂದೆ ಬಸವರಸ. ಹಾವೇರಿ ಜಿಲ್ಲೆಯ ಹಿರೇಕೇರೂರು ತಾಲ್ಲೂಕು ಮಾಸೂರಿನಲ್ಲಿ ವಾಸವಾಗಿದ್ದ ಆರಾಧ್ಯ ಬ್ರಾಹ್ಮಣ, ಬಸವರಸನು, ಎಷ್ಟು ದಿನಗಳಾದರೂ ಮಕ್ಕಳಾಗ ದಿದ್ದಾಗ ಮಲ್ಲಮ್ಮನನ್ನು ಸಮಾಧಾನ ಮಾಡಿ, ಪುತ್ರಸಂತಾನದ ವರ ಪಡೆಯಲು ಕಾಶೀ ಕ್ಷೇತ್ರಕ್ಕೆ ಹೊರಡುತ್ತಾನೆ.
    • ಭಕ್ತಿಯಿಂದ ಸೇವೆ ಮಾಡಿದ ಬಸವರಸನಿಗೆ ಕಾಶಿ ವಿಶ್ವನಾಥನು ಕನಸಿನಲ್ಲಿ ಪ್ರತ್ಯಕ್ಷನಾಗಿ, 'ನಿನಗೆ ಪುತ್ರಪ್ರಾಪ್ತಿಯಾಗುವುದು. ಹುಟ್ಟುವ ಮಗನು ನನ್ನ ಪ್ರಸಾದದಿಂದ ಮಹಾಜ್ಞಾನಿಯಾಗುವನು' ಎಂದು ಹೇಳಲು ಆನಂದಭರಿತನಾದ ಬಸವರಸನು, ಪ್ರಾತಃಕಾಲದಲ್ಲಿ ಎದ್ದು, ಪವಿತ್ರ ಗಂಗಾಸ್ನಾನ ಮಾಡಿ, ವಿಶ್ವನಾಥನನ್ನು ಅರ್ಚಿಸಿ, ಪ್ರಸಾದಗಳೊಂದಿಗೆ ತನ್ನ ಗ್ರಾಮದ ಹಾದಿ ಹಿಡಿದನು.
    • ಹಗಲಿರುಳು ಪ್ರಯಾಣ ಮಾಡಿ ಅನೇಕ ಗ್ರಾಮಗಳಲ್ಲಿ ವಿಶ್ರಮಿಸಿ, ದಾರಿಯಲ್ಲಿ ಸಿಕ್ಕ 'ಅಂಬಲೂರ'[ಮಾಸೂರು] ಎಂಬ ಗ್ರಾಮಕ್ಕೆ ಬರುವಾಗ ಭಯಂಕರ ಗುಡುಗು, ಸಿಡಿಲುಗಳಿಂದ ಮಳೆ ಸುರಿಯುತ್ತಿತ್ತು.ಕುಮದ್ವತಿ ನದಿ ಪ್ರವಾಹದಿಂದ ತುಂಬಿ ಹರಿಯುತ್ತಿತ್ತು. ಸಮೀಪದಲ್ಲಿದ್ದ ಕುಂಬಾರಸಾಲೆಯಲ್ಲಿ ಕುಂಬಾರ ಮಾಳಿ ಎಂಬುವಳ ಮನೆಯಲ್ಲಿ ವಸತಿ ಮಾಡಿದನು. ಕಾಲಧರ್ಮ ಸಂಯೋಗದಿಂದ ಮಾಳಿಯಲ್ಲಿ ವ್ಯಾಮೋಹಗೊಂಡ ಬಸವರಸನಿಗೆ ಕಾಮ ವಿಕಾರವಾಯಿತು.
    • ಕಾಶಿಯಿಂದ ತಂದ ತೀರ್ಥ ಪ್ರಸಾದಗಳನ್ನು ಕೊಟ್ಟು ಅವಳ ಸಂಗ ಮಾಡಿದನು. ೯ ತಿಂಗಳ ನಂತರ ಮಾಳಿ ದಿವ್ಯ ತೇಜಸ್ಸಿನ ಗಂಡು ಕೂಸಿಗೆ ಜನ್ಮವಿತ್ತಳು. 'ಪುಷ್ಪದತ್ತ'ನೆಂದು ನಾಮಕರಣವೂ ಆಯಿತು. ಮುಂದೆ ಈ ಮಗುವೇ ಜಗತ್ತಿಗೆ ಸರ್ವಜ್ಞನೆಂದು ಪ್ರಸಿದ್ಧಿಯಾದನು. ಬಾಲ್ಯದಲ್ಲಿಯೆ ಅಗಾಧವಾದ ಪಾಂಡಿತ್ಯವನ್ನು ಶಿವನ ವರಪ್ರಸಾದದಿಂದ ಪಡೆದಿದ್ದನು.
    • ತಂದೆ ತಾಯಿಗಳಿಂದ ಅಗಲಿ ಪುಣ್ಯಕ್ಷೇತ್ರಗಳನ್ನೂ ಗುರುಮಠಗಳನ್ನೂ ಭೇಟಿ ಮಾಡಿ ಜ್ಞಾನಾರ್ಜನೆ ಮಾಡಿದನು. ಎಲ್ಲಾ ಶಾಸ್ತ್ರಗಳ ಜ್ಞಾನವನ್ನು ಸಂಪಾದಿಸಿದನು. ಅವನ ಜನಪ್ರಿಯ ವಚನಗಳು ಅವನ ಬಗ್ಗೆ ಸಾಕಷ್ಟು ಮಾಹಿತಿಗಳನ್ನು ಒದಗಿಸಿವೆ. ಅವನು ರಚಿಸಿದ ತ್ರಿಪದಿಗಳಿಗೆ ಲೆಕ್ಕವಿಲ್ಲ. ಅವನು ಆಶುಕವಿಯಾದ್ದರಿಂದ, ಎಷ್ಟೋ ಕವನಗಳು ಅವನ ಸ್ಮೃತಿಯಲ್ಲೇ ಉಳಿದಿರಬಹುದು. ಸುಮಾರು ೭,೦೭೦ ವಚನಗಳು ಲಭ್ಯವಾಗಿದೆಯೆಂದು ತಜ್ಞರ ಅಭಿಪ್ರಾಯ.

    ಸರ್ವಜ್ಞ - ತನ್ನ ಬಗೆಗೆ[ಬದಲಾಯಿಸಿ]

    • ೧. ಮುನ್ನ ಪೂರ್ವದಲಾನು | ಪನ್ನಗಧರನಾಳು ಎನ್ನಯ ಪೆಸರು ಪುಷ್ಪದತ್ತನು-ಎಂದು ಮನ್ನಿಪರು ನೋಡ ಸರ್ವಜ್ಞ
    • ೨. ಅಂದಿನಾ | ಪುಷ್ಪದತ್ತ || ಬಂದ ವರರುಚಿಯಾಗಿ ಮುಂ ದೇವಸಾಲೆ ಸರ್ವಜ್ಞ - ನೆಂದೆನಿಸಿ ನಿಂದವನು ತಾನೇ ಸರ್ವಜ್ಞ
    • ೩. ಮಕ್ಕಳಿಲ್ಲವು ಎಂದು | ಅಕ್ಕಮಲ್ಲಮ್ಮನು ದುಕ್ಕದಿ ಬಸವ | ಗರಿಪಲ್ಲವ | - ಕಾಶಿಯ ಮುಕ್ಕಣ್ಣಗೆ ಹೋದ ಸರ್ವಜ್ಞ
    • ೪. ಮಾಸನೂರ ಬಸವರಸ | ಕೊಸನಿಶನ ಕೇಳಲು ಕಾಶಿಯೀಶನೊಳು ಪಡೆದ ವರ - ವಧು ನಡುವೆ ಸೂಸಿತೆಂತಲು ಸರ್ವಜ್ಞ
    • ೫. ಗಂಡಾಗಬೇಕೆಂದು | ಪಿ0ಡವ ನುಂಗಲು ಲಂಡೆ ಮಾಳ್ವೆಯೊಳು ಜನಿಸಿ - ಲೋಕದೊಳು ಕಂಡುದನೆ ಪೇಳ್ವೆ ಸರ್ವಜ್ಞ
    • ೬. ಗಡಿಗೆ-ಮಡಕೆಯ ಕೊಂಡು | ಅಡುವಡಾವಿಗೆಯೊಳಗೆ ಬಿಡದೆ ಮಳೆಮೋಡ ಹಿಡಿಯಲವ - ರಿಬ್ಬರಿಗು ತಡೆ ಬಿಡಲಾಯ್ತು ಸರ್ವಜ್ಞ
    • ೭. ಅಂಬಲೂರೊಳಗೆಸೆವ | ಕುಂಬಾರಸಾಲೆಯಲಿ ಇಂದಿನ | ಕಳೆಯ | ಮಾಳಿಯೊಳು - ಬಸವರಸ ನಿಂಬಿಟ್ಟನೆನ್ನ ಸರ್ವಜ್ಞ
    • ೮. ಬಿಂದುವ ಬಿಟ್ಟು ಹೋ | ದಂದು ಬಸುರಾದಳವ ಳಂದದಿಯಷ್ಟಾದಶ ಮಾಸ - ಉದರದಲಿ ನಿಂದು ನಾ ಬೆಳೆದೆ ಸರ್ವಜ್ಞ
    • ೯. ಹೆತ್ತವಳು ಮಾಳಿ ಎನ್ನ | ನೊತ್ತಿ ತೆಗೆದವಳು ಕೇಶಿ ಕತ್ತು ಬೆನ್ನ ಹಿಡಿದವಳು ಕಾಳಿ - ಮೊರಿದೊಳೆನ್ನ ಬತ್ತಲಿರಿಸಿದಳು ಸರ್ವಜ್ಞ
    • ೧೦. ಬೆಳೆದೆನವರಿಂದೆನ್ನ | ಕಳೆಯ ಕಂಡವರೆಲ್ಲ ಮೊಳೆಯಲ್ಲಿ ಸಸಿಯನರಿವಂತೆ - ಮಾಳಿಯ ತಿಳಿದವರರೆಗು ಸರ್ವಜ್ಞ
    • ೧೧. ಗಂಡ ತನ್ನಯದೆಂಬ | ಲಂಡೆ ತನ್ನಯದೆಂಬ ಖಂಡಪರಶುವಿನ ವರಪುತ್ರ - ನಾನು ನೆರೆ ಕಂಡುದನೆ ಪೇಳ್ವೆ ಸರ್ವಜ್ಞ
    • ೧೨. ಮಾಳನು ಮಾಳಿಯು | ಕೊಳ್ ತಿಂದ ಹೆಮ್ಮೆಯಲಿ ಕೇಳೆ ನೀನಾರ ಮಗನೆಂದು - ನಾ ಶಿವನ ಮೇಳದಣುಗೆಂಬೆ ಸರ್ವಜ್ಞ
    • (ವಿಕಿಸೋರ್ಸ್)

    ತ್ರಿಪದಿಗಳು[ಬದಲಾಯಿಸಿ]

    ಒಟ್ಟು ಸುಮಾರು ೧,೦೦೦ ತ್ರಿಪದಿಗಳು ಸರ್ವಜ್ಞನ ಹೆಸರಿನಲ್ಲಿ ದಾಖಲಾಗಿವೆ. ಚರಿತ್ರಜ್ಞರ ಪ್ರಕಾರ ಇವುಗಳಲ್ಲಿ ಕೆಲವು ತ್ರಿಪದಿಗಳು ನಂತರದ ಕಾಲದಲ್ಲಿ ಬೇರೆ ಬೇರೆ ಲೇಖಕರಿಂದ ಬರೆಯಲ್ಪಟ್ಟಿರಬಹುದು. ಸರ್ವಜ್ಞನ ತ್ರಿಪದಿಗಳು ತಮ್ಮ ಸರಳತೆ ಮತ್ತು ಪ್ರಾಸಬದ್ಧತೆಯಿಂದ ಜನಪ್ರಿಯವಾಗಿವೆ. ಈ ತ್ರಿಪದಿಗಳು ಮುಖ್ಯವಾಗಿ ನೈತಿಕ, ಸಾಮಾಜಿಕ ಮತ್ತು ಧಾರ್ಮಿಕ ವಿಷಯಗಳನ್ನು ಕುರಿತವು. ಹಲವು ಒಗಟುಗಳು ಸಹ ಸರ್ವಜ್ಞನ ತ್ರಿಪದಿಗಳಲ್ಲಿ ಸೇರಿವೆ.
    ಸರ್ವಜ್ಞನ ತ್ರಿಪದಿಗಳ ಕೆಲವು ಉದಾಹರಣೆಗಳು:
    ಮಾಸೂರ ಬಸವರಸ । ಕೂಸನೀಶನ ಕೇಳೆ।
    ಕಾಶಿಯ ಅಭವನೊಳು । ಪಡೆದ ವರವದುವೇ ।
    ಸೂಸಿತೆಂತೆನಲು ಸರ್ವಜ್ಞ ॥
    ಸರ್ವಜ್ಞನೆಂಬುವನು ಗರ್ವದಿಂದಾದವನೇ?
    ಸರ್ವರೊಳು ಒಂದೊಂದು ನುಡಿಗಲಿತು
    ವಿದ್ಯೆಯ ಪರ್ವತವೆ ಆದ ಸರ್ವಜ್ಞ.
    • ಮೂರ್ಖಂಗೆ ಬುದ್ಧಿಯನು ನೂರ್ಕಾಲ ಹೇಳಿದರು
    ಗೋರ್ಕಲ್ಲಮೇಲೆ ಮಳೆಗರೆದರೆ
    ಆಕಲ್ಲು ನೀರುಕುಡಿವುದೆ ಸರ್ವಜ್ಞ?
    • ಸಾಲವನು ಕೊಂಬಾಗ ಹಾಲೋಗರುಂಡಂತೆ
    ಸಾಲಿಗರು ಕೊಂಡು ಎಳೆವಾಗ
    ಕಿಬ್ಬಡಿಯ ಕೀಲು ಮುರಿದಂತೆ ಸರ್ವಜ್ಞ.
    • ಏಳು ಕೋಟಿಯೆ ಕೋಟಿ, ಏಳು ಲಕ್ಷವೇ ಲಕ್ಷ
    ಏಳು ಸಾವಿರದ ಎಪ್ಪತ್ತು ವಚನಗಳ
    ಹೇಳಿದನು ಕೇಳ ಸರ್ವಜ್ಞ."
    ಬೆಚ್ಚನೆಯ ಮನೆಯಾಗೆ ವೆಚ್ಚಕ್ಕೆ ಹೊನ್ನಾಗೆ
    ಇಚ್ಛೆಯನರಿವ ಸತಿಯಾಗೆ ಸ್ವರ್ಗಕ್ಕೆ
    ಕಿಚ್ಚು ಹಚ್ಚೆಂದ ಸರ್ವಜ್ಞ

    ಇತರ ಮಾಹಿತಿ[ಬದಲಾಯಿಸಿ]

    ಸರ್ವಜ್ಞನನ್ನು ಕುರಿತು ಸರ್ವಜ್ಞಮೂರ್ತಿ ಎಂಬ ಕನ್ನಡ ಚಲನಚಿತ್ರವು ೧೯೬೫ರಲ್ಲಿ ತೆರೆಕಂಡಿತು.

    ಬಾಹ್ಯ ಸಂಪರ್ಕಗಳು[ಬದಲಾಯಿಸಿ]

    Wikisource-logo.svg
    ವಿಕಿಸೋರ್ಸ್ ತಾಣದಲ್ಲಿ ಈ ವಿಷಯಕ್ಕೆ ಸಂಬಂಧಪಟ್ಟ ಮೂಲಕೃತಿಗಳು ಇವೆ:

    ಉಲ್ಲೇಖಗಳು[ಬದಲಾಯಿಸಿ]


    ಅಲ್ಲಮಪ್ರಭು ೧೨ನೆಯ ಶತಮಾನದ ವಚನಕಾರರಲ್ಲಿ ಪ್ರಸಿದ್ಧನಾದವರು. ಅತ್ಯಂತ ನೇರ ನಿಷ್ಠುರವಾದಿ. ಅನೇಕ ಶಿವಶರಣ, ಶಿವಶರಣೆಯರಿಗೆ ಭಕ್ತಿ-ವೈರಾಗ್ಯವನ್ನು ಬೋಧಿಸಿದರು. ತನ್ನ ವಚನಗಳ ಮೂಲಕ ಅಂತರಂಗ, ಬಹಿರಂಗಗಳನ್ನು ಶೋಧಿಸಲೆತ್ನಿಸಿದರು.

    ಅಲ್ಲಮಪ್ರಭುವಿನ ಸಂಕ್ಷಿಪ್ತ ಪರಿಚಯ[ಬದಲಾಯಿಸಿ]

    ೧೨ನೆಯ ಶತಮಾನದ ಶಿವಶರಣರಲ್ಲಿ ಅಲ್ಲಮಪ್ರಭು ಉಚ್ಚಸ್ಥಾನದಲ್ಲಿದ್ದಾನೆ. ಈತನು ಅರಸು ಮನೆತನದಲ್ಲಿಯೆ ಹುಟ್ಟಿ ಬೆಳೆದವನಾದರೂ, ಮನೆ ಬಿಟ್ಟು ತೆರಳಿ ಅಧ್ಯಾತ್ಮಸಾಧಕನಾದನೆಂದು ಹೇಳಲಾಗುತ್ತಿದೆ. ಬಸವಣ್ಣನ ಕಲ್ಯಾಣಕ್ಕೆ ಬಂದ ಅಲ್ಲಮಪ್ರಭು ಅಲ್ಲಿ ಅನುಭವಮಂಟಪದ ಶೂನ್ಯಸಿಂಹಾಸನದ ಅಧ್ಯಕ್ಷನಾಗುತ್ತಾನೆ. ಅಲ್ಲಮನ ವಚನಚಂದ್ರಿಕೆಯಲ್ಲಿ ೧೨೯೪ ವಚನಗಳು ಲಭ್ಯವಾಗಿವೆ. ಅಲ್ಲಮಪ್ರಭು ತನ್ನ ಕೊನೆಯ ದಿನಗಳಲ್ಲಿ ಶ್ರೀಶೈಲ‍ಕ್ಕೆ ಹೋಗಿ ಅಲ್ಲಿಯ ವನದಲ್ಲಿ ಶಿವೈಕ್ಯನಾದನೆಂದು ಪ್ರತೀತಿ. ಬಸವಣ್ಣನವರ ಸಮಕಾಲೀನನಾದ ಅಲ್ಲಮಪ್ರಭುವಿನ ವಚನಗಳ ಅಂಕಿತ 'ಗುಹೇಶ್ವರ' ಅಥವಾ 'ಗೊಹೇಶ್ವರ'. ಈತನ ವಚನಗಳಲ್ಲಿ ಗಹನವಾದ ಆಧ್ಯಾತ್ಮ ಹಾಗೂ ತಾತ್ವಿಕ ವಿಚಾರಗಳಿವೆ. ಅಲ್ಲಮನ ಆಧ್ಯಾತ್ಮಿಕ ಅನುಭವಗಳ ಅಸಾಮಾನ್ಯತೆಯಿಂದ ಅವನ ವಚನಗಳನ್ನು ಅರ್ಥಮಾಡಿಕೊಳ್ಳುವುದು ಕಷ್ಟ. ಅವನದು ಬಹುಮಟ್ಟಿಗೆ ರೂಪಕ ಭಾಷೆ. ಈ ಭಾಷೆ ಅವನ ವೈಶಿಷ್ಟ್ಯವೂ ಹೌದು. ಚಾಮರಸನು ತನ್ನ ಪ್ರಭುಲಿಂಗಲೀಲೆ ಎನ್ನುವ ಕಾವ್ಯದಲ್ಲಿ ಅಲ್ಲಮಪ್ರಭುವಿನ ಐತಿಹ್ಯವನ್ನು ವರ್ಣಿಸಿದ್ದಾನೆ.

    ಹುಟ್ಟು[ಬದಲಾಯಿಸಿ]

    ಶಿವಮೊಗ್ಗೆ ಜಿಲ್ಲೆ ಶಿಕಾರಿಪುರ ತಾಲ್ಲೂಕಿನ ಬಳ್ಳಿಗಾವೆಯಲ್ಲಿ ಸುಮಾರು(೧೨ನೇ ಶತಮಾನ) ಎಂಟನೂರೈವತ್ತು ವರ್ಷಗಳಿಂದಲೂ ಇರುವ ಊರು. ಆಗಿನ ಬನವಾಸಿ-೧೨೦೦೦ ಎಂಬ ಪ್ರಾಂತ್ಯದ ಒಂದು ಹಳ್ಳಿ. ಇದೇ ಬಳ್ಳಿಗಾವೆಯ ಹತ್ತಿರವಿರುವ ಕೋಡಿಮಠ ಕಾಳಾಮುಖ ಶೈವರ ಪ್ರಮುಖ ಕೇಂದ್ರ. ಬಳ್ಳಿಗಾವೆಯೇ ಅಲ್ಲಮಪ್ರಭುವಿನ ಜನ್ಮಸ್ಥಳ. ಅಲ್ಲಮನ ಬಾಲ್ಯದ ದಿನಗಳ ಬಗ್ಗೆಯಾಗಲೀ ತಂದೆ-ತಾಯಿಗಳ ಬಗ್ಗೆಯಾಗಲೀ ಹೆಚ್ಚಿನ ವಿವರಗಳು ಲಭ್ಯವಾಗಿಲ್ಲ. ಕೆಲವು ವೀರಶೈವ ಕಾವ್ಯಗಳಲ್ಲಿ ಅಲ್ಲಮನ ತಂದೆಯ ಹೆಸರು ನಿರಹಂಕಾರನೆಂಬುವವನು. ತಾಯಿ ಸುಜ್ಞಾನದೇವಿ. ನಿರಹಂಕಾರನು ಮೂಲತಃ ಕರುವೂರಿನವನು. ಬಳ್ಳಿಗಾವೆಗೆ ಬಂದು ಅಲ್ಲಿನ ರಾಜನ ಅರಮನೆಯಲ್ಲಿ ಅಂತಃಪುರದ ಅಧಿಕಾರಿಯಾಗಿದ್ದನು.ನಿರಹಂಕಾರ ಮತ್ತು ಸುಜ್ಞಾನದೇವಿಯರಿಬ್ಬರೂ ಶಿವಭಕ್ತರಾಗಿದ್ದರು. ಅಲ್ಲಮಪ್ರಭುವು ದೇವಾಲಯದಲ್ಲಿ ಮದ್ದಳೆ ಬಾರಿಸುವವರಾಗಿದ್ದರು. ಅನಿಮಿಷ ಯ್ಯ/ ಅನಿಮಿಷಯೋಗಿ ಇವನ ಗುರುಗಳು. ಇವರು ಬಂದು ಅಲ್ಲಮನಿಗೆ ಇಷ್ಟಲಿಂಗ ದೀಕ್ಷೆಯನ್ನು ಕೊಟ್ಟರು. ನಂತರ ಬಸವಕಲ್ಯಾಣಕ್ಕೆ ಬಂದು ಆಲ್ಲಿ ಅನುಭವ ಮಂಟಪದ ಪ್ರಥಮ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸಿದರು.

    ಜೀವನ ಚರಿತ್ರೆ[ಬದಲಾಯಿಸಿ]

    ಅಲ್ಲಮನ ಜೀವನ ಚರಿತ್ರೆಯನ್ನು ನಿಖರವಾಗಿ ನಿರೂಪಿಸಲು ಸಾಧ್ಯವಾಗಲಾರದೊಷ್ಟು ಐತಿಹ್ಯಗಳು ಆ ವ್ಯಕ್ತಿತ್ವವನ್ನು ಸುತ್ತುವರಿದಿವೆ. ಅಲ್ಲಮನ ಬಗ್ಗೆ ಹದಿಮೂರನೇ ಶತಮಾನದ ಹರಿಹರಮಹಾಕವಿಯು, ಪ್ರಭುದೇವರ ರಗಳೆಯಲ್ಲಿ ಸಾಕಷ್ಟು ವಿವರಣೆಗಳನ್ನು ನೀಡಿರುವನಾದರೂ, ಅಲ್ಲಮನ ಪ್ರಭಾವಲಯದಿಂದ ಪೂರ್ಣವಾಗಿ ಹೊರ ಬಂದು , ಒಂದು ಸಹಜ ಚಿತ್ರಣವನ್ನು ಕೊಡುವಲ್ಲಿ ಹರಿಹರನಂತಹ ವಾಸ್ತವವಾದಿ ಕವಿ ಸಹ ಸೋಲುತ್ತಾನೆ. ಇನ್ನು ಚಾಮರಸನು ಅಲ್ಲಮಪ್ರಭುದೇವನನ್ನು ಈ ಲೋಕದ ಮಾನವ ಚೇತನವೆಂದು ಒಪ್ಪಿಕೊಳ್ಳುವುದೇ ಇಲ್ಲ. ಅವನು ಕೈಲಾಸದಿಂದ ಬಂದ ಶಿವನ ಚಿತ್ಕಳೆ, ಎಂದೇ ಚಿತ್ರಿಸುತ್ತಾನೆ. ಇವರಿಬ್ಬರಲ್ಲದೆ ಎಳಂದೂರು ಹರಿಹರೇಶ್ವರನೆಂಬ ಮತ್ತೊಬ್ಬ ಕವಿಯೂ ಅಲ್ಲಮಪ್ರಭುವಿನ ಬಗ್ಗೆ ಕಾವ್ಯ ರಚನೆ ಮಾಡಿದ್ದಾನೆ. ಇನ್ನು ಚಾಮರಸನು ರಚಿಸಿರುವ ಪ್ರಭುಲಿಂಗಲೀಲೆಯು ತಮಿಳು, ಮರಾಠಿ ಮುಂತಾದ ಭಾಷೆಗಳಿಗೆ ಬಲು ಹಿಂದೆಯೇ ಅನುವಾದಗೊಂಡು ಪ್ರಖ್ಯಾತವಾಗಿದ್ದಿತು .ಈ ಮಹಾಕವಿಗಳಲ್ಲದೆ ,ಅಲ್ಲಮಪ್ರಭುವಿನ ಬಗ್ಗೆ ಪ್ರಾಸಂಗಿಕವಾಗಿ ಬರೆಯದ ವೀರಶೈವ ಸಾಹಿತ್ಯವೇ ಇಲ್ಲವೆನ್ನಬಹುದು. ಇದೆಲ್ಲಕ್ಕಿಂತಲೂ ಮುಖ್ಯವಾಗಿ, ಸ್ವತಃ ಅಲ್ಲಮಪ್ರಭುವೇ ಅತನ ಕಾಲದ ಬಲು ದೊಡ್ಡ ಸಾಹಿತ್ಯಚೇತನವಾಗಿದ್ದನೆನ್ನುವುದು, ಮತ್ತು ಅವನವೇ ಆದ ಅನೇಕ ವಚನಗಳು ಉಪಲಬ್ಧವಿರುವುದು ,ಅವನ ವ್ಯಕ್ತಿತ್ವವನ್ನು ಗ್ರಹಿಸಲು ತುಂಬಾ ಉಪಯುಕ್ತ ಮಾರ್ಗವಾಗಿದೆ .ಇಡಿಯ ವಚನ ಸಾಹಿತ್ಯದಲ್ಲಿಯೇ , ಸಾಹಿತ್ಯದ ಪರಿಭಾಷೆಯನ್ನು ಸರಿಯಾದ ಮಾರ್ಗದಲ್ಲಿ ದುಡಿಸಿಕೊಂಡವರಲ್ಲಿ ಅಕ್ಕಮಹಾದೇವಿ ಮತ್ತು ಅಲ್ಲಮಪ್ರಭು ಇಬ್ಬರೂ ಅಪ್ರತಿಮರು .

    ಚಾಮರಸಪ್ರಭುಲಿಂಗಲೀಲೆ[ಬದಲಾಯಿಸಿ]

    • ಚಾಮರಸನು ಅಲ್ಲಮನ ತಂದೆ ತಾಯಿಗಳನ್ನು ನಿರಹಂಕಾರ-ಸುಜ್ಞಾನಿಗಳೆಂದು ಕರೆಯುತ್ತಾನೆ. ನಂತರ ಮಾಯಾದೇವಿಯ ತಂದೆ ತಾಯಿಗಳನ್ನು ಮಮಕಾರ-ಮೋಹಿನಿಯರೆಂದು ಕರೆಯುವುದನ್ನು ಕಂಡಾಗ ಇವೆಲ್ಲವೂ ವಾಸ್ತವವಲ್ಲದ, ಕವಿಯ ಭಾವನಾತ್ಮಕ ರೂಪಕಗಳೆನಿಸದೆ ಇರದು.
    • ಹರಿಹರ ಮಹಾಕವಿಯು ಅಲ್ಲಮನ ತಂದೆ ತಾಯಿಗಳ ಹೆಸರುಗಳನ್ನೆ ಪ್ರಸ್ತಾಪಿಸದೆ ಅಲ್ಲಮನ ತಂದೆಯು ಬಳ್ಳಿಗಾವಿಯ ನಾಗವಾಸಾಧಿಪನಾಗಿದ್ದನೆಂದು ವಿವರಿಸುವನು. ನಾಗವಾಸಾಧಿಪನೆಂದರೆ ಅರಮನೆಯ ಅಂತಃಪುರದ ಸಂಗೀತ, ನರ್ತನಗಳ ವಲಯದ ಅಧಿಕಾರಿಯೆಂದೇ ಅರ್ಥ ಬರುವುದರಿಂದ, ಅಲ್ಲಮನು ಒಬ್ಬ ಕಲಾವಿದನ ಮಗನಾಗಿದ್ದನೆಂದು ಭಾವಿಸಬಹುದು ಮತ್ತು ಅಂದಿನ ಕಾಲಮಾನದಲ್ಲಿ ನಟರಿಗೆ, ನಟುವಾಂಗದ ವೃತ್ತಿಯವರಿಗೆ ಸಾಮಾಜಿಕ ಮನ್ನಣೆಯೂ ಇರಲಿಲ್ಲವೆಂಬುದು ಗಮನಾರ್ಹವಾದುದು.
    • ಅಲ್ಲಮನ ಯೌವ್ವನ ಕಾಲದ ಪ್ರೇಮ, ಕಾಮ, ವ್ಯಾಮೋಹಗಳ ಚಿತ್ರಗಳನ್ನು ಹರಿಹರಮಹಾಕವಿಯೂ , ಚಾಮರಸನೂ ಕಟ್ಟಿ ಕೊಡುವ ರೀತಿಗಳು ತುಂಬಾ ವಿಭಿನ್ನವಾಗಿವೆ. ಅಲ್ಲಮನು ಸಾಕ್ಷಾತ್ ಶಿವಾಂಶ ಸಂಭೂತನಾದುದರಿಂದ, ಕಾಮಾದಿ ಅರಿಷಡ್ವರ್ಗಗಳು ಅವನನ್ನು ಸೋಂಕುವುದೇ ಇಲ್ಲ. ಬನವಾಸೆಯ ಮಧುಕೇಶ್ವರ ಮಂದಿರದಲ್ಲಿ ಶಿವನೆದುರಿನಲ್ಲಿ ಮದ್ದಳೆಯ ಮಹಾ ಯೋಗದಲ್ಲಿ ತಲ್ಲೀನನಾಗಿದ್ದ ಅಲ್ಲಮನನ್ನು ಆ ಊರಿನ ರಾಜನ ಮಗಳು, ಮಾಯಾದೇವಿ ಕಂಡು ವಿಭ್ರಾಂತಿಗೊಳಗಾಗುತ್ತಾಳೆ. ಅವನನ್ನು ಮೋಹಿಸಿ, ಕಾಮಿಸುತ್ತಾಳೆ. ಇಲ್ಲಿ ಚಾಮರಸನ ಪ್ರಕಾರ ಪಾರ್ವತೀ ದೇವಿಯ ಮಾಯೆಯ ಅಂಶವೇ ಅಲ್ಲಮನನ್ನು ಜಯಿಸಲು ಭೂಲೋಕದಲ್ಲಿ ಮಾಯಾದೇವಿಯಾಗಿ, ಮಮಕಾರ, ಮೋಹಿನಿಯರ ಮಗಳಾಗಿ ಜನಿಸಿರುತ್ತಾಳೆ. ಇದನ್ನು ಅರಿತ ಅಲ್ಲಮನು, ಅಂತರ್ಧಾನನಾಗಿ, ಅರಣ್ಯವನ್ನು ಸೇರುತ್ತಾನೆ. ಹಿಂಬಾಲಿಸಿದ ಮಾಯೆಗೆ, ಪರವಶನಾಗದೆ ಶಾಶ್ವತ ನಿಲುವನ್ನು ವಿವರಿಸುತ್ತಾನೆ. ಹೀಗೆ ಇಬ್ಬರು ಮಹಾ ಕವಿಗಳು ಅಲ್ಲಮನನ್ನು ವಿಭಿನ್ನವಾಗಿ ಕಟ್ಟಿ ಕೊಡುತ್ತಾರೆ.
    • ಹರಿಹರ, ಚಾಮರಸರ ಕಾವ್ಯಗಳ ನಾಯಕನಾಗಿ ತೋರಿ ಬರುವ ಅಲ್ಲಮಪ್ರಭುವು, ನಂತರ ಶೂನ್ಯ ಸಂಪಾದನೆಕಾರರ ಕೃತಿಯಲ್ಲಿ ಅಸಾಮಾನ್ಯ ವ್ಯಕ್ತಿತ್ವದವನಾಗಿ ಚಿತ್ರಿತನಾಗಿದ್ದಾನೆ.
    • ಅಲ್ಲಮನ ವಚನಗಳು ಮತ್ತು ಸಮಕಾಲೀನ ಶರಣರ ವಚನಗಳನ್ನೇ, ರತ್ನಮಾಲೆಯಂತೆ ಕೋದು ,ಸಂದರ್ಭಕ್ಕೆ ಅನುಗುಣವಾಗಿ ಕೆಲವು ವಚನಗಳನ್ನು ಸೇರಿಸಿ, ಶಿವಗಣ ಪ್ರಸಾದಿ ಮಹದೇವಯ್ಯಗಳು ಮೊದಲ ಶೂನ್ಯ ಸಂಪಾದನೆಯನ್ನು ರಚಿಸಿದರು.
    • ನಂತರ ಗೂಳೂರು ಸಿದ್ದವೀರಣ್ಣೊಡೆಯರುಮೂರನೆಯದಾಗಿ ಗುಮ್ಮಳಾಪುರದ ಸಿದ್ದಲಿಂಗದೇವರು ಅಂತಿಮವಾಗಿ ಕೆಂಚವೀರಣ್ಣೊಡೆಯರುಹೀಗೆ ನಾಲ್ಕು ಶೂನ್ಯ ಸಂಪಾದನೆಗಳು ಅಲ್ಲಮ ಪ್ರಭುವಿನ ಜೀವನ ಚಿತ್ರಣ ನೀಡುವಲ್ಲಿ ಇಂದು ನೆರವಾಗಿವೆ.

    ಹರಿಹರ ಮಹಾಕವಿಯ ಪ್ರಭುದೇವರ ರಗಳೆ[ಬದಲಾಯಿಸಿ]

    • ಅತ್ಯಂತ ಸುಂದರನೂ, ಅಪ್ರತಿಮ ಮದ್ದಲಿಗನೂ, ಆಕರ್ಷಕ ಯುವಕನೂ ಆಗಿದ್ದ ಅಲ್ಲಮನನ್ನು ಶಿವ ದೇವಾಲಯದಲ್ಲಿ, ಮದ್ದಳೆ ಬಾರಿಸುತ್ತಿರುವ ಸಮಯದಲ್ಲಿ ಕಾಮಲತೆಯು ಆಕಸ್ಮಿಕವಾಗಿ ಸಂಧಿಸುತ್ತಾಳೆ. ಅವನನ್ನು ಕಂಡ ಕೂಡಲೇ ಅವನಲ್ಲಿ ಅನುರಕ್ತಳಾಗಿ ; ಕಾಮವಶಳಾಗಿ ಮೂರ್ಛಿತಳಾಗುತ್ತಾಳೆ. ಅಲ್ಲಮನ ಅವಸ್ಥೆಯೂ ಸಹ ಅದೇ ಪರಿಯಾಗುತ್ತದೆ .ಕಾಮಲತೆಯಂತಹ ಮಿಂಚಿನ ಮೋಹನಾಂಗಿಯನ್ನು ಕಂಡು, ಅಲ್ಲಮನು ವಿವಶನಾಗುತ್ತಾನೆ. ಇವರಿಬ್ಬರ ಸ್ಥಿತಿಯನ್ನು ಮನಗಂಡ ಸಖಿಯರು ಇವರ ಮಿಲನಕ್ಕೆ ಅವಕಾಶ ಕಲ್ಪಿಸುತ್ತಾರೆ . ಅಲ್ಲಿಂದ ಅಲ್ಲಮ ಮತ್ತು ಕಾಮಲತೆಯರು ಇಹದ ಸಮಸ್ತವನ್ನೂ ಮರೆತು, ಏಕ ದೇಹಿಗಳಂತೆ, ಕಾಲ ದೇಶಾತೀತರಾಗಿ, ಲೋಕದ ಮರವೆಯಲ್ಲಿ ಕಾಲ ಕಳೆಯುತ್ತಿರುವಾಗ, ಕಾಮಲತೆಯು ಜ್ವರ ಪೀಡಿತೆಯಾಗಿ ಆಕಸ್ಮಿಕವಾಗಿ ಮರಣ ಹೊಂದುತ್ತಾಳೆ. ಇದರಿಂದ ವಿಚಲಿತನಾದ ಅಲ್ಲಮನು ವಿರಹ ಜ್ವಾಲೆಯಲ್ಲಿ ಬೇಯುತ್ತಾ, ಮರುಳನಂತೆ ಅಲೆಯುತ್ತಾ, ತಿರುಗುತ್ತಿರುವಾಗ, ಊರ ಹೊರಗೆ ಹೂತು ಹೋದ ಪ್ರಾಚೀನ ಶಿವಾಲಯವೊಂದರ ಶಿಖರದ ತುದಿಯು, ಕಾಲಬೆರಳ ತುದಿಗೆ ತಗುಲಿ, ಕುತೂಹಲಗೊಂಡು ಅಗೆಯ ತೊಡಗಿದಾಗ ಇಡಿ ಶಿವಾಲಯ ಗೋಚರವಾಗುತ್ತದೆ. ಅದರೊಳಗೆ ಪ್ರವೇಶಿಸಿ ದಾಗ ಅಲ್ಲಿ ಶಿವಯೋಗದಲ್ಲಿದ್ದ ಅನಿಮಿಷ ದೇವನ ದರ್ಶನವಾಗಿ, ಅವನ ಕೈಯ್ಯಲ್ಲಿದ್ದ ಅತ್ಮಲಿಂಗವು ಅಲ್ಲಮಪ್ರಭುವಿನ ಕೈಗೆ ಬಂದು ಸೇರುತ್ತದೆ. ಇದರಿಂದಾಗಿ ಇಬ್ಬರ ನಡುವೆ ಗುರು ಶಿಷ್ಯ ಸಂಬಂಧವೇರ್ಪಡುತ್ತದೆ. ತಕ್ಷಣ ಅನಿಮಿಷದೇವನು ಶಿವಾಧೀನನಾಗುತ್ತಾನೆ. ನಂತರ ಅಲ್ಲಮನ ಎಲ್ಲ ಮೋಹ ಮಮತೆಗಳು ಅಳಿದು, ಜಗತ್ತಿನ ನಶ್ವರತೆ; ವಿಶ್ವಕಾರಣದ ಶಾಶ್ವತತೆ ಅರಿವಿಗೆ ಬಂದು ಅನಂತ ಜ್ಞಾನಿಯಾಗುತ್ತಾನೆ. ಇದು ಹರಿಹರ ಮಹಾಕವಿಯು ಕಟ್ಟಿಕೊಡುವ ಅಲ್ಲಮನ ಪರಿವರ್ತನೆಯ ಚಿತ್ರಣ.

    ಎಚ್.ತಿಪ್ಪೇರುದ್ರಸ್ವಾಮಿಯವರ ಪರಿಪೂರ್ಣದೆಡೆಗೆ[ಬದಲಾಯಿಸಿ]

    • ಇಪ್ಪತ್ತನೆಯ ಶತಮಾನದಲ್ಲಿ ಅಲ್ಲಮಪ್ರಭುವಿನ ಚಿತ್ರಣವನ್ನು ಪುನರ್ರೂಪಿಸುವಲ್ಲಿ ಎಚ್.ತಿಪ್ಪೇರುದ್ರಸ್ವಾಮಿಯವರು ಪರಿಪೂರ್ಣದೆಡೆಗೆ ಕಾದಂಬರಿಯ ಮೂಲಕ ಅನನ್ಯವಾಗಿ ಪ್ರಯತ್ನಿಸಿದ್ದಾರೆ.
    • ಬಿ.ಪುಟ್ಟಸ್ವಾಮಯ್ಯನವರು ಅಲ್ಲಮಪ್ರಭುವಿನ ಬಗೆಗೆ ಅದೇ ಹೆಸರಿನ ಕಾದಂಬರಿಯನ್ನು ರಚಿಸಿರುವುದಲ್ಲದೆ, ಹನ್ನೆರಡನೆಯ ಶತಮಾನದ, ರಾಜಕೀಯ, ಆರ್ಥಿಕ, ಸಾಮಾಜಿಕ, ಧಾರ್ಮಿಕ,ಹೀಗೆ ಸಮಸ್ತ ಮುಖಗಳನ್ನೊಳಗೊಂಡ ಆರು ಕಾದಂಬರಿಗಳಲ್ಲಿ, ಅಲ್ಲಮನನ್ನು ಅತ್ಯಂತ ವಿಶಿಷ್ಟವಾಗಿ ಚಿತ್ರಿಸುತ್ತಾರೆ.
    • ಹೀಗೆ ಎಷ್ಟೆಲ್ಲಾ ಮಹನೀಯರಿಂದ ಪೂಜನೀಯನಾದ ಅಲ್ಲಮಪ್ರಭುವಿನ ವ್ಯಕ್ತಿತ್ವ ಮತ್ತು ಜೀವನ ವಿವರವು ಕಡೆಗೂ ನಿಗೂಢವೇ ಆಗಿ ಉಳಿತ್ತದೆ . ಲಭ್ಯವಿರುವ ಅವನ ವಚನಗಳಂತೆ, ಅವನ ವ್ಯಕ್ತಿತ್ವ ಎಂದು ಊಹಿಸಬಹುದು.[೧][೨][೩]

    ವಚನಗಳು[ಬದಲಾಯಿಸಿ]

    ಹೆಣ್ಣಿಗಾಗಿ ಸತ್ತವರು ಕೋಟಿ
    ಮಣ್ಣಿಗಾಗಿ ಸತ್ತವರು ಕೋಟಿ
    ಹೊನ್ನಿಗಾಗಿ ಸತ್ತವರು ಕೋಟಿ
    ಗುಹೇಶ್ವರಾ
    ನಿಮಗಾಗಿ ಸತ್ತವರನಾರನೂ ಕಾಣೆ
    ಇಲ್ಲಿ ಅಲ್ಲಮ ಪ್ರಭುಗಳು, ಹೆಣ್ಣಿಗಾಗಿ ನಡೆದ ರಾಮ-ರಾವಣರ ಯುದ್ಧ, ಮಣ್ಣಿಗಾಗಿ ನೆಡೆದ ಕುರುಕ್ಷೇತ್ರ ಯುದ್ಧ, ಹೊನ್ನಿಗಾಗಿ ನೆಡೆದ ಅಶೋಕನ ಕಳಿಂಗ ಯುದ್ಧವನ್ನು ಉದಾಹರಣೆ ನೀಡಿ, ದೇವರಿಗಾಗಿ ಯಾರೂ ಜೀವ ನೀಡಲು ಸಿದ್ಧರಿಲ್ಲದ, ಮಾನವನ ಸ್ವಾರ್ಥವನ್ನು ಎತ್ತಿ ತೋರಿಸಿದ್ದಾರೆ.

    "ಏನೂ ಏನೂ ಇಲ್ಲದ ಬಯಲೊಳಗೊಂದು
    ಬಗೆಗೊಳಗಾದ ಬಣ್ಣ ತಲೆದೋರಿತ್ತು.
    ಆ ಬಯಲನಾ ಬಣ್ಣ ಶೃಂಗರಿಸಲು ಬಯಲು ಸ್ವರೂಪುಗೊಂಡಿತ್ತು.
    ಅಂತಪ್ಪ ಸ್ವರೂಪಿನ ಬೆಡಗು ತಾನೆ
    ನಮ್ಮ ಗುಹೇಶ್ವರ ಲಿಂಗದ ಪ್ರಥಮಭಿತ್ತಿ."
    ಎಂದು ಅಲ್ಲಮಪ್ರಭುದೇವರು ಹೇಳುವಲ್ಲಿ ವಿಶ್ವದ ವಿರಾಟ್ ಸ್ವರೂಪದ ಕಲ್ಪನೆ ಇದೆ. ಚೈತನ್ಯವು ವಸ್ತುವಾಗಿ ರೂಪುಗೊಳ್ಳುವ ಕ್ರಮವಿದೆ. ಇದೇ ವಸ್ತು ರಹಸ್ಯ.

    ಆದಿಯಾಧಾರವಿಲ್ಲದಂದು
    ಹಮ್ಮು ಬಿಮ್ಮುಗಳಿಲ್ಲದಂದು
    ಸುರಾಳನಿರಾಳವಿಲ್ಲದಂದು
    ಸಚರಾಚರವೆಲ್ಲ ರಚನೆಗೆ ಬಾರದಂದು
    ಗುಹೇಶ್ವರ, ನಿಮ್ಮ ಶರಣನುದಯಿಸಿದನಂದು

    ಕಲ್ಲ ಮನೆಯ ಮಾಡಿ
    ಕಲ್ಲ ದೇವರ ಮಾಡಿ
    ಆ ಕಲ್ಲು ಕಲ್ಲ ಮೇಲೆ ಕೆಡೆದರೆ
    ದೇವರೆತ್ತ ಹೋದರೋ?
    ಲಿಂಗಪ್ರತಿಷ್ಠೆಯ ಮಾಡಿದವಂಗೆ
    ನಾಕನರಕ ಗುಹೇಶ್ವರ.

    ಹೊನ್ನು ಮಾಯೆಯೆಂಬರು
    ಹೊನ್ನು ಮಾಯೆಯಲ್ಲ.
    ಹೆಣ್ಣು ಮಾಯೆಯೆಂಬರು
    ಹೆಣ್ಣು ಮಾಯೆಯಲ್ಲ.
    ಮಣ್ಣು ಮಾಯೆಯೆಂಬರು
    ಮಣ್ಣು ಮಾಯೆಯಲ್ಲ.
    ಮನದ ಮುಂದಣ ಆಶೆಯೇ ಮಾಯೆ ಕಾಣಾ
    ಗುಹೇಶ್ವರ

    ಅಲ್ಲಮನ ತತ್ತ್ವ ದೃಷ್ಠಿ[ಬದಲಾಯಿಸಿ]

      ಅಲ್ಲಮ ತನ್ನ ಬೆಡಗಿನ ವಚನದಲ್ಲಿ ತತ್ತ್ವಜ್ಞಾನದ ಒಳಗುಟ್ಟನ್ನು ಹೀಗೆ ಹೇಳಿದ್ದಾನೆ:
      ಊರದ ಚೇಳಿನ ಏರದ ಬೇನೆಯಲ್ಲಿ, ಮೂರುಲೋಕವೆಲ್ಲಾ ನರಳಿತ್ತು!
      ಹುಟ್ಟದ ಗಿಡುವಿನ ಬಿಟ್ಟ ಎಲೆಯ ತಂದು ಮುಟ್ಟದೆ ಹೂಸಲು;
      ಮಾಬುದು ಗುಹೇಶ್ವರಾ.
      ಅರ್ಥ:- ಕಚ್ಚದಿರುವ (ಇಲ್ಲದ)ಚೇಳಿನ ಆಗದೇ ಇರುವ ನೋವಿನಿಂದ (ಇಲ್ಲದ ನೋವಿನಿಂದ) ಮೂರು ಲೋಕವೂ ನರಳಿತು! ಹುಟ್ಟದೇ ಇರುವ ಗಿಡದ ಎಲೆಯನ್ನು ತಂದು, ಅದನ್ನು ಮುಟ್ಟದೆ ಹಚ್ಚಲು ಗಾಯ/ನೋವು ಮಾಯಿತು(ವಾಸಿಯಾಯಿತು). ಅಂದರೆ, ಚೇಳೇ ಇರಲಿಲ್ಲ, ಆದರೆ ಕಚ್ಚಿತೆಂಬ ಬ್ರಮೆ.ಭ್ರಮೆಯಿಂದ ನೋವಿಲ್ಲದಿದ್ದರೂ ಭ್ರಮೆಯಿಂದ ನೋವು; ಈ ನೋವಿಗೆ 'ಇಲ್ಲ ಇಲ್ಲ' ಎಂಬುದೇ ಮದ್ದು! (ಅದ್ವೈತ ಸಿದ್ಧಾಂತದ ಸಂಕ್ಷಿಪ್ತ ನಿರೂಪಣೆ)[೪] (ಅದಕ್ಕೇ ಅಲ್ಲಮ ಪ್ರಭು ತನ್ನ ಹೆಸರನ್ನೇ "ಅಲ್ಲ- ಮ" ಎಂದು ಇಟ್ಟುಕೊಂಡಿದ್ದಾನೆ)

      ಬೆಡಗಿನ ವಚನಗಳು[ಬದಲಾಯಿಸಿ]

      ಬೆಡಗಿನ ವಚನಗಳು : +(ಅಲ್ಲಮನ ಬೆಡಗಿನ ವಚನಗಳು):ಎಂ. ಜೀವನ :

      ಗ್ರಂಥ ನೆರವು[ಬದಲಾಯಿಸಿ]

      • ಹರಿಹರಮಹಾಕವಿಯ- "ಪ್ರಭುದೇವರ ರಗಳೆ"
      • ಚಾಮರಸನ - "ಪ್ರಭುಲಿಂಗಲೀಲೆ"
      • ಎಚ್.ತಿಪ್ಪೇರುದ್ರಸ್ವಾಮಿ - "ಪರಿಪೂರ್ಣದೆಡೆಗೆ"